Priyank Kharge gets green signal to travel to America

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್ ಸಿಗ್ನಲ್

ಬೆಂಗಳೂರು: ಅಮೆರಿಕದ ಬಾಸ್ಟನ್ ನಗರದಲ್ಲಿ ನಡೆಯುತ್ತಿರುವ ‘ಬಯೋ-2025’ ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರ ಪ್ರವಾಸಕ್ಕೆ ಕೇಂದ್ರದ ಮೋದಿ (Modi) ಸರ್ಕಾರ ಕಾರಣವಿಲ್ಲದೆ ಅನುಮತಿ ನಿರಾಕರಿಸಿ, ಕನ್ನಡಿಗರ ಆಕ್ರೋಶಕ್ಕೆ ತುತ್ತಾದ ಬೆನ್ನಲ್ಲೇ ಯೂಟರ್ನ್ ಹೊಡೆದಿದೆ.

ಹೌದು ರಾಜಕೀಯ ದ್ವೇಷದ ಕಾರಣ ಬಯೋ-2025 ಸಮಾವೇಶದಲ್ಲಿ ತೆರಳುತ್ತಿದ್ದ ಕರ್ನಾಟಕದ ಸಚಿವರಿಗೆ ಅನುಮತಿ ನೀಡಿಲ್ಲ ಎಂಬ ವಿಚಾರ ಮೋದಿ ಸರ್ಕಾರದಿಂದ ಕರ್ನಾಟಕ ಹಾಗೂ ಕನ್ನಡಿಗರಿಗೆ ಮಾಡಿದ ಅವಮಾನ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನಲ್ಲೆ, ಪ್ರಿಯಾಂಕ್ ಖರ್ಗೆ ಅವರ ಅಮೇರಿಕಾ ಪ್ರವಾಸಕ್ಕೆ ಅನುಮತಿ ನೀಡಿದೆ.

ಈ ಕುರಿತಂತೆ ಸಚಿವ ಪ್ರಯಾಂಕ್ ಖರ್ಗೆ ಅವರು ಟ್ವೀಟ್ ಮಾಡಿದ್ದು. ಹಿಂದಿನ ಅನುಮತಿ ನಿರಾಕರಣೆ ಪ್ರಶ್ನಿಸಿ ಎಂಇಎಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ಪ್ರಶ್ನೆಗಳು: ಜೂನ್ 14 ರಿಂದ 27 ರವರೆಗೆ ಕರ್ನಾಟಕ ಸರ್ಕಾರವನ್ನು ಎರಡು ಪ್ರಮುಖ ಜಾಗತಿಕ ವೇದಿಕೆಗಳಲ್ಲಿ ಪ್ರತಿನಿಧಿಸಲು ಮತ್ತು ಸಹಯೋಗಗಳು ಮತ್ತು ಹೂಡಿಕೆಗಳಿಗಾಗಿ ಉನ್ನತ ಕಂಪನಿಗಳು, ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳೊಂದಿಗೆ 25 ಕ್ಕೂ ಹೆಚ್ಚು ಅಧಿಕೃತ ಸಭೆಗಳಲ್ಲಿ ಭಾಗವಹಿಸಲು ನಾನು ಮೇ 15 ರಂದು ಅನುಮತಿ ಕೋರಿದ್ದೆ. ಆದರೆ ಯಾವುದೇ ಅಧಿಕೃತ ವಿವರಣೆಯಿಲ್ಲದೆ ನನ್ನ ಅರ್ಜಿಯನ್ನು ನಿರಾಕರಿಸಲಾಯಿತು.

ವಿದೇಶಾಂಗ ಸಚಿವಾಲಯವು ಈಗ ತನ್ನ ಹಿಂದಿನ ನಿರ್ಧಾರವನ್ನು ಹಿಂತೆಗೆದುಕೊಂಡಿದೆ. ಅಮೆರಿಕಕ್ಕೆ ಅಧಿಕೃತ ಭೇಟಿಗೆ ನನಗೆ ಅನುಮತಿ ನೀಡಲು ನಿರ್ಧರಿಸಿದೆ.

ಜೂನ್ 19 ರಂದು ನಾನು ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ನಡೆಯನ್ನು ಪ್ರಶ್ನಿಸಿದೆ. ಈ ವಿಷಯ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಕಟವಾಯಿತು. ಅದೇ ದಿನದ ಸಂಜೆ ವಿದೇಶಾಂಗ ಸಚಿವಾಲಯ ತನ್ನ ಹಿಂದಿನ ನಿರಾಕರಣೆಯನ್ನು ರದ್ದುಗೊಳಿಸಿ ಜೂನ್ 19 ರಂದು ನಿರಾಕ್ಷೇಪಣಾ ಅನುಮತಿಯನ್ನು ನೀಡಿದೆ. ಈ ನಿರ್ಧಾರ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ.

ಮೊದಲನೆಯದಾಗಿ ಅನುಮತಿಯನ್ನು ನಿರಾಕರಿಸಿದ್ದು ಯಾಕೆ? ವಿಷಯವು ಸಾರ್ವಜನಿಕವಾಗಿ ಬಹಿರಂಗವಾದ ನಂತರ ಹೊಣೆಗಾರಿಕೆಯನ್ನು ತಪ್ಪಿಸಲು ಹಿಂದಿನ ಆದೇಶವನ್ನು ಈಗ ರದ್ದುಗೊಳಿಸಲಾಗಿದೆಯೇ?

ಮುಖ್ಯ ಕಾರ್ಯಕ್ರಮಗಳು ಮುಗಿದ ನಂತರ ಅಥವಾ ಪೂರ್ಣಗೊಳ್ಳುವ ಹಂತದಲ್ಲಿದ್ದ ನಂತರ ಅನುಮತಿ ನೀಡುವುದರ ಅರ್ಥವೇನು? ತಡವಾಗಿ ಅನುಮೋದನೆಯನ್ನು ತೋರಿಸುವ ಮೂಲಕ ವಿದೇಶಾಂಗ ಸಚಿವಾಲಯವು ಈಗ ಮೂಲ ನಿರ್ಧಾರವನ್ನು ವಿವರಿಸುವುದನ್ನು ತಪ್ಪಿಸುತ್ತದೆಯೇ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!