ಗುಡ್ಮಾರ್ನಿಂಗ್ ನ್ಯೂಸ್: ಎತ್ತಿನಹೊಳೆ ಯೋಜನೆ.. ರೈತರಿಗೆ ಅನ್ಯಾಯವಾಗದಂತೆ ದಾಖಲೆ ಒದಗಿಸಿ – ಟಿ.ವೆಂಕಟರಮಣಯ್ಯ ಒತ್ತಾಯ

Yettinahole project.. Provide documents so that farmers are not treated unfairly - T. Venkataramanaiah

ದೊಡ್ಡಬಳ್ಳಾಪುರ: ಎತ್ತಿನಹೊಳೆ ಯೋಜನೆ (Yettinahole Project) ಕುರಿತು ತಾಲ್ಲೂಕಿನ ಸಾಸಲು ಹೋಬಳಿಯ ಮಲ್ಲೇಗೌಡನಪಾಳ್ಯ, ಭಕ್ತರಹಳ್ಳಿ, ಸಿಂಗೇನಹಳ್ಳಿ, ಲಕ್ಕೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಗೋಮಾಳ ಜಮೀನುಗಳಲ್ಲಿ ಉಳಿಮೆ ಮಾಡುತ್ತಿರುವ ಭೂರಹಿತ ರೈತರ ಜಮೀನುಗಳ ಪೋಡಿ, ದುರಸ್ಥಿಯನ್ನು ತುರ್ತಾಗಿ ನಡೆಸಿ ರೈತರಿಗೆ ಸಾಗುವಳಿ ಪತ್ರಗಳನ್ನು ನೀಡುವಂತೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯ (T.Venkataramanaiah) ಮಂಗಳವಾರ ಕಂದಾಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ರೈತರ ಸಭೆಯಲ್ಲಿ ಆಗ್ರಹಿಸಿದರು.

ಸಾಸಲು ಹೋಬಳಿಯ ಲಕ್ಕೇನಹಳ್ಳಿ ಗ್ರಾಮದ ಬಹುತೇಕ ರೈತರ ಜಮೀನು ಎತ್ತಿನಹೊಳೆ ನೀರು ಸಂಗ್ರಹಕ್ಕಾಗಿ ನಿರ್ಮಿಸಲಾಗುತ್ತಿರುವ ಜಲಾಶಯಕ್ಕೆ ಮುಳುಗಡೆಯಾಗುತ್ತಿದೆ.

ಈ ಜಮೀನುಗಳಿಗೆ ಸೂಕ್ತ ದಾಖಲೆಗಳನ್ನು ರೈತರಿಗೆ ನೀಡಬೇಕು. ಸಾಸಲು ಹೋಬಳಿ ಭಾಗದ ವಿವಿಧ ಗ್ರಾಮಗಳ ಭೂರಹಿತ ರೈತರು ಭೂಮಂಜೂರಾತಿಗಾಗಿ ನಮೋನೆ-57ರ ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಿ ಸಾಗುವಳಿಯನ್ನು ಮಾಡುತ್ತಿದ್ದಾರೆ. ಆದರೆ ಇತ್ತೀಚೆಗೆ ಬಲಾಡ್ಯರು ಈ ಜಮೀನುಗಳಲ್ಲಿ ಅವರಿಗೆ ಇಷ್ಟ ಬಂದ ಕಡೆಗಳಲ್ಲಿ ತಂತಿ ಬೇಲಿ ನಿರ್ಮಿಸುತ್ತಿದ್ದಾರೆ.

ಇದನ್ನು ವಿರೋಧಿಸಿರುವ ರೈತರ ವಿರುದ್ಧ ದಾಖಲಾಗಿರುವ ದೂರುಗಳನ್ನು ಪೊಲೀಸರು ಸೂಕ್ತ ತನಿಖೆ ನಡೆಸಿ ರದ್ದುಗೊಳಿಸಬೇಕು. ಇದರಿಂದ ಬಡ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ವಾಸ್ತದಲ್ಲಿ ಇಂದಿಗೂ ಉಳುಮೆ ಮಾಡುತ್ತಿರುವ ಅರ್ಹ ಭೂ ರಹಿತ ರೈತರಿಗೆ ಅನ್ಯಾಯವಾಗದಂತೆ ತ್ವರಿತವಾಗಿ ಸರ್ವೇ ನಡೆಸಿ ಸಾಗುವಳಿ ಚೀಟಿಗಳನ್ನು ವಿತರಿಸಬೇಕು. ಸಾಗುವಳಿ ಚೀಟಿಗಳ ವಿತರಣೆಯು ಪಕ್ಷಾತೀತವಾಗಿ ನಡೆಯಬೇಕು. ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದರು.

ಈ ಸಂದರ್ಭದಲ್ಲಿ ಹಾಜರಿದ್ದ ತಹಶೀಲ್ದಾರ್ ವಿದ್ಯಾವಿಭಾರಾಥೋಡ್, ಭೂದಾಖಲೆಗಳ ಸಹಾಯಕ ಉಪನಿರ್ದೇಶಕ ಮೋಹನ್ ಕುಮಾರ್ ಮಾಹಿತಿ ನೀಡಿ, ಈಗಾಗಲೇ ನಮೋನೆ-57ರಲ್ಲಿ ಅರ್ಜಿ ಸಲ್ಲಿಸಿರುವ ರೈತರ ದಾಖಲೆಗಳನ್ನು ಪರಿಶೀಲಿಸಿ ಜಮೀನುಗಳನ್ನು ಡ್ರೋಣ್ ಮೂಲಕ ಸರ್ವೇ ನಡೆಸಲಾಗುತ್ತಿದೆ.

ಯಾವುದೇ ಅರ್ಹ ರೈತರಿಗೆ ಅನ್ಯಾಯವಾಗದಂತೆ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಈಗಿನ ಭೂಮಂಜೂರಾತಿ ನಿಯಮದಂತೆ ನಮೋನೆ 1 ರಿಂದ 5ನ್ನು ಸಿದ್ದಪಡಿಸಿದ ನಂತರವೇ ಸಾಗುವಳಿ ಚೀಟಿ ನೀಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಟಿಎಪಿಎಂಸಿಎಸ್ ನಿರ್ದೇಶಕ ಡಿ.ಸಿದ್ದರಾಮಣ್ಣ, ಸಾಸಲು ಹೋಬಳಿ ರಾಜಸ್ವ ನಿರೀಕ್ಷಕ ಅನಂತಕುಮಾರ್, ಗ್ರಾಮ ಆಡಳಿತ ಅಧಿಕಾರಿ ಹನುಮಕ್ಕ ಹಾಗೂ ರೈತರು ಇದ್ದರು.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]