Hulikal Nataraj makes serious allegations against Karnataka State Science Council..!

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಕುರಿತು ಹುಲಿಕಲ್ ನಟರಾಜ್ ಗಂಭೀರ ಆರೋಪ..!

ಬೆಂಗಳೂರು: ದೇಶದಲ್ಲಿಯೇ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಈ ಘನತೆಗೆ ಧಕ್ಕೆ ಬರುವಂತೆ ನಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಪರಿಷತ್ತನ್ನು ತನ್ನ ವಶಕ್ಕೆ ಪಡೆದುಕೊಳ್ಳಬೇಕೆಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಸ್ಥಾಪಕ ಅದ್ಯಕ್ಷ ಹುಲಿಕಲ್ ನಟರಾಜ್ (Hulikal Nataraj) ಒತ್ತಾಯಿಸಿದ್ದಾರೆ‌.

ಈ ಕುರಿತಂತೆ ಪ್ರಕಟಣೆ ನೀಡಿರುವ ಅವರು, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನದ ದಾರಿ ಬಿಟ್ಟು ಎಷ್ಟೋ ಕಾಲವಾಗಿದ್ದು ಅದರಲ್ಲಿ ಅಧಿಕಾರ ಲಾಲಸೆಯ ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಅಧಿಕಾರ ಹಿಡಿದು ಕುಳಿತಿವೆ.

ಅಲ್ಲಿದ್ದ ಸಾರ್ವಜನಿಕರ ಕೋಟ್ಯಂತರ ಹಣವು ಈಗ ಖಾಲಿಯಾಗಿ ವಿಜ್ಞಾನ ಕಾರ್ಯಕ್ರಮಗಳಿಗೆ ಬೊಕ್ಕಸ ಖಾಲಿಯಾಗಿದೆ. ಉದ್ಯೋಗಿಗಳ ವೇತನಕ್ಕೂ ಹಣವಿಲ್ಲ. ಇಂತಹ ಪರಿಸ್ಥಿತಿಗೆ ಕಾರಣ ಯಾರು? ಈ ಸಮಸ್ಯೆಯಿಂದಾಗಿ ವಿಜ್ಞಾನ ಪರಿಷತ್ತು ಕೈಗೊಳ್ಳಬೇಕಾದ ಅಸಂಖ್ಯ ವಿಜ್ಞಾನ ಪ್ರಸರಣ ಕಾರ್ಯಕ್ರಮಗಳಿಗೆ ತಡೆಯುಂಟಾಗಿದೆ.

ವೈಜ್ಞಾನಿಕ ಮನೋಭಾವದ ಗಂಧ ಗಾಳಿ ಇಲ್ಲದೇ ಇರುವವರು ಅಲ್ಲಿ ಅಧಿಕಾರ ಹಿಡಿದು ಸದಾ ತಂಬಾಕು ಜಗಿಯುತ್ತಾ ವಿಜ್ಞಾನವನ್ನು ಮೂಲೆಗುಂಪು ಮಾಡಿರುವುದು ವಿಷಾದಕರ.

ವಿಜ್ಞಾನದ ಅರಿವು ಇಲ್ಲದಿದ್ದರೂ ಅಧಿಕಾರವನ್ನು ಹೇಗೆ ತಮ್ಮ ಮುಷ್ಠಿಯಲ್ಲಿರಿಸಿಕೊಳ್ಳಬೇಕು ಎಂಬ ಚಾಕಚಕ್ಯತೆ ಪ್ರಸ್ತುತದ ಅಧಿಕಾರಸ್ಥರಿಗೆ ಇದೆ. ಅದಕ್ಕಾಗಿ ಲಕ್ಷಾಂತರ ರೂಗಳನ್ನು ಒಂದೇ ಕಂತಿನಲ್ಲಿ ಜಮಾ ಮಾಡಿ ತಮ್ಮವರನ್ನೇ ಸದಸ್ಯರನ್ನು ಮಾಡಿ ಮೌಡ್ಯತೆಯನ್ನು ಬಿತ್ತುತ್ತಾ ಅಧಿಕಾರ ಲಾಲಸೆಯಲ್ಲಿ ಮೆರೆಯುತ್ತಿದ್ದಾರೆ.

ಡಾ.ಎಚ್.ನರಸಿಂಹಯ್ಯ ಅವರು ರಾಜ್ಯದಲ್ಲಿ ವಿಜ್ಞಾನದ ಚಟುವಟಿಕೆಗಳನ್ನು ಸಕ್ರಿಯವಾಗಿ ನಡೆಸಲು, ವೈಜ್ಞಾನಿಕ ಮನೋಭಾವ ಮೂಡಿಸಲು ಮಹದಾಸೆಯಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿಗೆ ಚಾಲನೆ ನೀಡಿದ್ದರು. ಈಗ ಅವರ ಆಶಯಗಳು ಮಣ್ಣುಪಾಲಾಗಿವೆ.

ಅಧಿಕಾರಕ್ಕಾಗಿ ತಮಗೆ ಬೇಕಾದವರನ್ನು ಸದಸ್ಯರನ್ನಾಗಿಸಿ ಅಲ್ಲಿ ಸದಾಕಾಲ ಅಧಿಕಾರ ಹಿಡಿದು ಕೂರುವ ದುರಾಸೆಗೆ ಕರ್ನಾಟಕದ ಮಾನ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿರುವುದು ಈ ನಿಟ್ಟಿನಲ್ಲಿ ಸ್ವಾಗತಾರ್ಹ. ಮಾನ್ಯ ಮುಖ್ಯಮಂತ್ರಿಗಳು ಈ ಕುರಿತು ಗಮನ ಹರಿಸಬೇಕು.

ರಾಜ್ಯದಲ್ಲಿ ವೈಜ್ಞಾನಿಕ ಮನೋಭಾವದ ಪ್ರಸಾರಕ್ಕೆ ಈ ಸರ್ಕಾರವು ಅತ್ಯಂತ ಆದ್ಯತೆ ನೀಡಿದೆ. ಆದ್ದರಿಂದ ತಮಗೆ ಬೇಕಾದ ಸದಸ್ಯರನ್ನು ಸೇರ್ಪಡೆ ಮಾಡಿಕೊಂಡು ತಮಗೆ ಬೇಕಾದಂತೆ ಪರಿಷತ್ತಿನ ಚುಕ್ಕಾಣಿ ಹಿಡಿದು ನಡೆಸುತ್ತಿರುವ ದುಷ್ಟಶಕ್ತಿಗಳನ್ನು ಮಟ್ಟ ಹಾಕಲು ಕರ್ನಾಟಕ ಸರ್ಕಾರ ಮುಂದಾಗಬೇಕು. ತಕ್ಷಣವೇ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತನ್ನು ಸರ್ಕಾರದ ವಶಕ್ಕೆ ಪಡೆದುಕೊಳ್ಳಬೇಕು ಎಂದು ಈ ಮೂಲಕ ಸರ್ಕಾರವನ್ನು ಹುಲಿಕಲ್ ನಟರಾಜ್ ಒತ್ತಾಯಿಸಿದ್ದಾರೆ‌.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!