No BJP MP is raising his voice about the injustice being done to the state from the Centre - Cmsiddaramaiah

ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ಅನ್ಯಾಯದ ಬಗ್ಗೆ ಬಿಜೆಪಿಯ ಯಾವುದೇ ಸಂಸದರೂ ಧ್ವನಿ ಎತ್ತುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ರಾಯಚೂರು: 14ನೇ ಹಣಕಾಸಿನ ಆಯೋಗದಿಂದ 15 ನೇ ಹಣಕಾಸಿನ ಆಯೋಗಕ್ಕೆ ಹೋಲಿಸಿದರೆ, ರಾಜ್ಯಕ್ಕೆ ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ. ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ರಾಯಚೂರುನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಪ್ರದಾನಿ ಮೋದಿಯವರೊಂದಿಗೆ ನಿಕಟಸಂಪರ್ಕ ಹೊಂದಿರುವ ಪ್ರಭಾವಿ ಸಚಿವ ಎಂದು ಹೇಳಲಾಗುತ್ತದೆ.11495 ಕೋಟಿ ರೂ.ಗಳನ್ನು ಹಣಕಾಸಿನ ಆಯೋಗದಲ್ಲಿ ವಿಶೇಷ ಅನುದಾನ ನೀಡಲು ಸಮ್ಮತಿ ನೀಡಲಾಗಿದ್ದರೂ, ಕೇಂದ್ರ ಸರ್ಕಾರ ಈ ಅನುದಾನವನ್ನು ರಾಜ್ಯಕ್ಕೆ ಬಿಡುಗಡೆ ಮಾಡಲು ಅವರು ಯಾವುದೇ ಸಹಾಯವನ್ನು ಮಾಡಿಲ್ಲ.

ಕರ್ನಾಟಕದ ಬಗ್ಗೆ ಮಾತನಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರಿಗೆ ಯಾವುದೇ ನೈತಿಕತೆ ಇಲ್ಲ. ರಾಜ್ಯಕ್ಕೆ 11495 ಕೋಟಿ ರೂ. ಇನ್ನೂ ಬಿಡುಗಡೆಯಾಗಿಲ್ಲ ಎಂದರು.

ಕಲ್ಯಾಣ ಕರ್ನಾಟಕಕ್ಕೆ ಕೇಂದ್ರದ ವಿಶೇಷ ಅನುದಾನ ಬಿಡುಗಡೆಗೆ ಒತ್ತಾಯ

ದೆಹಲಿ ಪ್ರವಾಸದ ವಿವರಗಳನ್ನು ಪತ್ರಕರ್ತರಿಗೆ ತಿಳಿಸುತ್ತಾ, ರಾಷ್ಟ್ರಪತಿಗಳ ಅಂಗಳಕ್ಕೆ ಹೋಗಿರುವ ಹಲವು ವಿಧೇಯಕಗಳ ಬಗ್ಗೆ ವಿವರಣೆ ನೀಡಲು ರಾಷ್ಟ್ರಪತಿಗಳನ್ನು ಭೇಟಿಯಾಗುವ ಸಮಯ ಕೋರಲಾಗಿದೆ.

16 ನೇ ಹಣಕಾಸಿನ ಆಯೋಗಕ್ಕೆ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು. ಈ ಬಗ್ಗೆ ಚರ್ಚಿಸಲು ಪ್ರಧಾನಿಯವರನ್ನು, ಹಣಕಾಸಿನ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ಕಲ್ಯಾಣ ಕರ್ನಾಟಕ ಭಾಗಕ್ಕೆ ರಾಜ್ಯಸರ್ಕಾರ 5 ಸಾವಿರ ಕೋಟಿಗಳ ವಿಶೇಷ ಅನುದಾನವನ್ನು ಪ್ರತಿವರ್ಷ ನೀಡುತ್ತಿದ್ದು, ಇದೇ ರೀತಿ, ಈ ಭಾಗದ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಅನುದಾನ ನೀಡಬೇಕೆಂದು ಒತ್ತಾಯಿಸಲಾಗಿದೆ. ಈ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಮಾಡುವ ವಿಚಾರವನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಶಿಕ್ಷಕರ ನೇಮಕಾತಿಗೆ ಆದೇಶ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಕುಸಿಯಲು ಶಿಕ್ಷಕರ ಕೊರತೆ ಕಾರಣವಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಹೊಸ ಶಿಕ್ಷಕರ ನೇಮಕಾತಿಗೆ ಈಗಾಗಲೇ ಆದೇಶ ನೀಡಲಾಗಿದೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಹೊರಬರಲು ಸರ್ಕಾರ ಎಲ್ಲ ಪ್ರಯತ್ನಗಳನ್ನು ಕೈಗೊಳ್ಳಲಿದೆ ಎಂದರು.

ಸಚಿವ ಎಚ್.ಕೆ.ಪಾಟೀಲ್ ಪತ್ರ: ಅಕ್ರಮ ಗಣಿಗಾರಿಕೆ ತನಿಖೆಗೆ ವಿಶೇಷ ಕೋರ್ಟ್ ರಚನೆಗೆ ಮನವಿ

ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆಯ ಬಗ್ಗೆ ಸಚಿವ ಎಚ್.ಕೆ.ಪಾಟೀಲ್ ಮುಖ್ಯಮಂತ್ರಿಗಳಿಗೆ ಬರೆದ ಪತ್ರದ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಅಕ್ರಮ ಗಣಿಗಾರಿಕೆ ಪ್ರಕರಣಗಳು ಹಿಂದಿನ ಅವಧಿಯಲ್ಲಿ ನಡೆದಿದ್ದು, ಈ ಬಗ್ಗೆ ತ್ವರಿತ ತನಿಖೆ ನಡೆಸಲು ವಿಶೇಷ ಕೋರ್ಟ್ ರಚಿಸಿ, ಗಣಿಗಾರಿಕೆಯಲ್ಲಿರುವ ಬಾಕಿಯ ವಸೂಲಾತಿಗೆ ಶೀಘ್ರ ಕ್ರಮಗಳನ್ನು ತೆಗೆದುಕೊಳ್ಳಲು ಪತ್ರದಲ್ಲಿ ತಿಳಿಸಿದ್ದಾರೆ.

ಸಚಿವ ಸಂಪುಟದಲ್ಲಿ ಸದರಿ ವಿಷಯವನ್ನು ಚರ್ಚಿಸಿ ವಿಶೇಷ ನ್ಯಾಯಾಲಯ ರಚಿಸಬೇಕೆಂಬ ಉದ್ದೇಶದಿಂದ ಸಚಿವರು ಪತ್ರ ಬರೆದಿದ್ದಾರೆ. ಅಂದಿನ ಲೋಕಾಯುಕ್ತ ಸಂತೋಷ್ ಹೆಗಡೆಯವರು ಅಕ್ರಮ ಗಣಿಗಾರಿಕೆ ಬಗ್ಗೆ ವರದಿಯನ್ನೂ ನೀಡಿದ್ದರು. ಈ ವರದಿಯ ಬಗ್ಗೆ ವಿಧಾನಸಭೆಯಲ್ಲಿ ನಾನು ಕೇಳಿದ ಪ್ರಶ್ನೆಗೆ ಸರ್ಕಾರದಿಂದ ಸಮರ್ಪಕ ಉತ್ತರ ಬಂದಿರಲಿಲ್ಲ. ಆಗ ಅಕ್ರಮ ಗಣಿಗಾರಿಕೆ ವಿರುದ್ಧ ಬಳ್ಳಾರಿಯಲ್ಲಿ ಪಾದಯಾತ್ರೆ ನಡೆಸಲಾಗಿತ್ತು ಎಂದರು.

ಕಾಂಗ್ರೆಸ್ ಶಾಸಕ ರಾಜು ಕಾಗೇಯವರು ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಪ್ರಾರಂಭವಾಗದಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಅವರೊಂದಿಗೆ ಚರ್ಚಿಸಲಾಗುವುದು. ವಿಶೇಷ ಅನುದಾನವನ್ನು ಅಗತ್ಯವಿರುವ ವಿಧಾನಸಭಾ ಕ್ಷೇತ್ರಗಳಿಗೆ ನೀಡಲಾಗುತ್ತದೆ ಎಂದರು.

ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ವಸತಿ ಸಚಿವರು ರಾಜಿನಾಮೆ ನೀಡಬೇಕು ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಮಾಹಿತಿ ಪಡೆಯುತ್ತೇನೆ. ವಸತಿ ಇಲಾಖೆಯ ವಿಷಯದ ಕುರಿತು ಚರ್ಚಿಸಲು ಶಾಸಕ ಬಿ.ಆರ್.ಪಾಟೀಲ್ ರವರು ಇದೇ 25 ರಂದು ಭೇಟಿಯಾಗುವುದಾಗಿ ತಿಳಿಸಿದ್ದಾರೆ ಎಂದರು.

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!