ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿಸಿಎಂ ಡಿ.ಕೆ.ಶಿವಕುಮಾರ್

Format of Cauvery Aarti program to be announced in two to three days: DCM D.K.Shivakumar

ಬೆಂಗಳೂರು: “ಮುಂದಿನ ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಿಸಲಾಗುವುದು. ತಪ್ಪು ಗ್ರಹಿಕೆಯಿಂದ ಕೆಲವರು ಈ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಮ್ಮೆ ಎಲ್ಲರ ಜತೆ ಸಭೆ ಮಾಡುತ್ತೇನೆ. ಈ ಕಾರ್ಯಕ್ರಮ ನಡೆಯಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ತಿಳಿಸಿದರು.

ವಿಧಾನಸೌಧದಲ್ಲಿ ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮ ಸಂಬಂಧ ಮಂಡ್ಯ ಜಿಲ್ಲೆ ರೈತ ಹಾಗೂ ಇತರೆ ಸಂಘಟನೆ ಮುಖಂಡರು ಹಾಗೂ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.

“ಕಾವೇರಿ ನದಿ ಬೆಂಗಳೂರು ನಗರ, ಮಂಡ್ಯ, ತಮಿಳುನಾಡು, ಪುದುಚೆರಿ, ಕೇರಳ ರಾಜ್ಯದ ರೈತರಿಗೆ ಆಸರೆಯಾಗಿದೆ. ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬುದು ನಮ್ಮ ನಂಬಿಕೆ. ಈ ದೇಶದಲ್ಲಿ ಗಂಗಾ ಆರತಿ, ನಮ್ಮ ರಾಜ್ಯದಲ್ಲಿ ತುಂಗಾ ಆರತಿ ಕಾರ್ಯಕ್ರಮ ಮಾಡಲಾಗುತ್ತಿದೆ. ಈಗ ಕಾವೇರಿ ಆರತಿ ಮಾಡಲು ನಾವು ತೀರ್ಮಾನ ಮಾಡಿದ್ದೇವೆ. ಕೆಆರ್ ಎಸ್ ಬೃಂದಾವನ ಉದ್ಯಾನಕ್ಕೆ ಸಾವಿರಾರು ಪ್ರವಾಸಿಗರು ಬರುತ್ತಿದ್ದು, ಇದನ್ನು ಮತ್ತಷ್ಟು ಹೆಚ್ಚಿಸಬೇಕು. ಇದಕ್ಕಾಗಿ ನಾವು ಇದರ ಆಕರ್ಷಣೆಯನ್ನು ಮತ್ತಷ್ಟು ಹೆಚ್ಚಿಸಬೇಕು. ಕಾವೇರಿ ಮಾತೆಗೆ ಪ್ರಾರ್ಥಿಸುವುದು, ಉದ್ಯೋಗ ಸೃಷ್ಟಿ, ಸಂಸ್ಕೃತಿ ಪರಂಪರೆ ಉಳಿಸಲು, ಪ್ರವಾಸೋದ್ಯಮದ ಆಕರ್ಷಣೆಗೆ ಈ ಕಾರ್ಯಕ್ರಮ ರೂಪಿಸಲಾಗಿದೆ” ಎಂದರು.

“ಚಾಮುಂಡಿ ಬೆಟ್ಟದಲ್ಲಿ ಪ್ರಾಧಿಕಾರ ರಚನೆ ಮಾಡಿ ಅಭಿವೃದ್ಧಿ ಮಾಡಲಾಗುತ್ತಿದೆ. ಟಿವಿಎಸ್ ಸೇರಿದಂತೆ ಅನೇಕ ಕಂಪನಿಗಳು ತಮ್ಮ ಸಿಎಸ್ಆರ್ ನಿಧಿಯಲ್ಲಿ ದೇವಾಲಯಗಳ ಅಭಿವೃದ್ಧಿ ಮಾಡುತ್ತಿದ್ದಾರೆ. ಕಾವೇರಿ ಆರತಿಯ ಪ್ರಾಯೋಗಿಕ ಕಾರ್ಯಕ್ರಮವಾಗಿ ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾರ್ಯಕ್ರಮ ಮಾಡಲಾಗಿದೆ. ಇದರ ವಿರುದ್ಧ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದರೂ ಕೊನೆಗೆ ನ್ಯಾಯಾಲಯ ಕಾರ್ಯಕ್ರಮಕ್ಕೆ ಅನುಮತಿ ನೀಡಿತು. ಆ ಕಾರ್ಯಕ್ರಮದಲ್ಲಿ ಸುಮಾರು 25 ಸಾವಿರ ಜನ ಬಂದು ವೀಕ್ಷಣೆ ಮಾಡಿದರು. ಇದು ಜನರ ಭಾವನೆಯಾಗಿದೆ. ತಾಯಿ ಕಾವೇರಿ ಎಲ್ಲಾ ವರ್ಗದ ಆಸ್ತಿ. ಕಾವೇರಿ ಇಲ್ಲವಾದರೆ ಬೆಂಗಳೂರಿಗೆ ನೀರಿಲ್ಲ, ಕೈಗಾರಿಕೆ, ಕೃಷಿಗೆ ನೀರಿರುವುದಿಲ್ಲ. ನಮ್ಮ ರಾಜ್ಯ ಹಾಗೂ ತಮಿಳುನಾಡಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಮೇಕೆದಾಟು ಯೋಜನೆಗೆ ಅನುಮತಿ ಪಡೆಯಲು ಹೋರಾಟ ಮಾಡುತ್ತಿದ್ದೇವೆ” ಎಂದರು.

“ಈ ಕಾರ್ಯಕ್ರಮಕ್ಕೆ ಜಲಸಂಪನ್ಮೂಲ, ಧಾರ್ಮಿಕ ದತ್ತಿ, ಕನ್ನಡ ಮತ್ತು ಸಂಸ್ಕೃತಿ, ಬಿಡಬ್ಲ್ಯೂಡಿ, ಪ್ರವಾಸೋದ್ಯಮ ಹಾಗೂ ಇಂಧನ ಇಲಾಖೆಗಳಿಂದ ಅನುದಾನ ನೀಡಲಾಗುವುದು. ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ 20 ಶಾಸಕರು ಹಾಗೂ ಮುಖಂಡರ ತಂಡವನ್ನು ಉತ್ತರ ಭಾರತದ ಪ್ರವಾಸಕ್ಕೆ ಕಳುಹಿಸಿ ಎಂದು ಎಲ್ಲಾ ಕಡೆ ಆರತಿ ಕಾರ್ಯಕ್ರಮ ಅಧ್ಯಯನ ಮಾಡಿ ವರದಿ ನೀಡಿದ್ದು, ಆ ವರದಿ ಆಧಾರದ ಮೇಲೆ ಕಾರ್ಯಕ್ರಮ ಮಾಡಲು ತೀರ್ಮಾನಿಸಿದ್ದೇವೆ” ಎಂದರು.

“ಈ ಕಾರ್ಯಕ್ರಮಕ್ಕೆ ಕೆಲವರು ಅಪಸ್ವರ ಎತ್ತಿದ್ದಾರೆ ಎಂದು ನಮ್ಮ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ನನಗೆ ಮಾಹಿತಿ ನೀಡಿದರು. ಹೀಗಾಗಿ ನಾನು ಅವರಿಗೆ ಆಹ್ವಾನ ಕೊಟ್ಟು ಸಭೆ ಮಾಡಿದೆ. ರೈತರಿಗೆ ಅವರದೇ ಆದ ಆತಂಕಗಳಿರುತ್ತವೆ. ಇದರಲ್ಲಿ ತಪ್ಪಿಲ್ಲ. ನಾವು ಅದನ್ನು ಗೌರವಿಸುತ್ತೇವೆ. ಸಭೆಯಲ್ಲಿ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಅನೇಕರು ಬೆಂಬಲ ವ್ಯಕ್ತಪಡಿಸಿದ್ದು, ಜನಪ್ರತಿನಿಧಿಗಳು ಕೂಡ ಇದನ್ನು ಸ್ವಾಗತಿಸಿದರು. ಕೆಲವರು ತಪ್ಪು ಗ್ರಹಿಕೆಯಿಂದ ಇದಕ್ಕೆ ಅಪಸ್ವರ ಎತ್ತಿದ್ದರು. ಮತ್ತೊಮ್ಮೆ ಎಲ್ಲರನ್ನು ಕರೆದು ಮಾತನಾಡಲಾಗುವುದು. ಆದರೆ ಈ ಕಾರ್ಯಕ್ರಮ ನಡೆಯುತ್ತದೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು. ಇಂದು ಇದರ ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ್ದೇನೆ. ಮುಂದಿನ ಎರಡು ಮೂರು ದಿನಗಳಲ್ಲಿ ಈ ಕಾರ್ಯಕ್ರಮದ ಸ್ವರೂಪ ಬಿಡುಗಡೆ ಮಾಡಲಾಗುವುದು” ಎಂದು ತಿಳಿಸಿದರು.

ಅಣೆಕಟ್ಟೆಗೆ ತೊಂದರೆಯಾಗುವುದಿಲ್ಲ

ರೈತರು ಯಾವ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೇಳಿದಾಗ, “ಈ ಕಾರ್ಯಕ್ರಮದಿಂದ ಅಣೆಕಟ್ಟೆಗೆ ಏನಾದರೂ ತೊಂದರೆ ಆಗಬಹುದು ಎಂಬ ಕಾರಣಕ್ಕೆ ಅಪಸ್ವರ ಎತ್ತಿದ್ದರು. ಈ ಕಾರ್ಯಕ್ರಮ ನಡೆಯುವ ಜಾಗ ಅಣೆಕಟ್ಟಿನಿಂದ ಸಾಕಷ್ಟು ದೂರದಲ್ಲಿದೆ. ಬೆಂಗಳೂರಿಗೆ ನೀರು ಹರಿದು ಹೋಗುವ ಜಾಗದಲ್ಲಿ ಸ್ಥಳವನ್ನು ಸೌಂದರ್ಯೀಕರಣಗೊಳಿಸಿ ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ಕೆಲವರಿಗೆ ಈ ವಿಚಾರಗಳು ತಿಳಿದಿಲ್ಲ. ಹೀಗಾಗಿ ಅಣೆಕಟ್ಟಿಗೆ ಹೆಚ್ಚುಕಮ್ಮಿ ಆಗಬಹುದು ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇದು ಅವರ ತಪ್ಪಲ್ಲ. ಅಣೆಕಟ್ಟು ವಿಚಾರದಲ್ಲಿ ನಮಗೂ ಜವಾಬ್ದಾರಿ ಇದೆ. ಈ ಕಾರ್ಯಕ್ರಮ ಕಾವೇರಿ ತಾಯಿಗೆ ಪ್ರಾರ್ಥಿಸುವ ಕಾರ್ಯಕ್ರಮ. ಕೊಡಗು, ಮಂಗಳೂರು, ಮೈಸೂರು, ಮಂಡ್ಯ ಸಂಸ್ಕೃತಿ ಈ ಕಾರ್ಯಕ್ರಮದಲ್ಲಿರಲಿದೆ. ಸುಮಾರು 2 ಸಾವಿರ ಜನರಿಗೆ ನೇರ ಉದ್ಯೋಗ ಸಿಗಲಿದೆ” ಎಂದು ವಿವರಿಸಿದರು.

ಈ ಉದ್ಯೋಗ ಕೇವಲ ಮಂಡ್ಯ ಮೈಸೂರು ಭಾಗದವರಿಗೆ ಸಿಗಬೇಕು ಎಂದು ಸೂಚನೆ ನೀಡಲಾಗಿದೆ. ಸ್ಥಳೀಯ ಪುರೋಹಿತರು, ಕಲಾವಿದರಿಗೆ ಅವಕಾಶ ಕಲ್ಪಿಸಲಾಗುವುದು. ಆದಿ ಚುಂಚನಗಿರಿ ಮಠದಲ್ಲಿ ಪುರೋಹಿತರಿಗೆ ತರಬೇತಿ ನೀಡಲಾಗುವುದು. 300ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಲಿದ್ದಾರೆ. ಕಾವೇರಿ ಹುಟ್ಟುವ ಕೊಡಗಿನಿಂದ ಕಾವೇರಿ ಸಮುದ್ರಕ್ಕೆ ಸೇರುವವರೆಗೂ ಎಷ್ಟು ಪ್ರದೇಶಗಳಲ್ಲಿ ವಿಭಿನ್ನ ಸಂಸ್ಕೃತಿ ಇದೆಯೋ ಅವುಗಳನ್ನು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಒಳಗೊಳ್ಳಬೇಕು” ಎಂದು ತಿಳಿಸಿದರು.

ಈ ಕಾರ್ಯಕ್ರಮಕ್ಕೆ 98 ಕೋಟಿ ಅಗತ್ಯವಿದೆಯೇ ಎಂಬ ಕುಮಾರಸ್ವಾಮಿ ಅವರ ಆಕ್ಷೇಪದ ಬಗ್ಗೆ ಕೇಳಿದಾಗ, “ಮೈತ್ರಿ ಸರ್ಕಾರದಲ್ಲಿ ಕೆಆರ್ ಎಸ್ ಬಳಿ ಡಿಸ್ನಿಲ್ಯಾಂಡ್ ಮಾಡಲು ಅವರು ಸಮ್ಮತಿ ನೀಡಿದ್ದರು” ಎಂದರು.

ಈ ಕಾರ್ಯಕ್ರಮಕ್ಕೆ ಸಂಸದರ ಒಪ್ಪಿಗೆ ಇದೆಯೇ ಎಂದು ಕೇಳಿದಾಗ, “ಒಂದು ಪಕ್ಷದಲ್ಲಿ ಒಬ್ಬ ಬೆಳೆಯುತ್ತಿದ್ದಾನೆ ಎಂದರೆ ಅವನ ವಿರುದ್ಧ ಅಪಸ್ವರ ಬರುತ್ತದೆ. ಅದಕ್ಕೆ ತಲೆಕೆಡಿಸಿಕೊಳ್ಳಬೇಕಿಲ್ಲ” ಎಂದು ತಿಳಿಸಿದರು.

ಎಷ್ಟು ಪ್ರವಾಸಿಗರು ಬರುವ ಅಂದಾಜಿದೆ ಎಂದು ಕೇಳಿದಾಗ, “ಸಧ್ಯಕ್ಕೆ ವಾರಕ್ಕೆ ಮೂರು ದಿನ ಈ ಕಾರ್ಯಕ್ರಮ ಮಾಡಲು ತೀರ್ಮಾನಿಸಿದ್ದೇವೆ. ಇನ್ನು ಕಾರ್ಯಕ್ರಮದ ಬಳಿ 10 ಸಾವಿರ ಜನರಿಗೆ ಕೂರಲು ಆಸನ ವ್ಯವಸ್ಥೆ ಮಾಡಲಾಗಿದೆ. ಈ ಪೈಕಿ ಸುಮಾರು 30% ಪಾವತಿ ಪ್ರವೇಶವಿರುತ್ತದೆ. 70% ಉಚಿತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು. ಕಾರ್ಯಕ್ರಮದ ವೇಳೆ ವಾಹನ ನಿಲುಗಡೆಗಾಗಿ 70-80 ಎಕರೆ ಜಾಗವನ್ನು ಮೀಸಲಿಡಲಾಗಿದೆ. ರಸ್ತೆಗಳನ್ನು ಉನ್ನತೀಕರಣಗೊಳಿಸಲಾಗುವುದು” ಎಂದು ವಿವರಿಸಿದರು.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]