Daily Astrology| Astrology

ದಿನ ಭವಿಷ್ಯ: ಈ ರಾಶಿಯವರ ಆರ್ಥಿಕ ಸಂಕಷ್ಟ ದೂರಾಗುವ ಸಾಧ್ಯತೆ

Astrology; ಗುರುವಾರ, ಜೂನ್ 26, 2025, ದೈನಂದಿನ ರಾಶಿ ಭವಿಷ್ಯ /

ಮೇಷ ರಾಶಿ: ಆತ್ಮೀಯರೊಂದಿಗೆ ಮನಸ್ತಾಪವಾಗುವ ಸಾಧ್ಯತೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು.(ಭಕ್ತಿಯಿಂದ ಶ್ರೀ ಉಮಾ ಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ: ಹಣಕಾಸಿನ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು.(ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಿಥುನ ರಾಶಿ: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಮೂಡುವುದು. ವಿದ್ಯಾಭ್ಯಾಸ ದಲ್ಲಿ ನಿರಾಸಕ್ತಿ ಕಂಡುಬರು ವುದು.(ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು.ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಾಗ ಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ.ಶತ್ರುಬಾಧೆ ಕಂಡುಬರು ವುದು. ಆರೋಗ್ಯದ ಮೇಲೆ ನಿಗಾ ಇರಲಿ.(ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ನಿಮ್ಮ ಭವಿಷ್ಯವನ್ನು ಸಮೃದ್ಧಗೊಳಿಸಲು ನೀವು ಹಿಂದೆ ಹೂಡಿಕೆ ಮಾಡಿದ ಎಲ್ಲಾ ಹಣವು ಇಂದು ಫಲಪ್ರದ ಫಲಿತಾಂಶಗಳನ್ನು ನೀಡುವ ಯೋಗವಿದೆ. ನಿಮ್ಮ ಕಾರ್ಯ ಪ್ರವೃತ್ತಿಯ ಸಾಧನೆಯ ಮೂಲಕ ವಿಶೇಷ ವ್ಯಕ್ತಿಯನ್ನು ಸೆಳೆಯುತ್ತೀರಿ. (ಭಕ್ತಿಯಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡ ಮೊತ್ತದ ಹಣ ಹೂಡಿಕೆ ಈಗ ಬೇಡ. (ಭಕ್ತಿಯಿಂದ ಶ್ರೀ ಕೇದಾರನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ನಿಮ್ಮ ಇಷ್ಟಾರ್ಥಗಳು ಈಡೇರಬಹುದು.ವ್ಯಾಪಾರದ ಸಂದರ್ಭದಲ್ಲಿ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಪ್ರಾರಂಭಿಸಬಹುದು. ವ್ಯಾಪಾರಿಗಳು ಇಂದು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು. ನಿಮ್ಮ ಕಠಿಣ ಪರಿಶ್ರಮ ಯಶಸ್ವಿ ಯಾಗುತ್ತದೆ ಮತ್ತು ನಿಮ್ಮ ವ್ಯಾಪಾರವು ಬೆಳೆಯುತ್ತದೆ.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹಣಕಾಸಿನ ವಿಷಯದಲ್ಲಿ ನಿಮ್ಮ ಸ್ವಂತ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಪ್ರತಿಯೊಂದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಗಮನವನ್ನು ನೀಡಿ. ಜನರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಒಪ್ಪಂದಗಳ ಮಾಡಿಕೊಳ್ಳಲು ಒತ್ತು ನೀಡಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ಇಂದು ವಿವಾದಾತ್ಮಕ ವಿಷಯಗಳನ್ನು ಎತ್ತುವುದನ್ನು ತಪ್ಪಿಸಿ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾಪಟ್ಟಿಯು ತೀವ್ರವಾಗಿರುತ್ತದೆ. ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ಒದಗಿಸುತ್ತವೆ. (ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿ ಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆ ಯಾಗುವವು. ಔದ್ಯೋಗಿಕ ಪ್ರವಾಸ ಯೋಗವಿದೆ.(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ನಿರೀಕ್ಷಿತ ಸರ್ವ ಕಾರ್ಯಗಳು ನೆರವೇರುತ್ತದೆ. ಆರ್ಥಿಕ ಮಟ್ಟವೂ ಏರಿಕೆಯಾಗಲಿದ್ದು, ಸ್ಥಿರಪ್ರಾಪ್ತಿ ಯೋಗವಿದೆ, ಸಂಸಾರ ಸುಖ, ಸಂಬ್ರಮಗಳ ವಾತಾವರಣ ಮೂಡಲಿದೆ. ಶುಭ ಕಾರ್ಯ ಪ್ರಯತ್ನ ಫಲಕೊಡುವ ಯೋಗವಿದೆ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಜೀವನ ಮುಂದಿನ ಹಾದಿಯ ಸ್ಪಷ್ಟ ಚಿತ್ರಣಗಳು ನಿಮಗೆ ತಿಳಿದಿದೆ. ನಿಮ್ಮ ಹಾದಿಯಲ್ಲಿ ಇತರರು ಬರದಂತೆ ನೋಡಿಕೊಳ್ಳಿ. ಗೊಂದಲಕ್ಕೊಳಕಾಗದಿರಿ. ದೃಢ ನಿರ್ಧಾರವಿರಲಿ. ಮುಂದೆ ದೊಡ್ಡ ಸವಾಲುಗಳು ಎದುರಾಗಲಿದ್ದು, ಅದನ್ನು ಎದುರಿಸಲು ಸಿದ್ಥರಾಗಿರಿ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಾಸ: ಆಷಾಡ ಮಾಸ
ಪಕ್ಷ: ಶುಕ್ಲ ಪಕ್ಷ
ತಿಥಿ: ಪಾಡ್ಯಮಿ
ನಕ್ಷತ್ರ: ಆರಿದ್ರ ನಕ್ಷತ್ರ.

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು.ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!