ಇನ್ನು ಮುಂದೆ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಮಾಡಲ್ಲ: ಎಂ.ಬಿ.ಪಾಟೀಲ

No more land acquisition in Channarayapatna hobli: M.B.Patil

ಬೆಂಗಳೂರು: ಉದ್ದೇಶಿತ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿಗಾಗಿ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಗೆ ಸೇರಿದ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿನ 495 ಎಕರೆ ಜಮೀನನ್ನು ಸ್ವಾಧೀನ ಮಾಡದಿರಲು ತೀರ್ಮಾನಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ (M.B.Patila) ಹೇಳಿದ್ದಾರೆ.

ಮಂಗಳವಾರ ಈ ಸಂಬಂಧ ಅವರು ವಿಧಾನಸೌದದ ತಮ್ಮ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ದೇವನಹಳ್ಳಿ ಶಾಸಕರೂ ಆಗಿರುವ ಕೆ ಎಚ್ ಮುನಿಯಪ್ಪ ಅವರ ಜತೆ ಸುದೀರ್ಘ ಸಭೆ ನಡೆಸಿ ಈ ತೀರ್ಮಾನಕ್ಕೆ ಬಂದರು.

ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಇಬ್ಬರೂ ಸಚಿವರು, ಉದ್ದೇಶಿತ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕಿಗೆ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1,777 ಎಕರೆ 2 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು 2021ರ ಆ.27ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು.

ಇದಾದ ಮೇಲೆ 2022ರ ಫೆ.15ರಂದು ಈ ಸಂಬಂಧ ಆದೇಶ ಹೊರಡಿಸಲಾಗಿತ್ತು. ಆದರೆ ಹೋಬಳಿಯ ರೈತರು ಈಗಾಗಲೇ ಎರಡು ಬಾರಿ ಕೈಗಾರಿಕಾ ಉದ್ದೇಶಗಳಿಗಾಗಿ ಜಮೀನು ಕಳೆದುಕೊಂಡಿದ್ದಾರೆ. ಜತೆಗೆ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿಗಳಲ್ಲಿನ ನೀರಾವರಿ, ಕೃಷಿ ಮತ್ತು ಜನವಸತಿಗಳನ್ನು ಪರಿಗಣಿಸಿ ಭೂಸ್ವಾಧೀನದಿಂದ ಈ ಹಳ್ಳಿಗಳ 231.23 ಎಕರೆ, 185.18 ಎಕರೆ ಮತ್ತು 78.21 ಎಕರೆಗೆ ಸ್ವಾಧೀನ ಪ್ರಕ್ರಿಯೆಯಿಂದ ವಿನಾಯಿತಿ ಕೊಡಲಾಗಿದೆ ಎಂದಿದ್ದಾರೆ.

ಜತೆಗೆ ಈ ಹೋಬಳಿಯಲ್ಲಿ ಇನ್ನು ಮುಂದೆ ಕೈಗಾರಿಕಾ ಉದ್ದೇಶಗಳಿಗೆ ಸರಕಾರ ಯಾವುದೇ ಜಮೀನನ್ನು ವಶಪಡಿಸಿಕೊಳ್ಳದೆ ಇರಲು ನಿರ್ಧರಿಸಿದೆ. ಆದ್ದರಿಂದ ಭೂಸ್ವಾಧೀನ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ಕೈಬಿಡಬೇಕು.

ಈಗ ಮಿಕ್ಕಂತೆ ಉಳಿದ ಹತ್ತು ಗ್ರಾಮಗಳಾದ ಪಾಳ್ಯ, ಹರಳೂರು, ಪೋಲನಹಳ್ಳಿ, ಗೋಕರೆ ಬಚ್ಚೇನಹಳ್ಳಿ, ನಲ್ಲೂರು, ಮಲ್ಲೇಪುರ, ನಲ್ಲಪ್ಪನಹಳ್ಳಿ, ಚೀಮಾಚನಹಳ್ಳಿ, ಮುದ್ದೇನಹಳ್ಳಿ ಮತ್ತು ಹಾಡ್ಯಾಳ ವ್ಯಾಪ್ತಿಯಲ್ಲಿನ 1,232 ಎಕರೆ ಭೂಸ್ವಾಧೀನ ನಡೆಯಲಿದೆ. ಅದರಲ್ಲೇನೂ ಬದಲಾವಣೆ ಇಲ್ಲ.

ಭೂಮಿ ಕಳೆದುಕೊಳ್ಳಲಿರುವ ರೈತರಿಗೆ ಜಿಲ್ಲಾಧಿಕಾರಿ ಸೂಕ್ತ ಪರಿಹಾರ ಮೊತ್ತ ನಿಗದಿ ಪಡಿಸಲಿದ್ದಾರೆ. ಅಥವಾ ಸಂತ್ರಸ್ತ ರೈತರು ಆಸಕ್ತಿ ವ್ಯಕ್ತಪಡಿಸಿದರೆ 1 ಎಕರೆ ಅಭಿವೃದ್ಧಿ ಪಡಿಸಿದ ಭೂಮಿಯಲ್ಲಿ 10,771 ಚದರ ಅಡಿ ಜಮೀನನ್ನು ಬೇಕಾದರೂ ಕೊಡಲು ಅವಕಾಶವಿದೆ. ಈ ಜಾಗವನ್ನು ರೈತರು ವಾಣಿಜ್ಯೋದ್ದೇಶಗಳಿಗಾಗಿ ಬಳಸಿಕೊಳ್ಳಬಹುದು ಎಂದು ಅವರು ವಿವರಿಸಿದ್ದಾರೆ.

ಪ್ರತಿಭಟನೆ ನಡೆಸುತ್ತಿದ್ದವರು ನಿರ್ದಿಷ್ಟವಾಗಿ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿ ಗ್ರಾಮಗಳ ಜಮೀನಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಈ ಸಂಬಂಧ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ವಿಸ್ತೃತ ಸಭೆ ನಡೆಸಲಾಗಿತ್ತು.

ರೈತರ ಕೋರಿಕೆಗೆ ಸರಕಾರ ಈಗ ಸ್ಪಂದಿಸಿದಂತಾಗಿದೆ. ಆದ್ದರಿಂದ ಇನ್ನು ಹೋರಾಟ ಬೇಡ. ನಮ್ಮಲ್ಲಿ ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಜೊತೆಜೊತೆಯಲ್ಲೇ ತೆಗೆದುಕೊಂಡು ಹೋಗಬೇಕಾಗಿದೆ. ನಾನು ಮತ್ತು ಮುನಿಯಪ್ಪ ಕೂಡ ರೈತ ಕುಟುಂಬಗಳಿಂದಲೇ ಬಂದವರು. ರೈತರ ನೋವು ನಮಗೆ ಅರ್ಥವಾಗುತ್ತದೆ.

ಹಿಂದೆ ನಾವು ವಿರೋಧ ಪಕ್ಷದಲ್ಲಿದ್ದಾಗ ರೈತರನ್ನು ಭೇಟಿ ಮಾಡಿದ್ದ ಸಿದ್ದರಾಮಯ್ಯನವರು ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಭೂಸ್ವಾಧೀನ ಕುರಿತ ತೀರ್ಮಾನವನ್ನು ಪರಿಶೀಲಿಸುತ್ತೇವೆ ಎಂದಿದ್ದರು. ಈಗ ಆ ಮಾತಿಗೆ ತಕ್ಕಂತೆ ನಡೆದುಕೊಂಡಿದ್ದೇವೆ ಎಂದು ಪಾಟೀಲ ನುಡಿದಿದ್ದಾರೆ.

ಸಚಿವ ಮುನಿಯಪ್ಪ ಮಾತನಾಡಿ, ರೈತರು ಸರ್ಕಾರದ ತೀರ್ಮಾನವನ್ನು ಗೌರವಿಸಿ, ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದರು.

ಈ ರೀತಿ ರಾಜ್ಯದಲ್ಲಿ ಎಲ್ಲಿಯೂ ಜಮೀನನ್ನು ಸ್ವಾಧೀನದಿಂದ ಕೈಬಿಟ್ಟ ನಿರ್ದಶನ ಇಲ್ಲ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ ಅವರು ರೈತರ ಪರವಾದ ತೀರ್ಮಾನ ತೆಗೆದುಕೊಂಡಿದ್ದು ಅದನ್ನು ಮನ್ನಿಸಿ ಪ್ರತಿಭಟನೆ ಕೈಬಿಡಬೇಕು‌ ಎಂದು ಮುನಿಯಪ್ಪ ಹೇಳಿದರು.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಬೆಂ.ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಕೆಐಎಡಿಬಿ ಸಿಇಒ ಡಾ.ಮಹೇಶ್, ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಅನುರಾಧ, ಸೇರಿದಂತೆ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]