ಕಮಿಷನ್ ಮಾಫಿಯ ಏಜೆಂಟರ ಮೂಲಕನಡೆಯುತ್ತಿದೆ ಸರಕಾರ: ಬಿ.ವೈ.ವಿಜಯೇಂದ್ರ ವಾಗ್ದಾಳಿ

Congress party has been deceiving the exploited by making them vote banks: B.Y. Vijayendra

ಬೆಂಗಳೂರು: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರಕ್ಕೆ ಕೌಂಟರ್‍ಗಳನ್ನು ತೆರೆಯಲಾಗಿದೆ. ಸಚಿವಾಲಯದಿಂದ ಗ್ರಾಮ ಪಂಚಾಯಿತಿ ಕಚೇರಿ ವರೆಗೂ ಲಂಚ ಇಲ್ಲದೆ ಕೆಲಸ ಕಾರ್ಯಗಳು ನಡೆಯುವುದಕ್ಕೆ ಸಾಧ್ಯವಿಲ್ಲ ಎಂಬಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಆಕ್ಷೇಪಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸರಕಾರ ಕಮಿಷನ್ ಮಾಫಿಯಗೆ ಬೆಂಬಲ ಕೊಡುತ್ತಿದೆ. ಕಮಿಷನ್ ಮಾಫಿಯ ಏಜೆಂಟರ ಮೂಲಕ ರಾಜ್ಯದಲ್ಲಿ ಇವರು ಸರಕಾರದ ಆಡಳಿತ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಏಕೈಕ ಕಾರಣಕ್ಕೆ ಸಿದ್ದರಾಮಯ್ಯನವರು ಇದೆಲ್ಲವನ್ನೂ ನೋಡಿ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಆರೋಪಿಸಿದರು.

ಸಚಿವ ಕೃಷ್ಣಬೈರೇಗೌಡರು ಅಧಿಕಾರಿಗಳ ಸಭೆ ಮುಗಿಸಿ, ‘ಯಾಕ್ರೀ ಹೊಟ್ಟೆ ಉರಿಸ್ತೀರಿ. ನಿಮ್ಮ ರೇಟ್ ಲಿಸ್ಟನ್ನೇ ಹಾಕಿ’ ಎಂದು ಹೇಳಿಕೆ ಕೊಟ್ಟಿದ್ದಾರೆ. ಗೃಹ ಸಚಿವ ಪರಮೇಶ್ವರ್ ಅವರು ಬಾದಾಮಿಯಲ್ಲಿ ಈಗಷ್ಟೇ ಹೇಳಿಕೆ ನೀಡಿ, ‘ಸಿದ್ರಾಮಣ್ಣ ಅವರ ಹತ್ರ ಕಾಸಿಲ್ಲ; ದಯವಿಟ್ಟು ಹಣ ಕೇಳಲು ಬರಬೇಡಿ’ ಎಂದಿದ್ದಾಗಿ ತಿಳಿಸಿದರು.

ಬೊಕ್ಕಸದಲ್ಲಿ ಹಣ ಇಲ್ಲ ಎಂಬ ಸಂದೇಶವನ್ನು ರಾಜ್ಯದ ಮುಖ್ಯಮಂತ್ರಿಗಳು ಗೃಹ ಸಚಿವರ ಮೂಲಕ ಕಾಂಗ್ರೆಸ್ ಶಾಸಕರಿಗೆ ತಿಳಿಸಿದಂತಿದೆ; ಶಾಸಕರು ಅನುದಾನ ಕೇಳಬೇಡಿ ಎಂದಿರುವಂತಿದೆ ಎಂದು ಹೇಳಿದರು.

ಆಡಳಿತದಲ್ಲಿ ಹಿಡಿತ ಕಳಕೊಂಡ ಮುಖ್ಯಮಂತ್ರಿ

ಸಿದ್ದರಾಮಯ್ಯನವರು ದೇವರಾಜ ಅರಸು ಅವರ ದಾಖಲೆ ಮುರಿಯಬೇಕು. ಇವರು ದೇವರಾಜ ಅರಸು ಅವರ ದಾಖಲೆ ಮುರಿಯುವುದಕ್ಕೋಸ್ಕರ ರಾಜ್ಯವನ್ನು ಲೂಟಿ ಮಾಡಿ, ಯಾವುದೇ ಅಭಿವೃದ್ಧಿ ಕಾರ್ಯಗಳು ಇಲ್ಲದೇ, ಲಂಚ ಇಲ್ಲದೇ ಯಾವುದೇ ಕೆಲಸ ಕಾರ್ಯ ಆಗುತ್ತಿಲ್ಲವೆಂದಾದರೆ ಈ ರಾಜ್ಯದಲ್ಲಿ ಮುಖ್ಯಮಂತ್ರಿಗಳು ತಮ್ಮ ಸಂಪೂರ್ಣ ಹಿಡಿತವನ್ನು ಕಳೆದುಕೊಂಡಿದ್ದಾರೆ ಎಂದು ವಿಜಯೇಂದ್ರ ಅವರು ಟೀಕಿಸಿದರು.

ಲಂಚ ಸಂಗ್ರಹಕ್ಕೆ ಮುಖ್ಯಮಂತ್ರಿಗಳೇ ಔಟ್‍ಸೋರ್ಸ್ ನೀಡಿದ್ದಾರೆ.

ಬಿ.ಆರ್.ಪಾಟೀಲರ ಆರೋಪದ ಬಳಿಕವೂ ಮುಖ್ಯಮಂತ್ರಿಗಳು ಜಮೀರ್ ಅಹ್ಮದ್ ಅವರ ರಾಜೀನಾಮೆ ಪಡೆದಿಲ್ಲ. ಆದರೆ, ಅದೇನೂ ದೊಡ್ಡ ವಿಚಾರವಲ್ಲ, ಭ್ರಷ್ಟಾಚಾರದ ಬಗ್ಗೆ ಸರಕಾರವನ್ನು ದೂಷಿಸುವುದು ಸರಿಯಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಇದು ಜವಾಬ್ದಾರಿಯುತ ಗೃಹ ಸಚಿವರ ಹೇಳಿಕೆಯೇ ಎಂದು ಕೇಳಿದರು.

ಎಲ್ಲೆಡೆ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಬೆಂಗಳೂರಿನಲ್ಲಿ ಹೊಸ ಮನೆ ನಿರ್ಮಾಣ ಮುಗಿದರೂ ಎನ್‍ಒಸಿ ಸಿಗುತ್ತಿಲ್ಲ. ಜನರೇಟರ್ ಇಟ್ಟುಕೊಂಡು ಗೃಹಪ್ರವೇಶ ಮಾಡುತ್ತಿದ್ದಾರೆ. ಇದು ರಾಜ್ಯದ ಪರಿಸ್ಥಿತಿ ಎಂದು ಬೇಸರ ಸೂಚಿಸಿದರು.

ರಾಜ್ಯದ ಆಡಳಿತ ಪಕ್ಷದ ಶಾಸಕರಲ್ಲೇ ಬಹುದೊಡ್ಡ ಹತಾಶೆ ಕಾಣುತ್ತಿದೆ. ಮುಖ್ಯಮಂತ್ರಿಗಳ ಆತ್ಮೀಯರಾದ ಹಿರಿಯ ಶಾಸಕ ಹಾಗೂ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಅವರು ವಸತಿ ಇಲಾಖೆಯ ಹಗರಣ, ಬಡವರಿಗೆ ಮನೆ ಕೊಡಲು ಲಂಚ ಇಲ್ಲದೇ ಮನೆ ಮಂಜೂರಾಗದ ಕುರಿತು ತಿಳಿಸಿದ್ದಾರೆ.

ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಮನೆ ಹಂಚಿಕೆಯಲ್ಲಿ ಆಗಿರುವ ಅಕ್ರಮದ ಆರೋಪದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಗೋಲ್ಮಾಲ್‍ಗಳ ಕುರಿತು ಸದ್ಯವೇ ಇನ್ನಷ್ಟು ಶಾಸಕರು ಮಾತನಾಡಲಿದ್ದಾರೆ ಎಂದು ಬಿ.ಆರ್.ಪಾಟೀಲ್ ಹೇಳಿದ್ದಾಗಿ ವಿವರಿಸಿದರು.

ಹಗರಣ- ಅಧಿಕಾರಿಗಳು ಬಲಿಪಶು

ಸ್ವತಃ ನಾಗೇಂದ್ರ ಅವರ ರಾಜೀನಾಮೆಗೆ ಕಾರಣವಾದ 150-160 ಕೋಟಿಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿ ಹೋರಾಟ ಮಾಡಿತ್ತು. ತೆಲಂಗಾಣಕ್ಕೆ ಹಣ ಕಳಿಸಲಾಗಿತ್ತು. ಇವರು ಲೂಟಿ ಮಾಡಲು ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು; ಅವರು ಬಲಿಪಶು ಆಗಿದ್ದರು ಎಂದು ವಿಜಯೇಂದ್ರ ಅವರು ವಿವರಿಸಿದರು.

ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳೇ ಆರೋಪಿ ಸ್ಥಾನದಲ್ಲಿದ್ದರು. ಹಗರಣ ಆಗಿಲ್ಲವೆಂದು ಹೇಳಿದ್ದ ಸಿದ್ದರಾಮಯ್ಯನವರು 14 ನಿವೇಶನ ಹಿಂದಿರುಗಿಸಿದ್ದರು ಎಂದು ತಿಳಿಸಿದರು. ಬಿಜೆಪಿ ಹೋರಾಟ, ಜನಾಕ್ರೋಶ ಯಾತ್ರೆ ಮಾಡಿದಾಗ ಸಿದ್ದರಾಮಯ್ಯ ಮತ್ತು ಅವರ ಮಂತ್ರಿಮಂಡಲದ ಸದಸ್ಯರು ಬಹಳ ಹಗುರವಾಗಿ ಮಾತನಾಡಿದ್ದರು.

ಬಿಜೆಪಿಯವರಿಗೆ ಕೆಲಸ ಇಲ್ಲ

ಗ್ಯಾರಂಟಿಗಳ ಜನಪ್ರಿಯತೆ ಸಹಿಸಲಾಗದೆ ಬೀದಿಗಿಳಿದು ಹೋರಾಟ ಎಂದು ಟೀಕಿಸಿದ್ದರು. ಸಿದ್ದರಾಮಯ್ಯನವರೇ ಬಿ.ಆರ್.ಪಾಟೀಲ್, ರಾಜು ಕಾಗೆ, ಗೋಪಾಲಕೃಷ್ಣ ಅವರ ಹೇಳಿಕೆಗೆ ನಿಮ್ಮ ಉತ್ತರ ಏನು ಎಂದು ಪ್ರಶ್ನಿಸಿದರು. ರಾಜ್ಯದ ಜನರಿಗೆ ಸಿದ್ದರಾಮಯ್ಯನವರು ಉತ್ತರಿಸಬೇಕು ಎಂದು ಆಗ್ರಹಿಸಿದರು.

ಮತ್ತೊಬ್ಬ ಹಿರಿಯ ಶಾಸಕ ರಾಜು ಕಾಗೆ ಅವರು ಕಾಮಗಾರಿಗೆ ಕಾಸು ಕೊಟ್ಟು ವರ್ಕ್ ಆರ್ಡರ್ ಪಡೆಯಬೇಕಿದೆ. ಬಿ.ಆರ್.ಪಾಟೀಲ್ ಅವರ ಹೇಳಿಕೆಯನ್ನು ಬೆಂಬಲಿಸುತ್ತೇನೆ. ಅವರಿಗೆ ಆದ ಸ್ಥಿತಿ ನನಗೂ ಆಗಿದೆ. ಎರಡು ವರ್ಷಗಳ ಹಿಂದೆ ಶಂಕುಸ್ಥಾಪನೆ ಮಾಡಿದ ಕಾಮಗಾರಿಗೆ ಕೂಡ ಕಮಿಷನ್- ಲಂಚ ಕೊಡದೆ ವರ್ಕ್ ಆರ್ಡರ್ ಸಿಗುತ್ತಿಲ್ಲ ಎಂದಿರುವುದಾಗಿ ಗಮನಕ್ಕೆ ತಂದರು. ಇದು ಮೊದಲ ಬಾರಿ ಅಲ್ಲ; ಹಿಂದೆಯೂ ಮುಖ್ಯಮಂತ್ರಿಗಳ ವಿರುದ್ಧ ತಮ್ಮ ಅಸಂತೋಷ ತೋಡಿಕೊಂಡಿದ್ದರು ಎಂದು ತಿಳಿಸಿದರು.

ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು, ನಾನು ಶಾಸಕನಾಗಿದ್ದುಕೊಂಡು ಒಂದು ಚರಂಡಿ, ಒಂದು ಶಾಲೆ ಕೆಲಸ ಆಗುತ್ತಿಲ್ಲ ಎಂದಿದ್ದಾರೆ. ಮುಖ್ಯಮಂತ್ರಿಗಳ ಆತ್ಮೀಯರಾದ ಆಡಳಿತ ಪಕ್ಷದ ಶಾಸಕರೇ ಈ ಹೇಳಿಕೆ ನೀಡುತ್ತಿದ್ದಾರೆ ಎಂದ ಅವರು, ಈ ರಾಜ್ಯದಲ್ಲಿ ಆಡಳಿತ ನಡೆಯುತ್ತಿದೆಯೇ? ಸರಕಾರ ಬದುಕಿದೆಯೇ? ಎಂದು ಜನರು ಪ್ರಶ್ನಿಸುತ್ತಿದ್ದಾರೆ. ರಾಜ್ಯವನ್ನು ಲೂಟಿ ಮಾಡಲು ಸರಕಾರಿ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಆಪ್ತ ಸಚಿವರಿಗೆ ಟಾರ್ಗೆಟ್

ಮುಖ್ಯಮಂತ್ರಿಗಳು ತಮ್ಮ ಕುರ್ಚಿ ಉಳಿಸಿಕೊಳ್ಳಲು ತಮ್ಮ ಆಪ್ತ ಸಚಿವರಿಗೆ ಟಾರ್ಗೆಟ್ ನೀಡಿದ್ದಾರೆ ಎಂದು ವಿಜಯೇಂದ್ರ ಅವರು ತಿಳಿಸಿದರು. ಹಾಗಾಗಿಯೇ ನಾಗೇಂದ್ರ ಅವರು ಹಳ್ಳಕ್ಕೆ ಬಿದ್ದಿದ್ದರು ಎಂದು ನುಡಿದರು.

ಪೀಣ್ಯ ಕೈಗಾರಿಕಾ ಬಡಾವಣೆಯಲ್ಲಿ ಅಭಿವೃದ್ಧಿ ಕೆಲಸ ಆಗದೇ, ಪಕ್ಕದ ತಮಿಳುನಾಡಿಗೆ ಹೋಗುವುದಾಗಿ ಅಲ್ಲಿನ ಕೈಗಾರಿಕೆದಾರರ ಸಂಘದ ಅಧ್ಯಕ್ಷರು ಹೇಳಿಕೆ ಕೊಟ್ಟಿದ್ದಾರೆ. ಇದು ರಾಜ್ಯ ಸರಕಾರ ರಾಜ್ಯವನ್ನು ನಡೆಸುವ ರೀತಿ ಆಕ್ಷೇಪಿಸಿದರು.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]