Elections to ZP and TP

ಸರ್ಕಾರಿ ಕಚೇರಿಗಳಲ್ಲಿನ್ನು ಕನ್ನಡಮಯ.. ಉಲ್ಲಂಘಿಸಿದರೆ ಶಿಸ್ತು ಕ್ರಮ ವಾರ್ನಿಂಗ್

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಕನ್ನಡ(Kannada) ಭಾಷೆಯನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಹೌದು ಈ ಕುರಿತಂತೆ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ (shalini rajneesh) ಅವರು ಇಂದು (ಜೂನ್ 25) ಈ ಮಹತ್ವದ ಸುತ್ತೋಲೆ ಹೊರಡಿಸಿದ್ದು, ಆಡಳಿತದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಿದ್ದಾರೆ.

ಅಲ್ಲದೆ ಒಂದು ವೇಳೆ ಸೂಚನೆಗಳನ್ನ ಉಲ್ಲಂಘಿಸಿದರೆ ಅಂತವರ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.

ಸುತ್ತೋಲೆ

ಕನ್ನಡದಲ್ಲಿ ಬರುವ ಎಲ್ಲಾ ಅರ್ಜಿ, ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಕಚೇರಿಯ ನಾಮಪಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ವಿಧಾನಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನಸೆಳೆಯುವ ಸೂಚನೆಯನ್ನು ಕನ್ನಡದಲ್ಲಿಯೇ ಸಲ್ಲಿಸಬೇಕು.

ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರೆ ಎಲ್ಲಾ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಲು ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸುತ್ತೋಲೆಯಲ್ಲಿ ಸೂಚನೆ ನೀಡಿದ್ದಾರೆ.

ಕಚೇರಿಯಲ್ಲಿ‌ನ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡಬೇಕು. ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲಿಯೇ ಇರಬೇಕು. ಕೇಂದ್ರ ಸರ್ಕಾರ, ಹೊರ ರಾಜ್ಯಗಳು ಮತ್ತು ನ್ಯಾಯಾಲಯಗಳ ಪತ್ರ ವ್ಯವಹಾರಗಳನ್ನು ಹೊರತುಪಡಿಸಿ ಉಳಿದೆಲ್ಲಾ ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಆಡಳಿತದಲ್ಲಿ ಭಾಷಾ ನೀತಿಯನ್ನು ಪೂರ್ಣ ಪ್ರಮಾಣದಲ್ಲಿ ಹಾಗೂ ಎಲ್ಲಾ ಹಂತಗಳಲ್ಲಿ ಜಾರಿಗೊಳಿಸುವುದು ಎಲ್ಲ ಅಧಿಕಾರಿಗಳ ನೌಕರರ ಕರ್ತವ್ಯವಾಗಿದೆ. ಆದುದರಿಂದ ಸರ್ಕಾರ/ನಿಗಮ/ಮಂಡಳಿ/ಸ್ಥಳೀಯ ಸಂಸ್ಥೆಗಳ/ ವಿಶ್ವವಿದ್ಯಾಲಯಗಳ/ ಅನುದಾನಿತ ಸಂಘ-ಸಂಸ್ಥೆಗಳ ಎಲ್ಲಾ ಅಧಿಕಾರಿ/ ನೌಕರರು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು.

ಒಂದು ವೇಲೆ ಸೂಚನೆಗಳನ್ನ ಉಲ್ಲಂಘಿಸಿದರೆ ಅವರ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹೊರಡಿಸಿರುವ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!