We are not against minorities; BS Yediyurappa

ನಾವು ಅಲ್ಪಸಂಖ್ಯಾತರ ವಿರೋಧಿಗಳಲ್ಲ; ಬಿಎಸ್‍ ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸರಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬಹುತೇಕ ಅಭಿವೃದ್ಧಿ ಕೆಲಸಗಳು ಸ್ಥಗಿತವಾಗಿವೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಆರೋಪಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಮಾತನಾಡಿದ ಅವರು, ಜನರ ಸಂಕಷ್ಟಗಳನ್ನು ಯಾರೂ ಕೇಳುವವರಿಲ್ಲ ಎಂಬಂಥ ದುಸ್ಥಿತಿ ಬಂದಿದೆ. ಕೇವಲ ಪ್ರಚಾರದಲ್ಲಿ ಇವರು ತೊಡಗಿದ್ದು, ಅಭಿವೃದ್ಧಿ ಕಡೆ ಗಮನ ಕೊಡುತ್ತಿಲ್ಲ ಎಂದು ಆಕ್ಷೇಪಿಸಿದರು.

ನೀರಾವರಿ ಯೋಜನೆಗಳು ಸಂಪೂರ್ಣ ಸ್ಥಗಿತವಾಗಿವೆ. ಕರ್ನಾಟಕದ ಯಾವುದೇ ಮೂಲೆಯಲ್ಲಾದರೂ ಒಂದು ಕಿಮೀ ರಸ್ತೆ ಆಗುತ್ತಿರುವುದನ್ನು ಈ ಸರಕಾರ ತೋರಿಸಲಿ ಎಂದು ಸವಾಲು ಹಾಕಿದರು. ಈ ಸರಕಾರ ತುಘಲಕ್ ದರ್ಬಾರ್ ಮಾಡುತ್ತಿದೆ ಎಂದು ಆರೋಪಿಸಿದರು.

ನಾವು ಅಲ್ಪಸಂಖ್ಯಾತರ ವಿರೋಧಿಗಳಲ್ಲ, ಆದರೆ, ಅಲ್ಪಸಂಖ್ಯಾತರಿಗೆ ಮಿತಿ ಮೀರಿ ನೆರವು ಕೊಡುವುದು ಅಕ್ಷಮ್ಯ ಅಪರಾಧ. ಪರಿಶಿಷ್ಟ ಜಾತಿ, ವರ್ಗದ ಜನರಿಗೆ ಹೆಚ್ಚು ಅನುಕೂಲ ಮಾಡಿಕೊಡಬೇಕಾದ ಈ ಸರಕಾರವು ಕೇವಲ ಮತಬ್ಯಾಂಕ್ ರಾಜಕಾರಣಕ್ಕಾಗಿ ಅಲ್ಪಸಂಖ್ಯಾತರನ್ನು ತೃಪ್ತಿ ಪಡಿಸುವ ಕೆಲಸದಲ್ಲಿ ತೊಡಗಿದ್ದು, ಇದನ್ನು ನಾವೆಲ್ಲರೂ ಖಂಡಿಸುತ್ತೇವೆ ಎಂದರು.

ಈಗಲಾದರೂ ಸರಕಾರ ಜಾಗೃತವಾಗಿ ಅಭಿವೃದ್ಧಿ ಕಡೆ ಗಮನ ಕೊಡಬೇಕು. ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸಿ ಕೊಡುವ ಕೆಲಸ ಮಾಡಬೇಕೆಂದು ಒತ್ತಾಯಿಸಿದರು.

ಹಣ ಕೊಟ್ಟು ಆಶ್ರಯ ಮನೆ ಪಡೆಯಬೇಕಿದೆ ಎಂಬ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲರ ಆಡಿಯೋ ವೈರಲ್ ಆದ ಕುರಿತ ಪ್ರಶ್ನೆಗೆ ಉತ್ತರ ನೀಡಿದರು.

ಬಿ.ಆರ್.ಪಾಟೀಲ್ ಹೇಳಿದ್ದು ನೂರಕ್ಕೆ ನೂರು ಸತ್ಯ. ಹಣ ಕೊಡದೆ ಯಾವುದೇ ಕೆಲಸ ಆಗುವುದಿಲ್ಲ ಎಂಬುದು ಸಾಬೀತಾಗಿದೆ ಎಂದು ನುಡಿದರು. ಬಡವರು ಮನೆ ಬೇಕೆಂದರೂ ದುಡ್ಡು ಕೊಟ್ಟು ತೆಗೆದುಕೊಳ್ಳಬೇಕಾಗಿದೆ. ಸರಕಾರ ತಪ್ಪನ್ನು ಒಪ್ಪಿಕೊಂಡು ಅದನ್ನು ಸರಿಪಡಿಸಿ ಬಡವರಿಗೆ ನ್ಯಾಯ ಒದಗಿಸಿಕೊಡಲಿ ಎಂದು ಆಗ್ರಹಿಸಿದರು.

ಕೇಂದ್ರ ಸಚಿವ, ಜೆಡಿಎಸ್‍ನ ಎಚ್.ಡಿ.ಕುಮಾರಸ್ವಾಮಿ ಅವರ ಮಾತು ಎಲ್ಲರೂ ಒಟ್ಟಾಗಿ ಹೋಗುತ್ತೇವೆ ಎಂಬ ಅರ್ಥ ನೀಡುವಂತಿದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ಬಿಜೆಪಿ- ಜೆಡಿಎಸ್ ಬೇರೆಯಲ್ಲ; ನಾವು ಒಟ್ಟಾಗಿ ಮುಂದುವರೆಯುತ್ತೇವೆ.

ಎಚ್.ಡಿ.ದೇವೇಗೌಡರು ಕೂಡ ಹಲವು ಬಾರಿ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಜೀ ಅವರ ಬಗ್ಗೆ ನಂಬಿಕೆ- ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ- ಜೆಡಿಎಸ್ ಮುಂದಿನ ದಿನಗಳಲ್ಲಿ ಒಟ್ಟಾಗಿ ಮುನ್ನಡೆದು ಹೇಗಾದರೂ ಮಾಡಿ ಸರಕಾರವನ್ನು ಇಳಿಸಿ ನಮ್ಮ ಸರಕಾರ ಅಧಿಕಾರಕ್ಕೆ ಬರಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಪ್ರಯತ್ನ ಮಾಡುತ್ತೇವೆ ಎಂದರು.

ಅಸಮಾಧಾನಿತರನ್ನು ಕರೆದು ಮಾತನಾಡಿ ಸಮಸ್ಯೆ ಬಗೆಹರಿಸುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪ್ರಯತ್ನವನ್ನು ನಾನು ಸ್ವಾಗತಿಸುವೆ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಅಸಮಾಧಾನದಿಂದ ಯಾರೇ ಇದ್ದರೂ ಅವರ ಜೊತೆ ಮಾತನಾಡಲು ನಾನು ಸಿದ್ಧ. ಪ್ರತಿನಿತ್ಯ ಈ ಕಚೇರಿಗೆ ಬಂದು ಮಧ್ಯಾಹ್ನದ ವರೆಗೆ ಇಲ್ಲಿ ಇರಲು ನಿರ್ಧರಿಸಿದ್ದೇನೆ. ಪ್ರತಿ ವಾರ ಒಂದೆರಡು ಜಿಲ್ಲೆಗೆ ಭೇಟಿ ನೀಡುವೆ ಎಂದು ಪ್ರಕಟಿಸಿದರು.

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!