ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ (Dr. Nagalakshmi Chaudhary) ಅವರು ಇಂದು ನಗರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ರೋಗಿಗಳ ಆರೋಗ್ಯ ವಿಚಾರಿಸಿದ ಅವರು, ವೈದ್ಯಕೀಯ ಸಿಬ್ಬಂದಿಗಳಿಗೆ ಸರ್ಕಾರಿ ಆಸ್ಪತ್ರೆಯನ್ನೇ ನಂಬಿ ಬರುವ ಬಡವರಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಸಲಹೆ, ಸೂಚನೆ ನೀಡಿದರು.
ಈ ವೇಳೆ ದೊಡ್ಡಬಳ್ಳಾಪುರ ಯುವ ಕಾಂಗ್ರೆಸ್ ವತಿಯಿಂದ ಡಾ. ನಾಗಲಕ್ಷ್ಮಿ ಚೌಧರಿ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನೇಯ್ಗೆಯ ಪ್ರಸಿದ್ಧ ರೇಷ್ಮೆ ಸೀರೆಯನ್ನು ಉಡುಗೊರೆಯಾಗಿ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಆರೋಗ್ಯಾಧಿಕಾರಿ ಡಾ.ಶಾರದಾ ನಾಗನಾಥ್, ಅಢಳಿತಾಧಿಕಾರಿ ಡಾ.ರಮೇಶ್, ದೊಡ್ಡಬಳ್ಳಾಪುರ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಪುನೀತ್ ಗೌಡ ಮಲ್ಲೋಹಳ್ಳಿ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭದ್ರಾಪುರ ಮೋಹನ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವರಾಜ್, ವಿನೋದ್, ಕಸಬಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಯಸಿಂಹ, ಗ್ರಾಮ ಪಂಚಾಯಿತಿ ಸದಸ್ಯರಾದ ನಾಗರತ್ನಮ್ಮ ಮತ್ತಿತರರಿದ್ದರು.