CM Siddaramaiah meets with representatives of Bharat Scouts and Guides

ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್ ಪ್ರತಿನಿಧಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ.. ಮಹತ್ವದ ಸೂಚನೆ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಇಂದು ಅಧಿಕೃತ ನಿವಾಸ ಕಾವೇರಿಯಲ್ಲಿ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಲಾಗಿದ್ದು, ಹಲವು ಸೂಚನೆ ನೀಡಿದರು. ಈ ಕುರಿತಂತೆ ಪ್ರಮುಖವಾದ ಮುಖ್ಯಾಂಶಗಳು ಇಲ್ಲಿವೆ.

• ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಸ್ಕೌಟ್ಸ್-ಗೈಡ್ಸ್/ ರೋವರ್ಸ್-ರೇಂಜರ್ಸ್ಗಳಿಗೆ ವಿಶೇಷ ಪ್ರೋತ್ಸಾಹ ನೀಡುವ ಸಲುವಾಗಿ ಮುಖ್ಯಮಂತ್ರಿಗಳ ಪಾರಿತೋಷಕ ಪದಕ ನೀಡುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.

• ರಾಜ್ಯದಲ್ಲಿ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್ ಚಟುವಟಿಕೆಗಳನ್ನು ಇನ್ನಷ್ಟು ಉತ್ತೇಜಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲು ಸಂಸ್ಥೆಯ ವತಿಯಿಂದ ಮನವಿ ಸಲ್ಲಿಸಲಾಯಿತು.

• ವೈದ್ಯಕೀಯ, ಇಂಜಿನಿಯರಿಂಗ್‌ ಸೇರಿದಂತೆ ಉನ್ನತ ಶಿಕ್ಷಣದ ಕೋರ್ಸ್ಗಳಲ್ಲಿ ಪ್ರವೇಶಕ್ಕಾಗಿ ಸ್ಕೌಟ್ಸ್-ಗೈಡ್ಸ್/ ರೋವರ್ಸ್-ರೇಂಜರ್ಸ್ಗಳಿಗೆ ಮೀಸಲಿರಿಸಿರುವ ಸೀಟುಗಳನ್ನು ಹೆಚ್ಚಿಸಬೇಕು.

• ಜಿಲ್ಲಾ ಸ್ಕೌಟ್ಸ್‌ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ʻಜಿಲ್ಲಾ ಸಂಘಟನಾ ಶಿಕ್ಷಕರಾಗಿ ನಿಯೋಜಿಸಲು ಕ್ರಮ ಕೈಗೊಳ್ಳಬೇಕು.

• ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್ ಘಟಕಗಳನ್ನು ಪ್ರಾರಂಭಿಸಲು ಸೂಚನೆ ನೀಡಬೇಕು.

• ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿನ ಅರ್ಹ ಕಬ್-ಬುಲ್ಬುಲ್ಸ್‌ ಮತ್ತು ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್ ಸಮವಸ್ತ್ರಗಳನ್ನು ಉಚಿತವಾಗಿ ವಿತರಿಸಲು ಸಂಸ್ಥೆಗೆ ಪ್ರತಿ ವರ್ಷ ವಿಶೇಷ ಅನುದಾನ ಒದಗಿಸಲು ಮನವಿ ಮಾಡಲಾಯಿತು.

• ಈ ವರ್ಷ 8ಲಕ್ಷ ಮಕ್ಕಳನ್ನು ಸಂಸ್ಥೆಯ ಸದಸ್ಯರನ್ನಾಗಿ ಸೇರ್ಪಡೆ ಮಾಡಲಾಗಿದೆ ಎಂದು ಮಾಹಿತಿ ನೀಡಲಾಯಿತು.

• ಸಂಸ್ಥೆಯ ಎಲ್ಲಾ ಮನವಿಗಳನ್ನು ಸಕರಾತ್ಮಕವಾಗಿ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್, ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೆಜ್‌ ಮತ್ತಿತರರು ಉಪಸ್ಥಿತರಿದ್ದರು.

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!