ಕುಮಾರಸ್ವಾಮಿ ಸರ್ಕಾರ ಬರುವುದು ಇಲ್ಲ, ಗೆಲ್ಲುವುದೂ ಇಲ್ಲ: ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು

Enough with the hit and run, put the documents against me before the people: DK Shivakumar challenges H.D. Kumaraswamy

ಬೆಂಗಳೂರು: “ಕುಮಾಸ್ವಾಮಿ (Kumaraswamy) ಅವರ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಅವರ ಸರ್ಕಾರ ಬರುವುದೂ ಇಲ್ಲ, ಗೆಲ್ಲುವುದೂ ಇಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ತಿರುಗೇಟು ನೀಡಿದರು.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಡಿಕೆ ಶಿವಕುಮಾರ್ ಬಳಿ ಬಟ್ಟೆ ಹೊಲಿಸಿಕೊಳ್ಳುವಷ್ಟು ದರಿದ್ರ ನನಗಿಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು.

“ಕುಮಾರಸ್ವಾಮಿ ಅವರು ಏನು ಹೇಳಿದ್ದರು? ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ ಬರುತ್ತದೆ, ಎಲ್ಲ ತಯಾರಾಗಿ ಎಂದು ಹೇಳಿದ್ದರು. ಆಗ ಅದಕ್ಕೆ ನಾನು ಉಡುಗೊರೆ ನೀಡುತ್ತೇನೆ ಎಂದು ಹೇಳಿದ್ದೆ” ಎಂದು ವ್ಯಂಗ್ಯವಾಡಿದರು.

ಯಾರ ಅವಕಾಶವನ್ನು ನಾವು ಕಿತ್ತುಕೊಂಡಿಲ್ಲ

“ಗ್ರಾಮೀಣ ಭಾಗದಲ್ಲಿ ಅಲ್ಪಸಂಖ್ಯಾತ ಫಲಾನುಭವಿಗಳು ಕಡಿಮೆ ಇರುವ ಕಾರಣಕ್ಕೆ ವಸತಿ ಸಚಿವರು ಮನೆ ಹಂಚಿಕೆ ಮೀಸಲಾತಿಯನ್ನು ನಗರ ಪ್ರದೇಶಕ್ಕೆ ವರ್ಗಾವಣೆ ಮಾಡಿದ್ದಾರೆ. ನಾವು ಯಾರ ಸೌಲಭ್ಯಗಳನ್ನು ಕಿತ್ತು ಅಲ್ಪಸಂಖ್ಯಾತರಿಗೆ ನೀಡುತ್ತಿಲ್ಲ” ಎಂದು ಡಿಸಿಎಂ ಸ್ಪಷ್ಟನೆ ನೀಡಿದರು.

“ಸಾಚಾರ್ ವರದಿಗೆ ಅನುಗುಣವಾಗಿ ಗ್ರಾಮೀಣ ಪ್ರದೇಶಕ್ಕೂ ಶೇ 10 ರಷ್ಟು ಮೀಸಲಾತಿ ನೀಡಲಾಗುತ್ತಿತು. ಆದರೆ ಗ್ರಾಮೀಣ ಭಾಗದಲ್ಲಿ ಕಡಿಮೆ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ಇರುವ ಕಾರಣಕ್ಕೆ ಸೌಲಭ್ಯ ರದ್ದಾಗುತ್ತಿತ್ತು. ನಾವೇನೂ ಹೊಸದಾಗಿ ಮೀಸಲಾತಿ ಸೃಷ್ಟಿ ಮಾಡಿ ನೀಡುತ್ತಿಲ್ಲ. ಪರಿಶಿಷ್ಟ ವರ್ಗ ಮತ್ತು ಜಾತಿಗಳಲ್ಲಿ ಶೇ 90 ರಷ್ಟು ಜನರಿಗೆ ಅನುಕೂಲ ಮಾಡಿಕೊಡಲಾಗಿದೆ. ಹೊಸದಾಗಿ ಮನೆ ಬೇಕಾಗಿರುವವರು ಅಡಿಪಾಯ ಹಾಕಿದರೆ ಮಾತ್ರ ಅವರಿಗೆ ಅನುಕೂಲ ಮಾಡಲು ಸಾಧ್ಯ. ಅಡಿಪಾಯ ಹಾಕದೆ ಹಣ ನೀಡಲು ಸಾಧ್ಯವಿಲ್ಲ” ಎಂದರು.

“ವಿಪಕ್ಷಗಳು ರಾಜಕೀಯ ಮಾಡುತ್ತವೆ, ಮಾಡಲಿ. ಸರ್ಕಾರ ಮನೆಗಳನ್ನು ಕಟ್ಟಿ ನಷ್ಟ ಮಾಡಿಕೊಳ್ಳಬೇಕೆ? ಪರಿಶಿಷ್ಟರಿಗೆ ಅವಕಾಶ ಮಾಡಿಕೊಡಲಾಗಿತ್ತು, ಆದರೆ ಅವರ ಕೋಟಾ ಮುಗಿದು ಹೋಯಿತು. ನಂತರ ಅದನ್ನು ಹಿಂದುಳಿದ, ಸಾಮಾನ್ಯ ವರ್ಗಗಳಿಗೆ ಬಳಸಿಕೊಂಡಿದ್ದೇವೆ. ನಮ್ಮದು ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎನ್ನುವ ಸರ್ಕಾರ” ಎಂದರು.

“ನಾವೇನು ಕೆಲಸ ಮಾಡಿದ್ದೇವೆ, ಅವರು ಏನು ಮಾಡಿದ್ದಾರೆ ಎಂದು ಸದನದಲ್ಲಿ ಚರ್ಚೆ ಮಾಡಲು ಹೇಳಿ” ಎಂದು ತಿಳಿಸಿದರು.

ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ ಕೊಟ್ಟರೇ ಮಾತ್ರ ಮನೆ ಹಂಚಿಕೆ ಎನ್ನುವ ಶಾಸಕ ಬಿ.ಆರ್. ಪಾಟೀಲ್ ಅವರ ಆರೋಪದ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನನಗೆ ಮಾಹಿತಿ ಇಲ್ಲ” ಎಂದು ಹೇಳಿದರು.

ರಾಜಕೀಯ

ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಎತ್ತಿನ ಹೊಳೆ ನೀರು ಬಂದಿಲ್ಲ: ಹೋರಾಟ ರೂಪಿಸಿಲು ಬಸವರಾಜ ಬೊಮ್ಮಾಯಿ ಕರೆ

ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಎತ್ತಿನ ಹೊಳೆ ನೀರು ಬಂದಿಲ್ಲ: ಹೋರಾಟ ರೂಪಿಸಿಲು ಬಸವರಾಜ

ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಎತ್ತಿನ ಹೊಳೆ ನೀರು ಬಂದಿಲ್ಲ, ಕೊರಟಗೆರೆಯಲ್ಲಿ ಕಾಂಗ್ರೆಸ್ ನವರು ವಿರೋಧ ಮಾಡಿದ್ದರಿಂದ ನೀರಿನ ಸಂಗ್ರಹಕ್ಕೆ ಅವಕಾಶ ಇಲ್ಲ: ಬಸವರಾಜ ಬೊಮ್ಮಾಯಿ (Basavaraja Bommai)

[ccc_my_favorite_select_button post_id="121723"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]