ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಶನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಹೇಳಿದರು.
ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಶಾಸಕರ ಹಣೆಬರಹವೋ ಏನೋ, ತಮ್ಮ ಕ್ಷೇತ್ರಗಳಿಗೆ ಸರ್ಕಾರದ ಯಾವುದೇ ಕಾರ್ಯಕ್ರಮ ತೆಗೆದುಕೊಂಡು ಹೋಗಬೇಕಾದರೆ ಪೇಮೆಂಟ್ ಆಗಲೇಬೇಕು. ಈ ಸರ್ಕಾರದಲ್ಲಿ ಇದೇ ನಡೆಯುತ್ತಿದೆ ಎಂದು ಆರೋಪಿಸಿದರು.
ಈ ಮುಖ್ಯಮಂತ್ರಿಗೆ ಮಾನ ಮರ್ಯಾದೆ ಎನ್ನುವುದು ಇದೆಯಾ? ಇಂಥ ಭ್ರಷ್ಟನನ್ನು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಅಂತಹ ವ್ಯಕ್ತಿಯನ್ನು ಇನ್ನೂ ಸಂಪುಟದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
ಈ ಸರ್ಕಾರದಲ್ಲಿ ಭ್ರಷ್ಟಾಚಾರ, ಕಮೀಶನ್ ವ್ಯವಹಾರ ಅವ್ಯಾಹತವಾಗಿ ಸಾಗಿದೆ. ಅದಕ್ಕೆ ಕೊನೆ ಎಂಬುದೇ ಇಲ್ಲ. ಪ್ರತಿಯೊಬ್ಬ ಶಾಸಕರು ಇದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.
ವಸತಿ ಇಲಾಖೆಯ ಕರ್ಮಕಾಂಡದ ಬಗ್ಗೆ ಬೀದಿ ಬೀದಿಯಲ್ಲಿ ಚರ್ಚೆ ಆಗುತ್ತಿದೆ. ಇವೆಲ್ಲವನ್ನು ಇಲಾಖೆಗಳು ಅಂತಾರಾ?ಇವರೆಲ್ಲಾ ಮಂತ್ರಿಗಳಾ? ಈ ವ್ಯಕ್ತಿಯನ್ನು ಬೇರೆ ಉಪ ಮುಖ್ಯಮಂತ್ರಿಆಡಬೇಕಿತ್ತಂತೆಂತೆ
ಹೆಚ್.ಕೆ.ಪಾಟೀಲ್ ಏನು ಮಾಡುತ್ತಿದ್ದರು?
ಗಣಿಗಾರಿಕೆ ಬಗ್ಗೆ ತನಿಖೆ ಮಾಡುವಂತೆ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ಪತ್ರ ಬರೆದಿದ್ದಾರೆ. ಅವರು ಈ ಸರ್ಕಾರದಲ್ಲಿ ಎರಡು ವರ್ಷದಿಂದ ಸಚಿವರಾಗಿದ್ದಾರೆ. ಈಗ ಪತ್ರ ಬರೆದಿದ್ದಾರೆ. ಅವರು ಇಷ್ಟು ದಿನ ಏನು ಮಾಡುತ್ತಿದ್ದರು? 2015 – 16ರಲ್ಲಿ ತನಿಖೆ ನಡೆಸುವಂತೆ ಇದೇ ಹೆಚ್.ಕೆ.ಪಾಟೀಲ್ ಅವರೇ ಶಿಫಾರಸು ಮಾಡಿದ್ದರು. ಆ ವರದಿನಿಟ್ಟುಕೊಂಡು ಅವರು ದಿನವೂ ಪೂಜೆ ಮಾಡುತ್ತಿದ್ದಾರಾ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.