BJP's mass movement against the state government: Basavaraj Bommai

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಜನಾಂದೋಲನ: ಬಸವರಾಜ ಬೊಮ್ಮಾಯಿ

ಹಾವೇರಿ: ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಜನಾಂದೋಲನ ಮಾಡಬೇಕೆಂದು ಬಿಜೆಪಿ ತೀರ್ಮಾನ ಮಾಡಿದೆ. ಜನರ ವಿಶ್ವಾಸದೊಂದಿಗೆ ಯಾವ ಪ್ರದೇಶದಲ್ಲಿ ಯಾವ ವಿಷಯ ತೆಗೆದುಕೊಂಡು ಜನಾಂದೋಲನ ರೂಪಿಸಬೇಕು ಎಂದು ಪಕ್ಷದ ಪ್ರಮುಖರ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ಶೂನ್ಯವಾಗಿದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ. ಸ್ಥಳೀಯ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದ ವರಗೆ ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಪ್ರಾಮಾಣಿಕ ಅಧಿಕಾರಿಗಳ ನೈತಿಕತೆ ಕುಂದಿದೆ.

ಆಡಳಿತ ಪಕ್ಷದ ಶಾಸಕರು ಮಾತಾಡಿದರೂ ಸಿಎಂ ಹಾಗೂ ಡಿಸಿಎಂ ತುಟಿ ಪಿಟಕ್ ಅನ್ನುತ್ತಿಲ್ಲ. ಸಂಪುಟ ಸಹೋದ್ಯೋಗಿಗಳು ಬಹಿರಂಗವಾಗಿ ಪತ್ರ ಬರೆಯುತ್ತಾರೆ. ಸಚಿವ ಸಂಪುಟದಲ್ಲೂ ಸಾಮರಸ್ಯ ವಿಶ್ವಾಸ ಇಲ್ಲ. ಸಚಿವರು ಸಂಪುಟದಲ್ಲಿ ಎತ್ತುವ ಪ್ರಶ್ನೆಗಳಿಗೆ ಸ್ಪಂದನೆ ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಬಹಿರಂಗವಾಗಿ ಪತ್ರ ಬರೆಯುತ್ತಿದ್ದಾರೆ ಎಂದರು.

ಮಳೆ ಬಂದರೂ ಪರಿಹಾರ ಇಲ್ಲ. ಬೆಳೆ ಹಾನಿಗೆ ಪರಿಹಾರ ಇಲ್ಲ. ಮನೆ ಕುಸಿದರೂ ಪರಿಹಾರ ಇಲ್ಲ. ಯಾವುದೇ ರೀತಿ ಜನ ಸ್ಪಂದನೆ ಕೆಲಸ ಆಗ್ತಾ ಇಲ್ಲ. ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಜನಾಂದೋಲನ ಪ್ರಾರಂಭ ಆಗಲಿದೆ. ಯಾವ್ಯಾವ ಪ್ರದೇಶಗಳಲ್ಲಿ ಯಾವ ವಿಷಯ ಇದೆ ಅದನ್ನು ತೆಗೆದುಕೊಂಡು ಜನರ ವಿಶ್ವಾಸದೊಂದಿಗೆ ಜನಾಂದೋಲನ ಮಾಡಬೇಕೆಂದು ಬಿಜೆಪಿ ತೀರ್ಮಾನ ಮಾಡಿದೆ.

ಯಾವ ಪ್ರದೇಶದಲ್ಲಿ ಯಾವ ವಿಷಯ ತೆಗೆದುಕೊಂಡು ಜನಾಂದೋಲನ ರೂಪಿಸಬೇಕು ಎಂದು ಪಕ್ಷದ ಪ್ರಮುಖರ ಜೊತೆ ಚರ್ಚೆ, ಚಿಂತನ ಮಂಥನ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೂಚನೆ ನೀಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು ಎಲ್ಲರೂ ಸೇರಿ ಶೀಘ್ರದಲ್ಲೇ ಜನಾಂದೋಲನ ಪೂರ್ವಭಾವಿ ಸಭೆ ಮಾಡುತ್ತೇವೆ ಎಂದು ಹೇಳಿದರು.

ಎಲ್ಲರೂ ಪಾಲುದಾರರು

ಈಗಾಗಲೇ ಸರ್ಕಾರದ ವಿರುದ್ದ ಪಿ.ಡಬ್ಲು ಡಿ ಗುತ್ತಿಗೆದಾರರು ಆರೋಪ ಮಾಡಿದ್ದಾರೆ. ಲಿಕ್ಕರ್ ಶಾಪ್ ಅಸೋಸಿಯೇಷನ್ ನವರು ಎಲ್ಲದಕ್ಕೂ ಹಣ ವಸೂಲಿ ಮಾಡುತ್ತಿದ್ದಾರೆ, ಅಧಿಕಾರಿಗಳ ವರ್ಗಾವಣೆಗೂ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಕಂಪ್ಲೇಂಟ್ ಮಾಡಿದ್ದಾರೆ.

ಕೆ.ಇ.ಬಿ ಕಾಂಟ್ರಾಕ್ಟರ್ಸ್ 500 ರೂ. ಬೆಲೆಯ ಸ್ಮಾರ್ಟ್ ಮೀಟರ್ ಗೆ 4 ರಿಂದ 5 ಸಾವಿರ ವಸೂಲಿ ಮಾಡುತ್ತಿದ್ದಾರೆ ಎಂದು ಕಂಪ್ಲೇಂಟ್ ಮಾಡಿದ್ದಾರೆ. ಎಲ್ಲಾ ಅಸೋಸಿಯೇಷನ್ ದವರು ಲಂಚಾವತಾರದ ಬಗ್ಗೆ ಬಹಿರಂಗಗೊಳಿಸಿದರೂ ಸರ್ಕಾರ ಇದಕ್ಕೆ ಯಾವುದೇ ರೀತಿಯ ಸ್ಪಂದನೆ ಮಾಡದಿರುವುದನ್ನು ನೋಡಿದರೆ ಎಲ್ಲರೂ ಕೂಡ ಇದರಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.

ಜಿಲ್ಲಾಡಳಿತ ಹೊಣೆ

ರೈತರ ಆತ್ಮಹತ್ಯೆ ಪರಿಶೀಲನೆ ವ್ಯವಸ್ಥೆ ಮಾಡುವುದು ವ್ಯವಸ್ಥೆನೇ ಇದೆ. ಸಚಿವ ಶಿವಾನಂದ ಪಾಟೀಲ್ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಮಾತುಗಳನ್ನಾಡಿದ್ದಾರೆ. ರೈತರ ಆತ್ಮಹತ್ಯೆ ಪ್ರಕರಣಗಳ ಹೊಣೆ ಜಿಲ್ಲಾಡಳಿತ ಹೊರಬೇಕು, ಸರ್ಕಾರ ಪರಿಹಾರ ಕೊಡಬೇಕು. ರೈತ ಸಂಪರ್ಕ ಕೇಂದ್ರದಿಂದ ನಕಲಿ ಬೀಜ ಕೊಟ್ಟಿದಾರೆ. ಸರ್ಕಾರವೇ ಡುಬ್ಲಿಕೇಟ್ ಮಾಡಿದ ಹಾಗೆ ಆಯಿತು. ಪಕ್ಕದ ಧಾರವಾಡ ಜಿಲ್ಲೆಯಲ್ಲಿ ಚೆನ್ನಾಗಿ ಬೀಜಗಳು ಹುಟ್ಟಿದೆ. ಅಲ್ಲಿ ಮಧ್ಯ ಪ್ರದೇಶದಿಂದ ತರಿಸಿದ್ದಾರೆ.

ಮಹಾರಾಷ್ಟ್ರದಿಂದ ತರಿಸಿದ್ದು ಇಲ್ಲಿದೆ. ಕೃಷಿ ಸಚಿವರು ಈ ಬಗ್ಗೆ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!