Drink & Drive: Driver fined Rs. 12,500!

ಕಳಪೆ ಗುಣಮಟ್ಟದ ಸ್ಕೂಟರ್ ಮಾರಿದ Ola Electric ಕಂಪನಿಗೆ ದಂಡ.. ಗ್ರಾಹಕನಿಗೆ ಪರಿಹಾರ ನೀಡಲು ಆದೇಶ..!

ಧಾರವಾಡ: ಗ್ರಾಹಕನಿಗೆ ಕಳಪೆ ಗುಣಮಟ್ಟದ ಸ್ಕೂಟರ್ ಮಾರಿದ Ola Electric ಕಂಪನಿಗೆ ದಂಡ ಮತ್ತು ಪರಿಹಾರ ನೀಡುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ.

ಧಾರವಾಡದ ವಿದ್ಯಾಗಿರಿಯ ನಿವಾಸಿಯಾದ ಮಂಜುನಾಥ ಕೋಟುರ ಅನ್ನುವರು ತಮ್ಮ ಉಪಯೋಗಕ್ಕಾಗಿ 2023 ರಲ್ಲಿ ರೂ.1,31,719 ಹಣ ವಿನಿಯೋಗಿಸಿ ಧಾರವಾಡದಲ್ಲಿ ಎದುರುದಾರರ ಓಲಾ ಎಲೆಕ್ಟ್ರಿಕ್ ಕಂಪನಿಯವರ ಸ್ಕೂಟರ್‍ನ್ನು ಖರೀದಿಸಿದ್ದರು.

ಖರೀದಿಸಿದ ಕೆಲವೇ ದಿನಗಳಲ್ಲಿ ಅವರ ಸ್ಕೂಟರ್ ರಸ್ತೆಯಲ್ಲಿ ಹೋಗುವಾಗ ನಿಲ್ಲುವುದು ಹಾಗೂ ಬ್ಯಾಟರಿ ಸಮಸ್ಯೆ ನೀಡುತ್ತಿತ್ತು. ಈ ಬಗ್ಗೆ ಎದುರುದಾರರ ಸರ್ವಿಸ್ ಸ್ಟೇಷನ್‍ಗೆ ಹಾಗೂ ಗ್ರಾಹಕರ ಸಹಾಯವಾಣಿಗೆ ವಿಷಯ ತಿಳಿಸಿದರೂ ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ.

ದೂರುದಾರರು ವಾಹನವನ್ನು ತಮ್ಮ ಉಪಯೋಗಕ್ಕೆ ಬಳಸದೇ ಅದನ್ನು ತಮ್ಮ ಮನೆಯಲ್ಲಿ ಇಟ್ಟಿರುತ್ತಾರೆ. ಸಾಕಷ್ಟು ಹಣ ವ್ಯಯ ಮಾಡಿ ವಾಹನ ಖರೀದಿಸಿದರು ಅದನ್ನು ದೂರುದಾರರಿಗೆ ಉಪಯೋಗಿಸಲು ಸಾಧ್ಯವಾಗದೇ ಇದ್ದು ಎದುರುದಾರರ ಅಂತಹ ನಡಾವಳಿಕೆ ಗ್ರಾಹಕರ ರಕ್ಷಣಾ ಕಾಯದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಹೇಳಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರುದಾರರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ಜೂನ್ 28, 2024 ದೂರನ್ನು ಸಲ್ಲಿಸಿದ್ದರು.

ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ ಹಾಗೂ ವಿಶಾಲಾಕ್ಷಿ.ಅ.ಬೋಳಶೆಟ್ಟಿ ಸದಸ್ಯರು, ದೂರುದಾರರು ರೂ.1,31,719 ಹಣ ವಿನಿಯೋಗಿಸಿ ತಮ್ಮ ಕೆಲಸಕ್ಕೆ ಅನುಕೂಲವಾಗಲಿ ಅಂತಾ ಎದುರುದಾರ ಓಲಾ ಕಂಪನಿಯಿಂದ ಸ್ಕೂಟರ್ ಖರೀದಿಸಿದ್ದರು. ಆದರೆ ವಾಹನ ಖರೀದಿಸಿದ ಕೆಲವೇ ದಿನಗಳಲ್ಲಿ ಅವು ರಸ್ತೆಯಲ್ಲಿ ಹೋಗುವಾಗ ಸಡನ್ನಾಗಿ ನಿಲ್ಲುವುದು ಮತ್ತು ಬ್ಯಾಟರಿ ಸಮಸ್ಯೆತಂದೊಡ್ಡಿದವು.

ಹೊಸ ವಾಹನ ಆ ರೀತಿಆಗುವುದು ಸರಿಯಾದ ಕ್ರಮಅಲ್ಲ. ಎದುರುದಾರ ಓಲಾ ಎಲೆಕ್ಟ್ರಿಕ್ ಕಂಪನಿ ಮತ್ತುಅವರ ಸರ್ವಿಸ್ ಸ್ಟೇಷನಗೆ ಹಾಗೂ ಅವರ ಗ್ರಾಹಕರ ಸಹಾಯವಾಣಿಗೆ ದೂರುಕೊಟ್ಟರೂ ವಾಹನಗಳ ದುರಸ್ತಿಗೆ ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ.

ಇಂತಹ ಎದುರುದಾರ ನಡಾವಳಿಕೆ ಗ್ರಾಹಕರಾದ ದೂರುದಾರರಿಗೆ ಸೇವಾ ನ್ಯೂನ್ಯತೆ ಎಸಗುವುದರೊಂದಿಗೆ ಅನುಚಿತ ವ್ಯಾಪಾರ ಪದ್ಧತಿ ಮಾಡಿದ್ದಾರೆಂದು ಆಯೋಗ ಎದುರುದಾರ ವಿರುದ್ಧ ಅಭಿಪ್ರಾಯ ಪಟ್ಟು ತೀರ್ಪು ನೀಡಿದೆ.

ಎಲೆಕ್ಟ್ರಿಕ್ ಓಲಾ ಕಂಪನಿಯ ಉತ್ಪಾದನೆಯ ಸ್ಕೂಟರಗಳು ಇಂತಹದೇ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆಆದ ಬಗ್ಗೆ ಕೇಂದ್ರ ಗ್ರಾಹಕರ ಸಂರಕ್ಷಣಾ ಪ್ರಾಧಿಕಾರ ಹಾಗೂ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣಗಳು, ದೂರುಗಳು ದಾಖಲಾಗಿ ಎಲೆಕ್ಟ್ರಿಕ್ ಓಲಾ ಕಂಪನಿಯ ಉತ್ಪಾದನಾ ಗುಣಮಟ್ಟದ ಬಗ್ಗೆ ಗ್ರಾಹಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ನಿರ್ದೇಶನ ಕೊಟ್ಟಿದ್ದರು.

ಈ ಎಲ್ಲ ಸಂಗತಿಗಳನ್ನು ಆಧರಿಸಿ ಎದುರುದಾರ ಎಲೆಕ್ಟ್ರಿಕ್ ಓಲಾ ಕಂಪನಿ ಆಯಾದೂರುದಾರರಿಗೆ ಅವರು ಸಂದಾಯ ಮಾಡಿದ ವಾಹನಗಳ ಮೌಲ್ಯಗಳನ್ನು, ಹಣವನ್ನು ಶೇ 10% ರಂತೆ ಬಡ್ಡಿ ಸಮೇತ ಹಿಂದಿರುಗಿಸುವಂತೆ ಆದೇಶಿಸಿದೆ.

ದೂರುದಾರರಿಗೆ ಆಗಿರುವ ಅನಾನುಕೂಲ, ತೊಂದರೆ ಹಾಗೂ ಮಾನಸಿಕ ಹಿಂಸೆಗಾಗಿ ರೂ.50,000 ಪರಿಹಾರ ಮತ್ತು ರೂ.10,000 ಪ್ರಕರಣದ ಖರ್ಚು ವೆಚ್ಚ ನೀಡುವಂತೆ ಆಯೋಗ ಎಲೆಕ್ಟ್ರಿಕ್ ಓಲಾ ಕಂಪನಿಗೆ ನಿರ್ದೇಶಿಸಿದೆ.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!