ಬೆಂಗಳೂರು: ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಚೇರಿಯಲ್ಲಿ ನಡೆದ ನೇತ್ರದಾನ ಶಿಬಿರದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ನೇತ್ರದಾನ ಮಾಡಿದರು.

ನೇತ್ರದಾನ ಪತ್ರಕ್ಕೆ ಸಹಿ ಹಾಕಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
“ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ನಮ್ಮ ಯುವ ಕಾಂಗ್ರೆಸ್ ವತಿಯಿಂದ ನೇತ್ರದಾನ ಶಿಬಿರ ಹಮ್ಮಿಕೊಂಡಿದ್ದಾರೆ. ನಾನು ಕೂಡ ನನ್ನ ನೇತ್ರ ದಾನ ಮಾಡಿದ್ದೇನೆ” ಎಂದು ತಿಳಿಸಿದರು.
