Enough with the hit and run, put the documents against me before the people: DK Shivakumar challenges H.D. Kumaraswamy

ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ; ಹೆಚ್‌ಡಿ ಕುಮಾರಸ್ವಾಮಿ ಗರಂ

ಬೆಂಗಳೂರು: ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮೀಶನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ನೇರ ಆರೋಪ ಮಾಡಿದರು.

ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ್ (Bar Patila) ಹೇಳಿರುವ ಮಾತುಗಳೇ ಸಾಕ್ಷಿ. ಅವರು ಹೇಳಿರುವ ಮಾತುಗಳು ಮಾಧ್ಯಮಗಳಲ್ಲಿ ವರದಿಯಾಗಿವೆ.

ವಸತಿ ಇಲಾಖೆಯಲ್ಲಿ ಕಮಿಷನ್ ಹಾವಳಿ ಎಷ್ಟಿದೆ ಎಂಬ ವಿಚಾರವಾಗಿ ಆಡಿಯೋ ವೈರಲ್ ಆಗಿದೆ. ಇದರಿಂದ ನನಗೆ ಯಾವುದೇ ಆಶ್ಚರ್ಯ ಆಗಿಲ್ಲ ಎಂದು ಅವರು ಹೇಳಿದರು.

ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ ಉತ್ತರಿಸಿದ ಅವರು; ಓ ಅದಾ..? ನಿಮಗೆ ಅಚ್ಚರಿನಾ? ಅಚ್ಚರಿನಾ? ಅದು ನಿರಂತರವಾಗಿ ನಡೆಯುತ್ತಿದೆ. ಸೈಟ್ ಕೊಡಬೇಕಾದರೆ, ದುಡ್ಡು ಕೊಡಬೇಕಾದರೆ ಕಮಿಷನ್ ನಡೆಯುತ್ತಿದೆ. ಸರ್ಕಾರದ ಎಲ್ಲ ಇಲಾಖೆಗಳಲ್ಲಿಯೂ ಇದು ನಡೆಯುತ್ತಿದೆ ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ಕೃಷ್ಣ ಬೇರೇಗೌಡ ಏನು ಹೇಳಿದ್ದಾರೆ ಎಂಬುದನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಯಾವ ಯಾವುದಕ್ಕೆ ಎಷ್ಟೆಷ್ಟು ರೇಟ್ ಫಿಕ್ಸ್ ಮಾಡಿದ್ದಾರೆ ಎಂದು ಅವರು ನೇರವಾಗಿ ಹೇಳಿದ್ದಾರೆ. ತಮ್ಮ ಇಲ್ಲಾಖೆಗಳಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ಆಯಾ ಇಲಾಖೆಯ ಮಂತ್ರಿಗಳಿಗೆ ಗೊತ್ತಿದೆ.

ಕೃಷ್ಣಭೈರೇಗೌಡರ (Krishna Bhairegowda) ಇಲಾಖೆಯಲ್ಲಿ ಯಾವ ರೀತಿ ಕೆಲಸ ನಡೆಯುತ್ತಿದೆ ಎಂದು ಅವರೇ ಹೇಳಿದ್ದಾರೆ. ಈ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕೆ ಎಂದು ಅವರು ಪ್ರಶ್ನಿಸಿದರು.

ಬಿ.ಆರ್.ಪಾಟೀಲ್ ಹೇಳಿರುವುದು ನಿಜ. ವಸತಿ ಇಲಾಖೆಯಲ್ಲಿ ಹಣ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆ ಆಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನು ನಾನಾಗಲಿ, ವಿರೋಧ ಪಕ್ಷವಾಗಲಿ ಹೇಳುತ್ತಿಲ್ಲ. ಸಾಕ್ಷಾತ್ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಮುಖ್ಯಮಂತ್ರಿಗಳ ಸಲಹೆಗಾರರೇ ಹೇಳಿದ್ದಾರೆ. ಈಗ ಚೆನ್ನಾಗಿ ಹಣ ಲೂಟಿ ಹೊಡೆದರೆ ಮುಂದೆ ಚುನಾವಣೆ ನಡೆಸಬಹುದು ಎಂಬುದು ಇವರ ಉದ್ದೇಶ ಎಂದು ಅವರು ಕಿಡಿಕಾರಿದರು.

ಭೂಮಿ ವಿಷಯದಲ್ಲಿ ಕಾನೂನು ಹೋರಾಟ ಮಾಡುತ್ತಿದ್ದೇನೆ

ಕೇತಗಾನಹಳ್ಳಿ ಭೂಮಿ ವಿಷಯಕ್ಕೆ ಸಂಬಂಧಿಸಿ ನಾನು ಕಾನೂನು ಹೋರಾಟ ಮಾಡುತ್ತಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ನಾನು ಮೊದಲೇ ಹೇಳಿದ್ದೇನೆ. ರಾಜ್ಯ ಸರ್ಕಾರ ರಾಜಕೀಯ ದುರುದ್ದೇಶದಿಂದ ಕಿರುಕುಳ ನೀಡುತ್ತಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಆರೋಪಿಸಿದರು.

ಭೂಮಿ ತೆರವಿಗೆ ರಚಿಸಿಲಾಗಿರುವ ಎಸ್ಐಟಿಗೆ ಹೈಕೋರ್ಟ್ ತಡೆ ನೀಡಿದ ಬಗ್ಗೆ ಪ್ರತಿಕ್ರಿಯಿಸಿದ ಅವರು; ಅದು 40 ವರ್ಷಗಳ ಹಿಂದೆ ಖರೀದಿ ಮಾಡಿದ ಭೂಮಿ. ಅಲ್ಲಿ ಯಾವುದೇ ರೀತಿಯ ಒತ್ತುವರಿ ಆಗಿಲ್ಲ. ಸರ್ಕಾರ ರಾಜಕೀಯ ದ್ವೇಷ ಮಾಡಿಕೊಂಡು ಹೊರಟಿದೆ. ಅದು ಕಾನೂನು ವ್ಯಾಪ್ತಿಯಲ್ಲಿ ನ್ಯಾಯಾಲಯದಲ್ಲಿ ತೀರ್ಮಾನ ಆಗುತ್ತದೆ ಎಂದರು.

ರಾಜಕೀಯ ದ್ವೇಷ ಮಾಡುತ್ತಿದೆ ಎಂದು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದೆ. ಆದರೆ ಇವರು ಮಾಡುತ್ತಿರುವುದು ಏನು? ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಇಟ್ಟುಕೊಂಡು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಇದಕ್ಕೆಲ್ಲ ಕಾಲವೇ ಉತ್ತರ ನೀಡುತ್ತದೆ ಎಂದು ಕೇಂದ್ರ ಸಚಿವರು ಹೇಳಿದರು.

ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗಿಲ್ಲ ಎಂದು ಕಿಡಿ

2028ಕ್ಕೆ ಜೆಡಿಎಸ್ -ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನಾನೇ ಬಟ್ಟೆ ಹೊಲಿಸಿಕೋಡ್ತೀನಿ ಎಂದು ಡಿಸಿಎಂ ಡಿಕೆಶಿ ನೀಡಿರುವ ಅಹಂಕಾರದ ಹೇಳಿಕೆಗೆ ತಿರುಗೇಟು ಕೊಟ್ಟ ಕುಮಾರಸ್ವಾಮಿ ಅವರು; ನನಗೆ ಅಂತಹ ದಾರಿದ್ರ್ಯ ಇನ್ನೂ ಬಂದಿಲ್ಲ. ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವಷ್ಟು ದಾರಿದ್ರ್ಯವನ್ನು ಈ ನಾಡಿನ ಜನತೆ ನನಗೆ ಕೊಟ್ಟಿಲ್ಲ. ದಾರಿದ್ರ್ಯ ಇರುವುದು ಅವರಿಗೆ. ಮನುಷ್ಯತ್ವದ ದಾರಿದ್ರ್ಯ ಅವರಿಗೆ ಇದೆ.

ಜನರಿಂದ ಕೊಳ್ಳೆ ಹೊಡೆದ ಆ ಪಾಪದ ಹಣದಿಂದ ನಾನು ಬಟ್ಟೆ ಹೊಲಿಸಿಕೊಳ್ಳಬೇಕಾ? ನನಗೆ ಬಟ್ಟೆ ಬೇಕಾದರೆ ನಾಡಿನ ಜನರಿದ್ದಾರೆ, ನನ್ನನ್ನು ಇಲ್ಲಿಯವರೆಗೂ ಬೆಳೆಸಿರುವ ಅವರೇ ತಂದು ಕೊಡುತ್ತಾರೆ. ಆ ವ್ಯಕ್ತಿಯ ಪಾಪದ ಹಣ, ಲೂಟಿ ಹೊಡೆದಿರುವ ಹಣದಿಂದ ಬಟ್ಟೆ ತರಿಸಿಕೊಳ್ಳಬೇಕಾ? ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಡಿಕೆ ಸುರೇಶ್ (DK Suresh) ಅವರನ್ನು ಬಮುಲ್ ಅಧ್ಯಕ್ಷ ಮಾಡಿಕೊಂಡಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆ ಬಗ್ಗೆ ಪ್ರತಿಕ್ರಿಯಿಸಿದ ಅವರು; ಸರ್ಕಾರ ಇದೆ, ಏನು ಬೇಕಾದರೂ ಮಾಡಿಕೊಳ್ಳುತ್ತಾರೆ. ಸಮಯ ಬರುತ್ತೆ ಅದಕ್ಕೆ ಉತ್ತರ ಕೋಡೋಣ ಎಂದರು.

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!