ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ; 224 ಶಾಸಕರಿಗೂ ಗೊತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿ

Commission scam in Congress government; 224 MLAs know about it, says H.D. Kumaraswamy

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಶನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಹೇಳಿದರು.

ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ಶಾಸಕರ ಹಣೆಬರಹವೋ ಏನೋ, ತಮ್ಮ ಕ್ಷೇತ್ರಗಳಿಗೆ ಸರ್ಕಾರದ ಯಾವುದೇ ಕಾರ್ಯಕ್ರಮ ತೆಗೆದುಕೊಂಡು ಹೋಗಬೇಕಾದರೆ ಪೇಮೆಂಟ್ ಆಗಲೇಬೇಕು. ಈ ಸರ್ಕಾರದಲ್ಲಿ ಇದೇ ನಡೆಯುತ್ತಿದೆ ಎಂದು ಆರೋಪಿಸಿದರು.

ಈ ಮುಖ್ಯಮಂತ್ರಿಗೆ ಮಾನ‌ ಮರ್ಯಾದೆ ಎನ್ನುವುದು ಇದೆಯಾ? ಇಂಥ ಭ್ರಷ್ಟನನ್ನು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ. ಅಂತಹ ವ್ಯಕ್ತಿಯನ್ನು ಇನ್ನೂ ಸಂಪುಟದಲ್ಲಿ ಇಟ್ಟುಕೊಂಡಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಈ ಸರ್ಕಾರದಲ್ಲಿ ಭ್ರಷ್ಟಾಚಾರ, ಕಮೀಶನ್ ವ್ಯವಹಾರ ಅವ್ಯಾಹತವಾಗಿ ಸಾಗಿದೆ. ಅದಕ್ಕೆ ಕೊನೆ ಎಂಬುದೇ ಇಲ್ಲ. ಪ್ರತಿಯೊಬ್ಬ ಶಾಸಕರು ಇದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ವಸತಿ ಇಲಾಖೆಯ ಕರ್ಮಕಾಂಡದ ಬಗ್ಗೆ ಬೀದಿ ಬೀದಿಯಲ್ಲಿ ಚರ್ಚೆ ಆಗುತ್ತಿದೆ. ಇವೆಲ್ಲವನ್ನು ಇಲಾಖೆಗಳು ಅಂತಾರಾ?ಇವರೆಲ್ಲಾ ಮಂತ್ರಿಗಳಾ? ಈ ವ್ಯಕ್ತಿಯನ್ನು ಬೇರೆ ಉಪ ಮುಖ್ಯಮಂತ್ರಿಆಡಬೇಕಿತ್ತಂತೆಂತೆ

ಹೆಚ್.ಕೆ‌.ಪಾಟೀಲ್ ಏನು ಮಾಡುತ್ತಿದ್ದರು?

ಗಣಿಗಾರಿಕೆ ಬಗ್ಗೆ ತನಿಖೆ ಮಾಡುವಂತೆ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ‌.ಪಾಟೀಲ್ ಅವರು ಪತ್ರ ಬರೆದಿದ್ದಾರೆ. ಅವರು ಈ ಸರ್ಕಾರದಲ್ಲಿ ಎರಡು ವರ್ಷದಿಂದ ಸಚಿವರಾಗಿದ್ದಾರೆ. ಈಗ ಪತ್ರ ಬರೆದಿದ್ದಾರೆ. ಅವರು ಇಷ್ಟು ದಿನ ಏನು ಮಾಡುತ್ತಿದ್ದರು? 2015 – 16ರಲ್ಲಿ ತನಿಖೆ ನಡೆಸುವಂತೆ ಇದೇ ಹೆಚ್.ಕೆ.ಪಾಟೀಲ್ ಅವರೇ ಶಿಫಾರಸು ಮಾಡಿದ್ದರು. ಆ ವರದಿನಿಟ್ಟುಕೊಂಡು ಅವರು ದಿನವೂ ಪೂಜೆ ಮಾಡುತ್ತಿದ್ದಾರಾ? ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.

ರಾಜಕೀಯ

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿಸಿಎಂ ಡಿ.ಕೆ.

“ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್ ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="121720"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]