Karnataka's Pride Mysore Sandal Soap goes Global

ಕರ್ನಾಟಕದ ಹೆಮ್ಮೆ ಮೈಸೂರು ಸ್ಯಾಂಡಲ್ ಸೋಪ್ ಜಾಗತಿಕ ಮಟ್ಟಕ್ಕೆ..!

ಬೆಂಗಳೂರು: ಸುಮಾರು 23 ದೇಶಗಳಲ್ಲಿ ತನ್ನ ಉತ್ಕೃಷ್ಟ ಗುಣಮಟ್ಟದ ಉತ್ಪನ್ನಗಳ ಮಾರಾಟ ವ್ಯವಸ್ಥೆ ಹೊಂದಿರುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತಕ್ಕೆ (KSDL) ಭಾರತದಲ್ಲಿರುವ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರಾನ್ ಮತ್ತು ಕರ್ನಾಟಕ-ಕೇರಳ ವ್ಯಾಪ್ತಿಯಲ್ಲಿನ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಬುಧವಾರ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಅವರಿಬ್ಬರೂ ಕೆಎಸ್ಡಿಎಲ್ ಇತಿಹಾಸ, ಕಾರ್ಯವಿಧಾನ, ಮಾರುಕಟ್ಟೆ ಜಾಲ, ಆದಾಯ, ಭವಿಷ್ಯದ ಯೋಜನೆಗಳ ಬಗ್ಗೆ ವಿವರವಾಗಿ ತಿಳಿದುಕೊಂಡರು.

ಕೆಎಸ್ಡಿಎಲ್ ಗೆ ಭೇಟಿ ನೀಡಿದ ಈ ಇಬ್ಬರು ಗಣ್ಯರನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬರಮಾಡಿಕೊಂಡರು. ಜತೆಯಲ್ಲಿ ಸಂಸ್ಥೆಯ ಅಧ್ಯಕ್ಷ ಸಿ ಎಸ್ ನಾಡಗೌಡ ಕೂಡ ಇದ್ದರು.

ಈ ಸಂದರ್ಭದಲ್ಲಿ, ಕೆಎಸ್ಡಿಎಲ್ ಚರಿತ್ರೆಯನ್ನು ಕಟ್ಟಿಕೊಡುವ ಪ್ರಾತ್ಯಕ್ಷಿಕೆಯನ್ನು ಲಿಂಡಿ ಮತ್ತು ಅಯ್ಯರ್ ಇಬ್ಬರಿಗೂ ಪ್ರದರ್ಶಿಸಲಾಯಿತು.

ಸಂಸ್ಥೆಯ ಉಗಮದ ಹಿನ್ನೆಲೆಯಲ್ಲಿ ಬ್ರಿಟನ್ನಿನ ಪಾತ್ರವಿರುವುದನ್ನು ಕೇಳಿ, ಇಬ್ಬರೂ ಅಚ್ಚರಿ ವ್ಯಕ್ತಪಡಿಸಿದರು. ಜತೆಯಲ್ಲೇ ಕೆಎಸ್ಡಿಎಲ್ ಉತ್ಪನ್ನಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು. ಲಿಂಡಿ ಮತ್ತು ಅಯ್ಯರ್ ಇಬ್ಬರೂ ಸಂಸ್ಥೆಯ ಉತ್ಪನ್ನಗಳ ತಯಾರಿಕೆ ವಿಧಾನವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಲಿಂಡಿ ಕ್ಯಾಮರಾನ್, ಭಾರತ ಮತ್ತು ಬ್ರಿಟನ್ ನಡುವೆ ಮುಕ್ತ ವಾಣಿಜ್ಯ ಒಪ್ಪಂದ ಏರ್ಪಟ್ಟಿರುವುದರಿಂದ ಎರಡೂ ದೇಶಗಳಿಗೂ ಸಾಕಷ್ಟು ಲಾಭವಾಗಲಿದೆ.

ನಾವು ನಮ್ಮ ನಮ್ಮ ನೈಪುಣ್ಯಗಳನ್ನು ಪರಸ್ಪರರ ಹಿತಗಳಿಗೆ ಧಕ್ಕೆಯಾಗದಂತೆ ವಿನಿಮಯ ಮಾಡಿಕೊಳ್ಳಬೇಕು. ಈ ಒಡಂಬಡಿಕೆಯ ಲಾಭವು ಕೈಗಾರಿಕಾ ಬೆಳವಣಿಗೆ ಮತ್ತು ವಾಣಿಜ್ಯ ವಹಿವಾಟಿನಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕಕ್ಕೂ ಸಿಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ನೂರಾಎಂಟು ವರ್ಷಗಳ ಹಿಂದೆ, ಅಂದರೆ 20ನೇ ಶತಮಾನದ ಎರಡನೆಯ ದಶಕದಲ್ಲಿ ಮೈಸೂರು ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ತಮ್ಮ ಆಸ್ಥಾನದಿಂದ ಪರಿಣತರೊಬ್ಬರನ್ನು ಬ್ರಿಟನ್ನಿಗೆ ಕಳುಹಿಸಿ, ಸಾಬೂನು ತಯಾರಿಕೆ ತಂತ್ರಜ್ಞಾನದ ಪರಿಚಯ ಮಾಡಿಕೊಂಡರು.

ಆಮೇಲೆ, ನಾಲ್ವಡಿ ಮತ್ತು ವಿಶ್ವೇಶ್ವರಯ್ಯನವರ ದೂರದೃಷ್ಟಿಯಿಂದ ಸ್ಥಾಪನೆಗೊಂಡ ಕೆಎಸ್ಡಿಎಲ್ ಉತ್ಕೃಷ್ಟ ಮಟ್ಟಕ್ಕೆ ಬೆಳೆದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಚಿವ ಪಾಟೀಲ ತಿಳಿಸಿದರು.

`ಕೆಎಸ್ಡಿಎಲ್ ಉತ್ಪನ್ನಗಳನ್ನು ಸದ್ಯಕ್ಕೆ 23 ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಯೂರೋಪಿಯನ್ ರಾಷ್ಟ್ರಗಳಿಗೂ ಮೈಸೂರು ಸ್ಯಾಂಡಲ್ ಸೋಪ್, ಶವರ್ ಜೆಲ್ ಮುಂತಾದ ಗುಣಮಟ್ಟದ ಉತ್ಪನ್ನಗಳನ್ನು ಮತ್ತಷ್ಟು ರವಾನಿಸಲಾಗುವುದು. ಇದಕ್ಕೆ ಬ್ರಿಟನ್ನಿನ ಸಹಕಾರವೂ ನಮಗೆ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಮಾರುಕಟ್ಟೆ ವಿಸ್ತರಣೆ ನಡೆಯುತ್ತಿದೆ’ ಎಂದು ತಿಳಿಸಿದರು.

ಸಂಸ್ಥೆಯು ಕಳೆದ ಸಾಲಿನಲ್ಲಿ 416 ಕೋಟಿ ರೂ. ಲಾಭ ಗಳಿಸಿದ್ದು, 2028ರ ವೇಳೆಗೆ ವಾರ್ಷಿಕ ವಹಿವಾಟನ್ನು 3,000 ಕೋಟಿ ರೂ.ಗಳಿಗೆ ಕೊಂಡೊಯ್ಯಲಾಗುವುದು. ಜತೆಗೆ ವಿಜಯಪುರದಲ್ಲಿ 50 ಎಕರೆ ವಿಸ್ತೀರ್ಣದಲ್ಲಿ ಉತ್ಪಾದನಾ ಘಟಕವನ್ನೂ ಆರಂಭಿಸಲಾಗುವುದು. ಸದ್ಯದಲ್ಲೇ ಸಂಸ್ಥೆಯ ವತಿಯಿಂದ ನಾನಾ ತರಹದ ಸುಗಂಧ ದ್ರವ್ಯಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದರು.

ಜೊತೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಮತ್ತು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಇದ್ದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!