ಜನಸಾಮಾನ್ಯರ ಮಕ್ಕಳಿಗಾಗಿ ಕೃಷಿ ಕಾಲೇಜು ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್

Establishment of an agricultural college for the children of common people: DCM D.K. Shivakumar

ಕನಕಪುರ: “ರೂರಲ್ ಎಜುಕೇಶನ್ ಸೊಸೈಟಿ ಉಳಿಸಿ, ಬೆಳೆಸುವುದು ನನ್ನ ಕೆಲಸ. ಜನಸಾಮಾನ್ಯರ ಮಕ್ಕಳಿಗಾಗಿ ಈ ಸಂಸ್ಥೆಯಿಂದ ಕೃಷಿ ಕಾಲೇಜು ನಿರ್ಮಾಣವಾಗಿದೆ. ಈ ಸಂಸ್ಥೆ ಬೆಂಗಳೂರು ದಕ್ಷಿಣ ಜಿಲ್ಲೆಯ ಹೆಮ್ಮೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಅವರು ಹೇಳಿದರು.

ಕನಕಪುರದ ಹಾರೋಹಳ್ಳಿಯ ಮರಳವಾಡಿಯಲ್ಲಿ ಸ್ಥಾಪನೆಯಾಗಿರುವ ನೂತನ ಕರಿಯಪ್ಪ ಕೃಷಿ ಮಹಾವಿದ್ಯಾಲಯದ ಕಟ್ಟಡಕ್ಕೆ ಶಿವಕುಮಾರ್ ಭಾನುವಾರದಂದು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

“ನನಗೂ ಹಾಗೂ ಸಂಸ್ಥೆಯ ಅಧ್ಯಕ್ಷರಾದ ಶ್ರೀಕಂಠು ಅವರಿಗೆ ಸಂಸ್ಥೆಯ ಜಾಗ ಎಲ್ಲಿ ಒತ್ತುವರಿಯಾಗುತ್ತದೆಯೋ ಎನ್ನುವ ಆಂತಕವಿತ್ತು. ಈಗ ಸದರಿ ಜಾಗದಲ್ಲಿ ಕೃಷಿ ಕಾಲೇಜು ಸ್ಥಾಪನೆಯಾಗುತ್ತಿರುವುದು ಸಮಾಧಾನ ತಂದಿದೆ” ಎಂದರು.

“ರೂರಲ್ ಎಜುಕೇಶನ್ ಸೊಸೈಟಿ ಅವರು ನನ್ನನ್ನು ಸರಿಯಾಗಿ ಉಪಯೋಗಿಸಿಕೊಳ್ಳುತ್ತಾ ಇರಲಿಲ್ಲ‌. ಈ ಹಿಂದೆ ಡಿ.ಲಿಂಗೇಗೌಡರು, ಚನ್ನಬಸವೇಗೌಡರ ಕಾಲದಿಂದಲೂ ಈ ಬಗ್ಗೆ ನಾನು ಹೇಳುತ್ತಾ ಬಂದಿದ್ದೇನೆ. ಚನ್ನಬಸವೇಗೌಡರ ಕಾಲದಲ್ಲಿಯೇ ನರ್ಸಿಂಗ್ ಕಾಲೇಜು ಮಂಜೂರು ಆಗಿದ್ದರು ನನ್ನನ್ನು ಭೇಟಿ ಮಾಡಲು ಅವಮಾನ ಎಂದುಕೊಂಡು ಬಂದಿರಲಿಲ್ಲ” ಎಂದು ಹೇಳಿದರು.

ಜಿಲ್ಲೆಯ ಹೆಸರು ಬದಲಾವಣೆಯಿಂದ ಜನಜೀವನ ಬದಲಾವಣೆ

“ಬೆಂಗಳೂರು ‌ದಕ್ಷಿಣ ಜಿಲ್ಲೆ ಎಂದು ಹೆಸರು ಬದಲಾವಣೆ ‌ಕಾರಣಕ್ಕೆ ಏನೆಲ್ಲಾ ಬದಲಾವಣೆಯಾಗುತ್ತಿದೆ ಎಂಬುದು ಜನರಿಗೆ ಅರ್ಥವಾಗುತ್ತಿದೆ. ಕೆಲವೊಬ್ಬರು ಇದನ್ನು ಟೀಕೆ ಮಾಡುತ್ತಿದ್ದಾರೆ. ಅವರುಗಳಿಗೆ ನಾನು ಉತ್ತರ ನೀಡಲು ಹೋಗುವುದಿಲ್ಲ. ನಾವು ನಮಗೆ ಇರುವ ಹೆಸರನ್ನು ಉಳಿಸಿಕೊಂಡಿದ್ದೇವೆ. ಯಾರ ಹೆಸರನ್ನು ಕಿತ್ತುಕೊಂಡಿಲ್ಲ” ಎಂದರು.

“ನಾನು ಈ ಹಿಂದೆ ಬೆಂಗಳೂರು ಗ್ರಾಮಾಂತರದ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದೆ. ಸುರೇಶ್ ಅವರು ಬೆಂಗಳೂರು ಹಾಲು ಒಕ್ಕೂಟದ ಸದಸ್ಯರಾಗಿದ್ದಾರೆ. ಸಂಸತ್ ಕ್ಷೇತ್ರವನ್ನು ಬೆಂಗಳೂರು ಗ್ರಾಮಾಂತರ ಎಂದು ಕರೆಯಲಾಗುತ್ತದೆ. ಎಲ್ಲಿಂದ ಎಲ್ಲಿಗೆ ಹೋದರು ಅಮೇರಿಕಾ ಎನ್ನುತ್ತಾರೆ. ಅದೇ ರೀತಿ ಇದೂ ಕೂಡ ಬೆಂಗಳೂರು” ಎಂದು ಹೇಳಿದರು.

“ಈಗಾಗಲೇ ರಾಮನಗರ ಕ್ಷೇತ್ರಕ್ಕೆ 1 ಸಾವಿರ ಕೋಟಿಯಷ್ಟು ಅನುದಾನ ನೀಡಲಾಗಿದೆ. ಇದರ ಬಗ್ಗೆ ಅವರು ಪಟ್ಟಿ ಬಿಡುಗಡೆ ಮಾಡುತ್ತಾರೆ. ಚನ್ನಪಟ್ಟಣ ಉಪಚುನಾವಣೆ ವೇಳೆ 300 ಕೋಟಿಗೂ ಹೆಚ್ಚು ಹಣ ಕ್ಷೇತ್ರಕ್ಕೆ ನೀಡಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯವನ್ನು ಪ್ರಾರಂಭ ಮಾಡಲಾಗಿದೆ” ಎಂದು ತಿಳಿಸಿದರು.

“ಹಾರೋಹಳ್ಳಿ, ಕೋಡಹಳ್ಳಿ, ಸಾತನೂರು, ಕನಕಪುರ ಮುಖ್ಯರಸ್ತೆಗಳನ್ನು ಈ ಹಿಂದೆ ಅಗಲ ಮಾಡಲಾಯಿತು. ಆದ ಕಾರಣಕ್ಕೆ ಆಸ್ತಿ ಮೌಲ್ಯ ಹೆಚ್ಚಾಗಿದೆ. ರಸ್ತೆ ಅಗಲೀಕರಣ‌ ಮಾಡಿದಷ್ಟು ಆಸ್ತಿ ಮೌಲ್ಯ ಹೆಚ್ಚಾಗಲಿದೆ. ಪಿ.ಜಿ.ಆರ್.ಸಿಂಧ್ಯಾ ಅವರು ಮತಗಳು ಹೋಗುತ್ತವೆ ಎಂದು ರಸ್ತೆ ಅಗಲೀಕರಣ ಮಾಡಿರಲಿಲ್ಲ. 500 ಮತಗಳನ್ನು ನೋಡಲು ಹೋದರೆ 5 ಸಾವಿರ ಮತಗಳನ್ನು ಕಳೆದುಕೊಳ್ಳಬೇಕಾಗುತ್ತದೆ” ಎಂದರು.

“ಉತ್ತಮವಾದ ಕೃಷಿ ಕಾಲೇಜು ನಿರ್ಮಾಣವಾಗುತ್ತಿದೆ. ತುಂಡು,‌ ತುಂಡು ಕಾಮಗಾರಿ ಮಾಡಲು ಹೋಗಬೇಡಿ, ಈಗಲೇ 500 ವಿದ್ಯಾರ್ಥಿ ಸಾಮರ್ಥ್ಯದ ಹಾಸ್ಟಲ್,‌ ಆಡಳಿತ ಭವನ ನಿರ್ಮಾಣವೂ ಆಗಲಿ‌ ಎಂದು ಸಲಹೆ ನೀಡುತ್ತೇನೆ. ಸಾಲ ಸೌಲಭ್ಯ ದೊರೆಯಲಿಲ್ಲ‌ ಎಂದರೆ ನಾನು ಸಾಲ ಕೊಡಿಸುತ್ತೇನೆ. ಈಗಾಗಲೇ ನಾನು ಕಟ್ಟಡ ವಾಸ್ತುಶಿಲ್ಪಿಗಳ ಬಳಿ ಕಟ್ಟಡ ವಿನ್ಯಾಸ ಹೇಗಿರಬೇಕು ಎಂದು ಚರ್ಚೆ ನಡೆಸಿ ಬದಲಾವಣೆ ಸೂಚಿಸಿದ್ದೇನೆ” ಎಂದರು.

ವಸತಿ ಅಕ್ರಮ‌ ಸುಳ್ಳು

ದುಡ್ಡು ಪಡೆದು ಮನೆ ನೀಡಿದ್ದೀರಿ ಎನ್ನುವ ಶಾಸಕ ಬಿ.ಆರ್.ಪಾಟೀಲ್ ಅವರ ಆರೋಪದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಅವರು, “ಇದೆಲ್ಲವೂ ಸುಳ್ಳು, ಯಾರೋ ಒಬ್ಬ ಹೇಳಿದರೆ ಇದೆಲ್ಲವೂ ಆಗುತ್ತದೆಯೇ? ನಾನು ಅಥವಾ ನೀವು ಬಂದು ಗ್ರಾಮ ಸಭೆಯಲ್ಲಿ ಮನೆ ಕೇಳಿದ ತಕ್ಷಣ ಕೊಡಲು ಆಗುತ್ತದೆಯೇ? ಮನೆ ನೀಡಲು ತೀರ್ಮಾನ ಮಾಡುವವರು ಗ್ರಾಮ ಪಂಚಾಯತಿ, ಮುನಿಸಿಪಾಲಿಟಿ ಸೇರಿದಂತೆ ಎಲ್ಲೆಲ್ಲಿ ಮನೆ ನಿಡಬೇಕೋ ಆಯಾಯ ಸ್ಥಳೀಯ ಸಂಸ್ಥೆಗಳು ತೀರ್ಮಾನ ಮಾಡುತ್ತಾರೆ. ನಾವು ತೀರ್ಮಾನ ಮಾಡಲು ಆಗುತ್ತದೆಯೇ” ಎಂದರು.

“ಬಿ.ಆರ್.ಪಾಟೀಲ್ ಅವರಿಗೆ ಪೂರ್ಣ ಮಾಹಿತಿ ತಿಳಿದಿದೆಯೋ ಇಲ್ಲವೊ ಗೊತ್ತಿಲ್ಲ. ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ನಾನು ಅವರ ಬಳಿ ಮಾತನಾಡುತ್ತೇನೆ” ಎಂದು ಸ್ಪಷ್ಟವಾಗಿ ನುಡಿದರು.

ರಾಜಕೀಯ

ಮೋದಿಜೀ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ಫಲಿತಾಂಶ: ಬಿ.ವೈ.ವಿಜಯೇಂದ್ರ ವಿಶ್ಲೇಷಣೆ

ಮೋದಿಜೀ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ಫಲಿತಾಂಶ: ಬಿ.ವೈ.ವಿಜಯೇಂದ್ರ ವಿಶ್ಲೇಷಣೆ

ಪಶ್ಚಿಮ ಬಂಗಾಲ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಗೆಲುವು ಒಂದು ಕಡೆ ನರೇಂದ್ರ ಮೋದಿಜೀ ಅವರ ನಾಯಕತ್ವಕ್ಕೆ ದೊಡ್ಡ ಶಕ್ತಿಯನ್ನು ತುಂಬಿದಂತಾಗಿದೆ. ನಮ್ಮ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್‍ಜೀ ಅವರ ಮೊದಲ ಚುನಾವಣೆ ಇದಾಗಿದೆ. ಬಹುದೊಡ್ಡ

[ccc_my_favorite_select_button post_id="121714"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]