ದೊಡ್ಡಬಳ್ಳಾಪುರ ಹಾಗೂ ಕೊರಟಗೆರೆಯಲ್ಲಿ ಸಮತೋಲಿತ ಅಣೆಕಟ್ಟು ನಿರ್ಮಾಣ; ಡಿಸಿಎಂ ಡಿ.ಕೆ.ಶಿವಕುಮಾರ್

Balanced dam construction in Doddaballapur and Koratagere; DCM D.K.Shivakumar

ತುಮಕೂರು (ಗುಬ್ಬಿ): ಎತ್ತಿನಹೊಳೆ ಯೋಜನೆ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರು ಬಳಿ ನಿರ್ಮಿಸಲಾಗಿರುವ ಅತ್ಯಾಧುನಿಕ ತಂತ್ರಜ್ಞಾನದ ಬೃಹತ್ ಮೇಲ್ಗಾಲುವೆ (Acqeduct) ಕಾಮಗಾರಿಯನ್ನು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಗುರುವಾರ ವೀಕ್ಷಣೆ ಮಾಡಿದರು.

ಇದು ವಿಶ್ವದಲ್ಲೇ ಅತಿ ಎತ್ತರ (40 ಮೀಟರ್) ಏಷ್ಯಾದಲ್ಲೇ ಅತಿ ಉದ್ದದ (10.47 ಕಿ. ಮೀ.) ಮೇಲ್ಗಾಲುವೆ ಇದಾಗಿದೆ. ಮಣ್ಣಿನ ಸಾಮರ್ಥ್ಯಕ್ಕೆ ತಕ್ಕಂತೆ ಓಪನ್ ಹಾಗೂ ಪೈಲ್ ವಿನ್ಯಾಸಗಳ ಮೂಲಕ ಅಡಿಪಾಯ ನಿರ್ಮಿಸಲಾಗಿದೆ. ಒಟ್ಟು 40 ಮೀ. ಎತ್ತರದಲ್ಲಿ ಬೃಹತ್ ಮೇಲ್ಗಾಲುವೆ ಮೂಲಕ ನೀರು ಹರಿಯಲಿದೆ.

ವಿಶೇಷ ಮಾದರಿಯ Joint Treatment Methodology ಯನ್ನು ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಿಂದ ಪರಿಶೀಲಿಸಿ ಕಾಮಗಾರಿ ಮಾಡಲಾಗಿದೆ. ಅತ್ಯಂತ ಕನಿಷ್ಠ ಅವಧಿಯಲ್ಲಿ ಎತ್ತರ ಮಟ್ಟದಲ್ಲಿ ಮಿತ ಕಾರ್ಮಿಕರ ಬಳಕೆ ಹಾಗೂ ಸುರಕ್ಷತೆಗೆ ಆದ್ಯತೆ ಕೊಟ್ಟು ಕಾಮಗಾರಿ ಪೂರ್ಣಗೊಳಿಸಲಾಗಿದೆ.

ಅಕ್ವಾಡೆಕ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ನಿರ್ಮಿಸಿರುವ ಈ ಯೋಜನೆಗೆ ಇತ್ತೀಚೆಗೆ ರಾಷ್ಟ್ರಮಟ್ಟದ ISDA ಸಂಸ್ಥೆ ನೀಡುವ INFRACON NATIONAL AWARD -IINA-2025 ಪ್ರಶಸ್ತಿ ಲಭಿಸಿದೆ.

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, “ಈ ಯೋಜನೆ ಮೂಲಕ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳು ಅವರ ಬದುಕಿನಲ್ಲೇ ಒಂದು ಇತಿಹಾಸ ಬರೆದಿದ್ದಾರೆ. ಇದು ವಿಶ್ವದ ಗಮನ ಸೆಳೆದಿರುವ ಯೋಜನೆಯಾಗಿದೆ” ಎಂದು ತಿಳಿಸಿದರು.

ನಾನು ಈ ಹಿಂದೆ ಜಲಸಂಪನ್ಮೂಲ ಸಚಿವನಾಗಿದ್ದಾಗ ಈ ಯೋಜನೆ ಸ್ವರೂಪ ಬದಲಿಸಿದ್ದೆ. ಈ ಹಿಂದೆ ಯುಕೆಪಿ ಯೋಜನೆಯಲ್ಲಿ ಇದೇ ಮಾದರಿಯಲ್ಲಿ ಕಾಮಗಾರಿ ಮಾಡಿದ್ದೆವು. ಅದರಲ್ಲಿ 500 ಕ್ಯೂಸೆಕ್ ನೀರು ಹರಿಯುತ್ತಿತ್ತು. ಈ ಯೋಜನೆಯಲ್ಲಿ 3600 ಕ್ಯೂಸೆಕ್ ನೀರು ಹರಿಯಲಿದೆ. ಚೀನಾದಲ್ಲಿ ಇರುವ ಮೇಲ್ಗಾಲುವೆ 12 ಕಿ.ಮೀ ಉದ್ದ ಇದೆಯಾದರೂ ಅದರ ಎತ್ತರ 13 ಮೀಟರ್ ಮಾತ್ರ ಇದೆ. ನಮ್ಮ ಈ ಮೇಲ್ಗಾಲುವೆ 10.47 ಕಿ.ಮೀ ಉದ್ದ ಹಾಗೂ 40 ಮೀಟರ್ ಎತ್ತರ ಇದೆ. ಈ ಕಾಮಗಾರಿಗೆ 1203 ಕೋಟಿ ವೆಚ್ಚ ಮಾಡಲಾಗಿದೆ” ಎಂದು ವಿವರಿಸಿದರು.

“ಯೋಜನೆಯನ್ನು ನಾವು ದೇಶಕ್ಕೆ ಮಾದರಿಯಾಗಿ ಪರಿಚಯಿಸಬೇಕು. ಈ ಯೋಜನೆ ಮಾಡಿರುವ ಅಧಿಕಾರಿಗಳು, ತಂತ್ರಜ್ಞರು, ಗುತ್ತಿಗೆದಾರರಿಗೆ ವಿಧಾನಸೌಧದಲ್ಲಿ ಸೂಕ್ತ ರೀತಿಯಲ್ಲಿ ಗೌರವ ನೀಡಲಾಗುವುದು. ಬೇರೆ ಶಾಸಕರು ಹಾಗೂ ಸಚಿವರನ್ನು ಕರೆಸಿ ಒಂದು ಕಾರ್ಯಕ್ರಮ ಮಾಡಿ ಈ ಕಾಮಗಾರಿಯನ್ನು ಪರಿಚಯಿಸಲಾಗುವುದು” ಎಂದು ತಿಳಿಸಿದರು.

ಹೇಮಾವತಿ ನೀರಿನ ವಿಚಾರವಾಗಿ ಕೇಳಿದಾಗ, “ಈ ಬಾರಿ ಹೆಚ್ಚು ನೀರು ಸಂಗ್ರಹವಾಗಿದ್ದು, ಕಾಲುವೆಗಳಲ್ಲಿ ನೀರು ಹರಿಸಲು ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ

“ನಾವು ಒಂದೇ ರಾಜ್ಯದವರು. ನೀರಿಗಾಗಿ ನಾವು ನಾವೇ ಕಿತ್ತಾಟ ನಡೆಸುವುದು ಬೇಡ. ಎಲ್ಲರಿಗೂ ಸರಿಯಾದ ರೀತಿಯಲ್ಲಿ ನೀರನ್ನು ನೀಡಲಾಗುವುದು. ನೆರೆ ರಾಜ್ಯದವರ ಜೊತೆ ತಿಕ್ಕಾಟ ನಡೆಸುವಂತೆ ನಾವು, ನಾವೇ ಕಿತ್ತಾಡುವುದು ಸರಿಯಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

“ಬೆಂಗಳೂರಿನಲ್ಲಿ ಕಾವೇರಿ ಆರತಿ ಮಾಡಿ ಪ್ರಾರ್ಥನೆ ಮಾಡಿದೆ. ಕಾವೇರಿ ತಾಯಿ ಕೃಪೆಯಿಂದ ಮುಂಗಾರು ಆರಂಭವಾಗುವ ಮುನ್ನವೇ ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳು ಬಹುತೇಕೆ ತುಂಬಿವೆ. ಕಳೆದ ವರ್ಷ 30% ತುಂಬಿದ್ದ ಕೆಆರ್ ಎಸ್ ಈ ವರ್ಷ 89% ತುಂಬಿದೆ. ಕಳೆದ ವರ್ಷ 30% ತುಂಬಿದ್ದ ಹೇಮಾವತಿ 85% ತುಂಬಿದೆ. ಕಳೆದ ವರ್ಷ 40% ತುಂಬಿದ್ದ ಹಾರಂಗಿ ಈ ವರ್ಷ 70% ತುಂಬಿದೆ. 51% ತುಂಬಿದ್ದ ಕಬಿನಿ ಈ ವರ್ಷ 80% ತುಂಬಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

“ಬಹಳ ಸಂತೋಷದಿಂದ ಇಂದು ಈ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದೇನೆ. ವಾಸು ಅವರ ಕ್ಷೇತ್ರ ಬೇರೆ ಅಲ್ಲ, ಡಿ.ಕೆ. ಶಿವಕುಮಾರ್ ಕ್ಷೇತ್ರ ಬೇರೆ ಅಲ್ಲ. ಇದು ನಮ್ಮ ಕ್ಷೇತ್ರ. ಯಾರು ಎಷ್ಟೇ ವಿರೋಧ ಮಾಡಲಿ, ಇಲ್ಲಿನ ರೈತರಿಗಾಗಿ ಏನು ಕೆಲಸ ಮಾಡಬೇಕೋ ನಾವು ಅದನ್ನು ಮಾಡುತ್ತೇವೆ. ಟಿ.ಬಿ ಜಯಚಂದ್ರ ಅವರಂತೆಯೇ ವಾಸು ಅವರೂ ನೀರಾವರಿ ಯೋಜನೆಗೆ ಹೆಚ್ಚಿನ ಒತ್ತು ಕೊಟ್ಟು ಕೆಲಸ ಮಾಡುತ್ತಿದ್ದಾರೆ. ನೀವು ಆತಂಕಪಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

“ಪಕ್ಕದ ರಂಗನಹಳ್ಳಿಯವರು ನಮ್ಮ ಊರಿಗೂ ನೀರು ಕೊಡಿ ಎಂದು ಮನವಿ ಸಲ್ಲಿಸಿದರು. ಅವರ ಗ್ರಾಮಕ್ಕೂ ನೀರು ಪೂರೈಸಲಾಗುವುದು” ಎಂದು ಭರವಸೆ ನೀಡಿದರು.

“ಕುಮಾರಸ್ವಾಮಿ ಅವರು ಎತ್ತಿನಹೊಳೆ ನೀರು ಹೊರಗೆ ಹರಿಸುವುದು ಅಸಾಧ್ಯ ಎಂದಿದ್ದರು. ನಾವು ಅದನ್ನು ಸಾಧ್ಯವಾಗಿಸಿದ್ದೇನೆ. ಮಾತನಾಡುವವರು ಕಣ್ಣಾರೆ ನೋಡಲಿ ಎಂದು ನೀರನ್ನು ಹರಿಸಿದ್ದೇವೆ. ಅದು ನಿಮ್ಮ ಜಿಲ್ಲೆ ಗಡಿವರೆಗೂ ಬಂದಿದೆ. ಕೆಲವು ಕಡೆ ಅರಣ್ಯ ಇಲಾಖೆ ಸಮಸ್ಯೆ ಇದೆ. ಹಾಸನ ಹಾಗೂ ಜಿಲ್ಲಾಧಿಕಾರಿಗಳು ಭೂಮಿ ನೀಡಿದ್ದು, ಆದಷ್ಟು ಬೇಗ ಇಲ್ಲಿಗೆ ನೀರು ಹರಿಯಲಿದೆ” ಎಂದು ತಿಳಿಸಿದರು.

ದೊಡ್ಡಬಳ್ಳಾಪುರ ಹಾಗೂ ಕೊರಟಗೆರೆಯಲ್ಲಿ ಸಮತೋಲಿತ ಅಣೆಕಟ್ಟು

“ದೊಡ್ಡಬಳ್ಳಾಪುರ ಹಾಗೂ ಕೊರಟಗೆರೆಯಲ್ಲಿ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿದ್ದೇವೆ. ಈ ವಿಚಾರವಾಗಿ ನಾನು ಪರಮೇಶ್ವರ್ ಅವರ ಜೊತೆ ಮಾತನಾಡಿದ್ದೇನೆ. ರೈತರು ತಮ್ಮ ಆತಂಕ ವ್ಯಕ್ತಪಡಿಸಿದ್ದಾರೆ. ನಾವು ಕನಿಷ್ಠ 3 ಟಿಎಂಸಿ ನೀರು ಸಂಗ್ರಹ ಮಾಡದಿದ್ದರೆ, ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ನೀರು ನೀಡಲು ಸಾಧ್ಯವಿಲ್ಲ. ಹೀಗಾಗಿ ಈ ಯೋಜನೆ ಜಾರಿಗೆ ತಾಂತ್ರಿಕ ಸಾಧ್ಯತೆಗಳ ಬಗ್ಗೆ ಚರ್ಚೆ ಮಾಡಿದ್ದು, ಸಚಿವ ಸಂಪುಟದಲ್ಲಿ ಪ್ರಸ್ತಾಪ ಮಾಡುತ್ತೇನೆ” ಎಂದು ತಿಳಿಸಿದರು.

“ಈ ಯೋಜನೆಯಲ್ಲಿ ಮೊದಲು ಕುಡಿಯುವ ನೀರನ್ನು ಪೂರೈಸಬೇಕು. ಆನಂತರ ಕೆರೆಗಳಿಗೆ ನೀರು ತುಂಬಿಸಲಾಗುವುದು. ಎಲ್ಲರಿಗೂ ಸರಿಯಾಗಿ ನೀರು ಹಂಚುವ ಕೆಲಸ ಮಾಡಲಾಗುವುದು” ಎಂದು ತಿಳಿಸಿದರು.

“ಹೇಮಾವತಿ ನೀರು ಬರುತ್ತಿದೆ. ಎತ್ತಿನಹೊಳೆ ನೀರನ್ನು ಕಳೆದ ವರ್ಷ ವಾಣಿ ವಿಲಾಸಕ್ಕೆ ಹರಿಸಲಾಗಿತ್ತು. ಕಾವೇರಿ ಅಂತಿಮ ತೀರ್ಪಿನಂತೆ ನೀರನ್ನು ಹೇಮಾವತಿ ತುಂಬಿಸಲಾಗುವುದು. ಇನ್ನು ಸ್ಥಳೀಯ ನಾಯಕರ ಮನವಿಯಂತೆ ಈ ಭಾಗದ ಕಾಲುವೆಗಳಿಗೆ ಎರಡು ದಿನಗಳಲ್ಲಿ ನೀರನ್ನು ಹರಿಸಿ ಕೆರೆ ತುಂಬಿಸಲು ಸೂಚನೆ ನೀಡಲಾಗುವುದು” ಎಂದು ತಿಳಿಸಿದರು.

“ಕೋಲಾರದಲ್ಲಿ 2 ಸಾವಿರ ಅಡಿ ಕೊಳವೆ ಬಾವಿ ಕೊರೆದರೂ ನೀರು ಬರದ ಸ್ಥಿತಿ ಇದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ನೀರು ತರಲಾಗುತ್ತಿದೆ” ಎಂದು ತಿಳಿಸಿದರು.

“ಇಲ್ಲಿರುವ ಮೇಲ್ಗಾಲುವೆ ದೇಶದಲ್ಲಿ ಬೇರೆ ಎಲ್ಲೂ ಇಲ್ಲ. ಇದಕ್ಕಾಗಿ ರಾಷ್ಟ್ರ ಮಟ್ಟದ ಪ್ರಶಸ್ತಿ ಲಭಿಸಿದೆ. ನಿಮ್ಮ ಸಹಕಾರ ಇರಲಿ. ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ಶ್ರಮಿಸುತ್ತೇವೆ. ನೀವು ಶಾಸಕ ಗುಬ್ಬಿ ವಾಸು ಅವರ ಪರವಾಗಿ ನಿಲ್ಲಿ. ನಾನು ನಿಮ್ಮ ಪರ ನಿಲ್ಲುತ್ತೇನೆ” ಎಂದು ತಿಳಿಸಿದರು.

ರಾಜಕೀಯ

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ ಆರ್. ಅಶೋಕ್ ಪುತ್ರ..!

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಸಾಹಸದಲ್ಲಿ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು (Tricolor flag) ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್

[ccc_my_favorite_select_button post_id="121685"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]