We will take away Yettinahole water to protect the interests of farmers: DCM DK Shivakumar

ದೊಡ್ಡಬಳ್ಳಾಪುರ: ರೈತರ ಹಿತ ಕಾಪಾಡಿ ಎತ್ತಿನಹೊಳೆ ನೀರನ್ನು ತೆಗೆದುಕೊಂಡು ಹೋಗುತ್ತೇವೆ – ಡಿಸಿಎಂ ಡಿಕೆ ಶಿವಕುಮಾರ್

ದೊಡ್ಡಬಳ್ಳಾಪುರ: “ನಿಮ್ಮನ್ನು ಬಲವಂತವಾಗಿ ಒಕ್ಕಲೆಬ್ಬಿಸುವುದಿಲ್ಲ. ರೈತರ ಹಿತ ಕಾಪಾಡಿಕೊಂಡು, ನಿಮ್ಮ ಸಲಹೆಗಳನ್ನು ಸ್ವೀಕರಿಸಿ, ನಿಮಗೆ ಹೆಚ್ಚು ತೊಂದರೆಯಾಗದಂತೆ ಎತ್ತಿನಹೊಳೆ ಯೋಜನೆ ನೀರನ್ನು ತೆಗೆದುಕೊಂಡು ಹೋಗುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ರೈತರಿಗೆ ಭರವಸೆ ನೀಡಿದರು.

ಎತ್ತಿನಹೊಳೆ ಯೋಜನೆ ಸಂಬಂಧ 5 ಟಿಎಂಸಿ ನೀರನ್ನು ಸಂಗ್ರಹಿಸಲು ದೊಡ್ಡಬಳ್ಳಾಪುರಕ್ಕೆ ಹೊಂದಿಕೊಂಡಿರುವ ಕೊರಟಗೆರೆ ತಾಲೂಕು ಪೂಚನಹಳ್ಳಿಯಲ್ಲಿ ಬಳಿ ಬೈರಗೊಂಡಲು ಜಲಾಶಯ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಾಮಗಾರಿಗಳ ಸ್ಥಳವನ್ನು ಶನಿವಾರ ಪರಿಶೀಲಿಸಿದರು.

ನಂತರ ಜಲಾಶಯ ನಿರ್ಮಾಣದಿಂದ ಮುಳುಗಡೆಯಾಗುವ ಸ್ಥಳೀಯ ಗ್ರಾಮಸ್ಥರ ಜೊತೆ ಮಾತನಾಡಿ, ಅವರ ಸಲಹೆ ಸ್ವೀಕರಿಸಿದರು. ಇದೇ ವೇಳೆ ಅವರಿಗೆ ಅನ್ಯಾಯ ಆಗದಂತೆ ಯೋಜನೆ ಜಾರಿ ಮಾಡುವುದಾಗಿ ಭರವಸೆ ನೀಡಿದರು.

ಈ ವೇಳೆ ಸ್ಥಳೀಯ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು, “ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಎತ್ತಿನಹೊಳೆ ಯೋಜನೆ ರೂಪಿಸಲಾಗಿದೆ. ಭೈರಗೊಂಡಲು ಜಲಾಶಯ ಮಾಡಿದರೆ 5 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದು. ಇದರಿಂದ 5 ಸಾವಿರ ಎಕರೆ ಪ್ರದೇಶ ಮುಳುಗಡೆಯಾಗಲಿದೆ” ಎಂದರು.

“ಹಾಸನ ಮಾರ್ಗವಾಗಿ ಪೈಪ್ ಲೈನ್ ಕೆಲಸ ಪೂರ್ಣಗೊಂಡು ಇಲ್ಲಿಯವರೆಗೂ ಬಂದಿದೆ. ಮುಂದೆ ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲೂ ಪೈಪ್ ಲೈನ್ ಕೆಲಸ ಆರಂಭಿಸಿದ್ದೇವೆ. ನಾನು ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವನಾದ ಬಳಿಕ ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ದೊಡ್ಡಬಳ್ಳಾಪುರದಲ್ಲಿ (ಎಕರೆಗೆ 32 ಲಕ್ಷ) ಒಂದು ಬೆಲೆ, ಕೊರಟಗೆರೆ ಭಾಗದಲ್ಲಿ (20 ಲಕ್ಷ) ಒಂದು ಬೆಲೆ ನೀಡಲಾಗುತ್ತಿದೆ. ಪರಿಹಾರ ಸಮಾನವಾಗಿ ನೀಡಬೇಕು ಎಂದು ಬೇಡಿಕೆ ಇಡಲಾಗಿತ್ತು. ಈ ವಿಚಾರ ಬಗೆಹರಿಸಲು ತೀರ್ಮಾನ ಕೈಗೊಳ್ಳುವ ಜವಾಬ್ದಾರಿಯನ್ನು ಪರಮೇಶ್ವರ್ ಅವರಿಗೆ ನೀಡಿದೆವು” ಎಂದು ಹೇಳಿದರು.

“ಕೋಲಾರ, ಚಿಕ್ಕಬಳ್ಳಾಪುರಕ್ಕೆ ನೀರು ತೆಗೆದುಕೊಂಡು ಹೋಗಲೇ ಬೇಕು. ನಿಮಗೆ ಭೂಮಿ ಬಿಟ್ಟುಕೊಡಲು ಇಚ್ಛೆ ಇಲ್ಲ. ಆದರೂ ಯೋಜನೆ ಮಾಡಲೇ ಬೇಕು. ಇದಕ್ಕೆ ಪರಿಹಾರ ಏನು? ನಿಮಗೆ ಯಾವ ರೀತಿ ಸಹಾಯ ಮಾಡಬಹುದು ಎಂದು ನಿಮ್ಮ ಜತೆ ಚರ್ಚಿಸಲು ಬಂದಿದ್ದೇನೆ. ನಿಮಗೆ ಸಹಾಯ ಮಾಡಲು ಬಂದಿದ್ದೇನೆ ಹೊರತು, ನಿಮಗೆ ತೊಂದರೆ ಮಾಡಲು ಬಂದಿಲ್ಲ. ಈ ಯೋಜನೆ ಜಾರಿಗೆ ನೀವೇ ಪರಿಹಾರ ಹೇಳಿ” ಎಂದರು.

“ಈ ಯೋಜನೆಗಾಗಿ 17 ಸಾವಿರ ಕೋಟಿ ಬಂಡವಾಳ ಹಾಕಿದ್ದೇವೆ. ಬಹುತೇಕ ಕಡೆಗಳಲ್ಲಿ ಕಾಮಗಾರಿ ಮುಗಿದಿವೆ. ಹೀಗಾಗಿ ಈ ಯೋಜನೆ ಜಾರಿ ಮಾಡಲೇಬೇಕು. ನೀವು ಬೈದರೂ ಸರಿ, ಸಲಹೆ ನೀಡಿದರೂ ಸರಿ. ನಿಮ್ಮ ಮಾತನ್ನು ಆಲಿಸಿ, ನಿಮ್ಮ ಸಲಹೆ ಸ್ವೀಕರಿಸಲು ಬಂದಿದ್ದೇನೆ. ನಾವು ಇಲ್ಲಿ ಯಾರಿಂದಲೂ ಜಮೀನನ್ನು ಪುಕ್ಕಟೆಯಾಗಿ ಕಿತ್ತುಕೊಳ್ಳಲು ಬಂದಿಲ್ಲ. ನಿಮ್ಮನ್ನು ಬಲವಂತವಾಗಿ ಒಕ್ಕಲು ಎಬ್ಬಿಸುವುದಿಲ್ಲ” ಎಂದು ಭರವಸೆ ನೀಡಿದರು.

“ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಸರ್ಕಾರ ಭೂಸ್ವಾಧೀನಪಡಿಸಿಕೊಳ್ಳುವ ರೈತರಿಗೆ ಮಾರುಕಟ್ಟೆ ಬೆಲೆಗಿಂತ 4 ಪಟ್ಟು, ಬೆಂಗಳೂರಿನಲ್ಲಿ 2 ಪಟ್ಟು ಪರಿಹಾರ ನೀಡಲು ಕಾನೂನು ತಂದಿದ್ದಾರೆ” ಎಂದರು.

“ಈ ಭಾಗದ ಜನ ಜಲಾಶಯವನ್ನು ಮುಂದೆ ಮಾಡಿ ಎಂದು ಪಟ್ಟು ಹಿಡಿದಿರುವುದಾಗಿ ನನಗೆ ಮಾಹಿತಿ ಬಂತು. ಹೀಗಾಗಿ ನಾನೇ ಬಂದು ಪರಿಸ್ಥಿತಿ ನೋಡಿ ಪರಿಶೀಲನೆ ಮಾಡಲು ಬಂದಿದ್ದೇನೆ. ನಿಮ್ಮ ಎಲ್ಲಾ ಅಭಿಪ್ರಾಯ, ಸಲಹೆ ಸ್ವೀಕರಿಸಿದ್ದೇನೆ” ಎಂದರು.

ಈ ವೇಳೆ ಮಾತನಾಡಿದ ಗ್ರಾಮಸ್ಥರು, “ಈ ಭಾಗದಲ್ಲಿರುವ ರೈತರು ಬಡವರು. ಎಲ್ಲರೂ 1 ಅಥವಾ 2 ಎಕರೆ ಭೂಮಿ ಹೊಂದಿರುವ ರೈತರು. ಹೀಗಾಗಿ ಇಲ್ಲಿ ಜಲಾಶಯ ನಿರ್ಮಾಣ ಮಾಡಬೇಡಿ. ಇನ್ನು ಮುಂದೆ ಕಣಿವೆ ಪ್ರದೇಶದಲ್ಲಿ ಎರಡು ಅಣೆಕಟ್ಟು ನಿರ್ಮಿಸಲು ಅವಕಾಶವಿದೆ. ಈ ಹಿಂದೆ ದೇವದುರ್ಗದಲ್ಲಿ ಅಣೆಕಟ್ಟು ನಿರ್ಮಿಸಲು ಉದ್ದೇಶಿಸಲಾಗಿತ್ತು. ಜಲಾಶಯವನ್ನು ಬೇರೆಡೆ ನಿರ್ಮಿಸಿ” ಎಂದು ಮನವಿ ಸಲ್ಲಿಸಿದರು.

“ನೀವು ಈ ಜಲಾಶಯಕ್ಕೆ ಸೂಚಿಸಿರುವ ಪರ್ಯಾಯ ಜಾಗವನ್ನು ಪರಿಶೀಲನೆ ಮಾಡುತ್ತೇನೆ. ನಿಮ್ಮ ಸಲಹೆಗಳನ್ನು ಪರಿಶೀಲನೆ ಮಾಡುತ್ತೇನೆ. ನಂತರ ಸಚಿವ ಸಂಪುಟ ಸಭೆಯಲ್ಲಿ ನಾನು ವರದಿ ಪ್ರಸ್ತಾಪಿಸಿ ಅಂತಿಮ ತೀರ್ಮಾನ ಮಾಡಲಾಗುವುದು. ಆದಷ್ಟು ನಷ್ಟವನ್ನು ಕಡಿಮೆ ಮಾಡಿ ಈ ಯೋಜನೆ ಜಾರಿ ಮಾಡುತ್ತೇವೆ. ನಿಮ್ಮೆಲ್ಲರ ಹಿತವನ್ನು ಕಾಯುತ್ತೇವೆ” ಎಂದು ತಿಳಿಸಿದರು.

ಈ ವೇಳೆ ಸಚಿವ ಕೆಹೆಚ್ ಮುನಿಯಪ್ಪ, ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ ಸೇರಿದಂತೆ ಅನೇಕರು ಹಾಜರಿದ್ದರು.

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!