ದೊಡ್ಡಬಳ್ಳಾಪುರ: ವ್ಯಾಸಲೀನ್ ತರಲು ಮೆಡಿಕಲ್ ಸ್ಟೋರಿಗೆ ತೆರಳಿದ್ದ 14 ವರ್ಷ ಬಾಲಕ ಕಾಣೆಯಾಗಿರುವ ಘಟನೆ (The boy is missing) ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.
ಈ ಕುರಿತಂತೆ ದೊಡ್ಡಬಳ್ಳಾಪುರ ಮಹಿಳಾ ಠಾಣೆಗೆ ದೂರು ನೀಡಲಾಗಿದೆ.
ಆನಂದ್ (14 ವರ್ಷ), ಕೋಲು ಮುಖ, ಗೋದಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಮಾತನಾಡುತ್ತಾನೆ
ಈತನ ಸುಳಿವು ಸಿಕ್ಕಲ್ಲಿ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.