ಕಾರಿನ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು: ಮಾಜಿ ಸಿಎಂ ಜಗನ್ ವಿರುದ್ಧ FIR

Man dies after getting trapped under car wheel: FIR against former CM Jagan

ಗುಂಟೂರು: ರ್‍ಯಾಲಿ ವೇಳೆ ಸಂಭವಿಸಿದ ರಸ್ತೆ ಅಪಘಾತ ಓರ್ವ ವ್ಯಕ್ತಿ ಸಾವನಪ್ಪಿರುವ ಪ್ರಕರಣದಲ್ಲಿ ವೈಎಸ್‌ಆರ್‌ಸಿಪಿ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ (Y.S. Jagan Mohan Reddy) ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಸ್. ಸತೀಶ್ ಕುಮಾರ್ ತಿಳಿಸಿದ್ದಾರೆ.

ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ಜಗನ್ ಮೋಹನ್ ರೆಡ್ಡಿ ಅವರ ಚಾಲಕ ರಮಣ ರೆಡ್ಡಿ, ಆಪ್ತ ಸಹಾಯಕ ಕೆ.ನಾಗೇಶ್ವರ ರೆಡ್ಡಿ, ವೈಎಸ್‌ಆರ್‌ಸಿಪಿ ಹಿರಿಯ ಮುಖಂಡ ವೈ.ವಿ ಸುಬ್ಬಾರೆಡ್ಡಿ, ಮಾಜಿ ಶಾಸಕ ಪೆರ್ಣಿ ವೆಂಕಟರಾಮಯ್ಯ, ಮಾಜಿ ಸಚಿವ ವಿಡದಲ ರಜಿನಿ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ ವೈಎಸ್‌ಆರ್‌ಸಿಪಿ ಕಾರ್ಯಕರ್ತನ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಜಗನ್ ಅವರು, ಜೂನ್ 18ರಂದು ಪಲ್ನಾಡು ಜಿಲ್ಲೆಯ ರೆಂಟಪಲ್ಲ ಗ್ರಾಮಕ್ಕೆ ತೆರಳುತ್ತಿದ್ದರು.

ಗ್ರಾಮದಲ್ಲಿ ರ್‍ಯಾಲಿ ಆಯೋಜಿಸಲಾಗಿತ್ತು. ಯಾಲಿ ವೇಳೆ ಗುಂಟೂರು ನಗರದ ಹೊರವಲಯದ ಎಟುಕೂರು ಬಳಿ ಜಗನ್ ಅವರ ಬೆಂಗಾವಲು ವಾಹನಕ್ಕೆ ಸಿಲುಕಿ ಪಕ್ಷದ ಕಾರ್ಯಕರ್ತ ಚೀಲಿ ಸಿಂಗಯ್ಯ ಎಂಬುವವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಹಲವು ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ವಿವಿಧ ಸಾಕ್ಷ್ಯಗಳನ್ನು ಪರಿಶೀಲಿಸಲಾಗಿದ್ದು, ಚೀಲಿ ಸಿಂಗಯ್ಯ ( ಮೃತ ವ್ಯಕ್ತಿ) ಜಗನ್ ಅವರ ಬೆಂಗಾವಲು ವಾಹನದ ಚಕ್ರದ ಅಡಿಯಲ್ಲಿ ಸಿಲುಕಿರುವುದು ಕಂಡುಬಂದಿದೆ ಎಂದು ಗುಂಟೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಸ್. ಸತೀಶ್ ಕುಮಾರ್ ಭಾನುವಾರ ತಡರಾತ್ರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಿಂಗಯ್ಯ ಅವರು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಕುಮಾರ್ ಹೇಳಿದ್ದಾರೆ.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಸಿಂಗಯ್ಯ ಅವರ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಬಿಎನ್‌ಎಸ್ ಸೆಕ್ಷನ್ 106(1) (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಆರಂಭದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಸಿಸಿಟಿವಿ ದೃಶ್ಯಾವಳಿಗಳು, ಡೋನ್ ದೃಶ್ಯಗಳು ಮತ್ತು ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಶೀಲಿಸಲಾಗಿದೆ. ಸಿಂಗಯ್ಯ ಅವರ ಮೇಲೆ ಜಗನ್ ಅವರ ಬೆಂಗಾವಲು ಪಡೆ ವಾಹನ ಹರಿದಿದ್ದು, ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಪೊಲೀಸರು ಬಿಎನ್‌ಎಸ್ ಸೆಕ್ಷನ್ 105 (ಕೊಲೆಗೆ ಸಮಾನವಲ್ಲದ ನರಹತ್ಯೆ) ಮತ್ತು ಸೆಕ್ಷನ್ 49 (ಹತ್ಯೆಗೆ ಪ್ರೇರಣೆ) ಅಡಿಯಲ್ಲಿ ಪ್ರಕಣ ದಾಖಲಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ರಾಜಕೀಯ

ಮೋದಿಜೀ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ಫಲಿತಾಂಶ: ಬಿ.ವೈ.ವಿಜಯೇಂದ್ರ ವಿಶ್ಲೇಷಣೆ

ಮೋದಿಜೀ ಅವರ ನಾಯಕತ್ವಕ್ಕೆ ಶಕ್ತಿ ತುಂಬುವ ಫಲಿತಾಂಶ: ಬಿ.ವೈ.ವಿಜಯೇಂದ್ರ ವಿಶ್ಲೇಷಣೆ

ಪಶ್ಚಿಮ ಬಂಗಾಲ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಗೆಲುವು ಒಂದು ಕಡೆ ನರೇಂದ್ರ ಮೋದಿಜೀ ಅವರ ನಾಯಕತ್ವಕ್ಕೆ ದೊಡ್ಡ ಶಕ್ತಿಯನ್ನು ತುಂಬಿದಂತಾಗಿದೆ. ನಮ್ಮ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್‍ಜೀ ಅವರ ಮೊದಲ ಚುನಾವಣೆ ಇದಾಗಿದೆ. ಬಹುದೊಡ್ಡ

[ccc_my_favorite_select_button post_id="121714"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]