58 ದಿನಗಳ ನಿಖಿಲ್ ಕುಮಾರಸ್ವಾಮಿ ಪ್ರವಾಸ ನಾಳೆ ರಾಮನಗರ ಜಿಲ್ಲೆಗೆ

Nikhil Kumaraswamy's 58-day tour to Chikkaballapur district tomorrow

ಬೆಂಗಳೂರು: ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿಗೆ (Nikhil Kumaraswamy) ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ನಾಳೆಯಿಂದ ಎರಡು ದಿನಗಳ ಕಾಲ ರಾಮನಗರ ಜಿಲ್ಲೆಯಲ್ಲಿ ನಡೆಯಲಿದೆ.

ಪಕ್ಷ ಸಂಘಟನೆಗಾಗಿ ಹಮ್ಮಿಕೊಳ್ಳಲಾಗಿರುವ ರಾಜ್ಯ ಪ್ರವಾಸ ಹಾಗೂ ʼಮಿಸ್ ಕಾಲ್ʼ ಸದಸ್ಯತ್ವ ಈಗಾಗಲೇ ತುಮಕೂರು ಜಿಲ್ಲೆಯ 8 ವಿಧಾನಸಭೆ ಕ್ಷೇತ್ರಗಳಲ್ಲಿ ನಾಲ್ಕು ದಿನಗಳ ಪ್ರವಾಸವನ್ನು ಯಶಸ್ವಿಯಾಗಿ ನಡೆದಿದೆ.

ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭೆ ಕ್ಷೇತ್ರದಿಂದ ಆರಂಭವಾದ ರಾಜ್ಯ ಪ್ರವಾಸ ಹಾಗೂ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ನಿರೀಕ್ಷೆಗೂ ಮೀರಿದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದು ನನ್ನ ರಾಜ್ಯ ಪ್ರವಾಸಕ್ಕೆ ಮತ್ತಷ್ಟು ಹುರುಪು ಬಂದಿದೆ ಎಂದು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕನಿಷ್ಠ ಐವತ್ತು ಲಕ್ಷ ಜನ ಸದಸ್ಯತ್ವದ ಗುರಿ ಇಟ್ಟುಕೊಂಡು ರಾಜ್ಯ ಪ್ರವಾಸ ಆರಂಭಿಸಿರುವ ಅವರು ನಾಳೆಯಿಂದ ಬಹುತೇಕ ಜಿಲ್ಲೆ, ತಾಲೂಕುಗಳಿಗೆ ಭೇಟಿ ನೀಡಲಿದ್ದಾರೆ, 58 ದಿನಗಳ ಕಾಲ ನಿಮ್ಮ ಜೊತೆ ನಿರಂತರವಾಗಿ ಹೆಜ್ಜೆ ಹಾಕಲಿದ್ದಾರೆ.ಎಲ್ಲಾ ಜಿಲ್ಲೆಯ ನಾಯಕರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡಿ ಪಕ್ಷಕ್ಕೆ ಬಲ ತುಂಬುವಂತ ಕೆಲಸ ಮಾಡಲಿದ್ದಾರೆ.

ಪಕ್ಷ ಸಂಘಟನೆ ಮತ್ತು ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ನಿಮ್ಮೆಲ್ಲರ ದುಡಿಮೆಗೆ ತಕ್ಕಂತೆ ಅಧಿಕಾರ ಕೊಡಿಸಿದಾಗ ಮಾತ್ರ ನಿಮ್ಮೆಲ್ಲರ ಋಣ ತೀರಿಸಿದಂತಾಗುತ್ತದೆ.‌ ಇದು ನನ್ನ ನಂಬಿಕೆ ಮತ್ತು ವಿಶ್ವಾಸಕ್ಕೆ ನಾನು 58 ದಿನಗಳ ಪ್ರವಾಸ ಆರಂಭಿಸಿದ್ದೇನೆ ಹೀಗೆ ನಿಮ್ಮಸಹಕಾರ ನಿರಂತರವಾಗಿರಲಿ ಎಂದು ಮನವಿ ಮಾಡಿದರು.

ನಾನು ಆಗಮಿಸಿದಾಗ ನೀವು ನನಗೆ ತೋರಿದ ಅಭಿಮಾನಕ್ಕೆ ಚಿರಋಣಿ ಹಾಗೂ ಕಾರ್ಯಕರ್ತರು ಮನೆಗೆ ಕರೆದು ಸತ್ಕರಿಸಿದ ಸಂದರ್ಭದಲ್ಲಿ ತಾಯಂದಿರು, ಅಣ್ಣತಮ್ಮಂದಿರು ತೋರಿದ ಪ್ರೀತಿ, ವಿಶ್ವಾಸಕ್ಕೆ ನಾನು ಧನ್ಯನಾಗಿದ್ದೇನೆ. ನೀವೆಲ್ಲರೂ ಕಳೆದ 26 ವರ್ಷಗಳಿಂದ ಈ ಪಕ್ಷದ ಮೇಲಿಟ್ಟಿರುವ ಅಭಿಮಾನ, ಬದ್ಧತೆಯಿಂದ ಜೆಡಿಎಸ್ ಸುಭದ್ರವಾಗಿದೆ.

ದೇವೇಗೌಡರು ಮತ್ತು ಕುಮಾರಣ್ಣನವರಿಗೆ ನೀವು ತೋರಿಸಿದಷ್ಟು ಪ್ರೀತಿಯನ್ನೇ ನನಗೂ ತೋರಿಸಿದ್ದೀರಿ. ನನ್ನ ಕೊನೆಯ ಉಸಿರು ಇರುವವರೆಗೂ ಪಕ್ಷವನ್ನು ಕಟ್ಟಲು ನನ್ನ ಹೋರಾಟ ನಿರಂತರವಾಗಿರುತ್ತದೆ. ನಾವೆಲ್ಲರೂ ಜೊತೆಯಾಗಿ ಹೆಜ್ಜೆ ಹಾಕೋಣ. ಬಲಿಷ್ಠವಾಗಿ ಪಕ್ಷ ಕಟ್ಟೋಣ, ಮತ್ತೆ ಕುಮಾರಣ್ಣನವರನ್ನು ಮುಖ್ಯಮಂತ್ರಿ ಮಾಡೋಣ ಎಂದರು.

ಜೆಡಿಎಸ್ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ, ಕಾರ್ಯಕರ್ತರ ಶ್ರಮದಿಂದ ಕಟ್ಟಿರುವ ಪಕ್ಷ ನಮ್ಮದು, ಪಕ್ಷ ಸಂಘಟಿಸುವ ಜವಾಬ್ದಾರಿಯನ್ನು ಹಿರಿಯರು ನನಗೆ ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದೇನೆ. 50 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಮಾಡುವ ಉದ್ದೇಶದಿಂದ ಮಿಸ್ಡ್ ಕಾಲ್ ಮೂಲಕ ಸದಸ್ಯತ್ವ ಅಭಿಯಾನವನ್ನು ಆರಂಭಿಸಲಾಗಿದೆ.

ನನ್ನ ರಾಜ್ಯ ಪ್ರವಾಸ ಮೂಲಕ ಕಾರ್ಯಕರ್ತರೊಂದಿಗೆ ಸಂಬಂಧ, ಬಾಂಧವ್ಯ, ವಿಶ್ವಾಸ ಬೆಳೆಸಿಕೊಳ್ಳಬೇಕು. ಇಂತಹ ಪ್ರವಾಸ ಮಾಡುತ್ತಿರುವುದು ನನ್ನ ಭಾಗ್ಯ, ಅವರೊಂದಿಗೆ ಉತ್ತಮ ಸಂಬಂಧ ಬೆಳೆಸಿಕೊಳ್ಳಬೇಕು. ಅವರ ವಿಶ್ವಾಸ ಗಳಿಸಬೇಕು. ಅವರಲ್ಲಿ ಉತ್ಸಾಹ ತುಂಬಬೇಕು ಹೀಗಾಗಿ ನಾನು ಈ ರಾಜ್ಯ ಪ್ರವಾಸ ಕೈಗೊಂಡಿದ್ದೇನೆ ಎಂದು ನಿಖಿಲ್ ತಿಳಿಸಿದ್ದಾರೆ.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]