H.D.Kumaraswamy practices yoga at Salem Steel Plant

ಸೇಲಂ ಉಕ್ಕು ಸ್ಥಾವರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಯೋಗಾಭ್ಯಾಸ

ಸೇಲಂ (ತಮಿಳುನಾಡು): ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಸೇಲಂ ಉಕ್ಕು ಸ್ಥಾವರದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕಾರ್ಖಾನೆಯ ಸಿಬ್ಬಂದಿ, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು, ಭಾರತೀಯ ಉಕ್ಕು ಪ್ರಾಧಿಕಾರ ಹಾಗೂ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳ ಜೊತೆಯಲ್ಲಿ ಸಚಿವರು ಯೋಗಾಭ್ಯಾಸ ನಡೆಸಿದರು.

ಸೇಲಂ ಟೌನ್‌ಶಿಪ್‌ನಲ್ಲಿರುವ ಹಿಲ್ ವ್ಯೂ ಕ್ರೀಡಾಂಗಣದಲ್ಲಿ ಯೋಗ ಶಿಕ್ಷಕರ ಮಾರ್ಗದರ್ಶನದಲ್ಲಿ ಸಚಿವರು ಕೆಲ ಪ್ರಮುಖ, ಸರಳ ಆಸನಗಳನ್ನು ಹಾಗೂ ಪ್ರಾಣಾಯಾಮವನ್ನು ಹಾಗೂ ಪ್ರಾಣಾಯಾಮವನ್ನೂಅಭ್ಯಾಸ ಮಾಡಿದರು.

ಮೋದಿ ಅವರನ್ನು ಅಭಿನಂಧಿಸಿದ ಸಚಿವರು

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕುಮಾರಸ್ವಾಮಿ ಅವರು, ಯೋಗ ಎನ್ನುವುದು ನಮ್ಮ ಭಾರತದಲ್ಲಿ ಪ್ರಾಚೀನ ಕಾಲದಿಂದ ಬೆಳೆದುಬಂದ ಜೀವನಶೈಲಿಯಾಗಿದೆ. ಭಾರತಕ್ಕಷ್ಟೇ ಸೀಮಿತವಾಗಿದ್ದ ಯೋಗವನ್ನು ಹನ್ನೊಂದು ವರ್ಷಗಳ ಹಿಂದೆ ಪ್ರಧಾನಿಗಳಾಗಿ ಅಧಿಕಾರ ವಹಸಿಕೊಂಡ ನರೇಂದ್ರ ಮೋದಿ ಅವರು ಇಡೀ ಜಗತ್ತಿನ ವೇದಿಕೆಗೆ ತೆಗೆದುಕೊಂಡು ಹೋದರು. ಅದರ ಪರಿಣಾಮವಾಗಿ ಜಗತ್ತಿನ ಎಲ್ಲೆಡೆ ಜೂನ್‌ 21ನೇ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನ ಎಂದು ಆಚರಿಸಲಾಗುತ್ತಿದೆ. ಇದರ ಸಂಪೂರ್ಣ ಹೆಗ್ಗಳಿಕೆ ಮೋದಿ ಅವರಿಗೆ ಸಲ್ಲಬೇಕು ಎಂದರು.

ಸೇಲಂ ಉಕ್ಕು ಸ್ಥಾವರದ ಸಿಬ್ಬಂದಿ, ಅಧಿಕಾರಿಗಳು, ಅವರ ಕುಟುಂಬ ಸದಸ್ಯರ ಜತೆ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ನನಗೆ ಸಿಕ್ಕಿದೆ. ಇದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ರಾಷ್ಟ್ರದ ಬೆನ್ನೆಲುಬಾಗಿರುವ ಉಕ್ಕು ಕ್ಷೇತ್ರದ ಕುಟುಂಬದೊಂದಿಗೆ ಯೋಗದ ಅನನ್ಯತೆ, ಅವಿಸ್ಮರಣೆಯ ಕ್ಷಣಗಳನ್ನು ಅನುಭವಿಸುವ ಭಾಗ್ಯ ನನ್ನದಾಯಿತು ಎಂದು ಸಚಿವರು ಹೇಳಿದರು.

ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ. ಇದು ಮಾನಸಿಕ ಶಾಂತಿ, ಮಾನಸಿಕ ಸ್ಪಷ್ಟತೆ, ದೈಹಿಕ ಸ್ವಾಸ್ತ್ಯತೆ ಮತ್ತು ಸಾಮೂಹಿಕ ಯೋಗಕ್ಷೇಮಕ್ಕೆ ಪರಿಣಾಮಕಾರಿ ಮಾರ್ಗವಾಗಿದೆ. ಪ್ರಧಾನಿಗಳಾದ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಯೋಗವು ಜಗತ್ತನ್ನೇ ಒಗ್ಗೂಡಿಸಿದೆ.

ಜಗತ್ತಿನ ಯೋಗಕ್ಷೇಮಕ್ಕೆ ನಮ್ಮ ಪಾರಂಪರಿಕ ಯೋಗವು ಮಹೋನ್ನತ ಕೊಡುಗೆ ನೀಡುತ್ತಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಭಾರತೀಯ ಉಕ್ಕು ಪ್ರಾಧಿಕಾರದ (ಸೈಲ್‌) ಅಧ್ಯಕ್ಷ ಅಮರೇಂದು ಪ್ರಕಾಶ್‌, ಉಕ್ಕು ಸಚಿವ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಭಿಜಿತ್‌ ನರೇಂದ್ರ ಸೇರಿದಂತೆ ಸೇಲಂ ಉಕ್ಕು ಸ್ಥಾವರದ ಹಿರಿಯ ಅಧಿಕಾರಗಳು ಕೂಡ ಯೋಗಾಭ್ಯಾಸದಲ್ಲಿ ಭಾಗಿ ಆಗಿದ್ದರು.

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!