Mango purchasing center established in Bengaluru district.. Price fixing

ಬೆಂ.ಗ್ರಾ.ಜಿಲ್ಲೆಯಲ್ಲಿ ಮಾವು ಖರೀದಿ ಕೇಂದ್ರ ಸ್ಥಾಪನೆ.. ದರ ನಿಗದಿ

ಬೆಂ.ಗ್ರಾ.ಜಿಲ್ಲೆ: ತೋಟಗಾರಿಕೆ ಇಲಾಖೆ, ಕೃಷಿ ಮಾರಾಟ ಇಲಾಖೆ, ಕೃಷಿ ಮಾರಾಟ ಮಂಡಳಿ ಹಾಗೂ ಸಹಕಾರ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಬೆಂಗಳೂರು ವತಿಯಿಂದ 2025-26ನೇ ಸಾಲಿನ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ (MIS-PDPS) ಮಾವು (Mango) ಖರೀದಿಸಲು ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಗೆ ರೂ,1616 ದರ ನಿಗದಪಡಿಸಿದ್ದು ಅದರಂತೆ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ ವತಿಯಿಂದ ಮಾವು ಖರೀದಿ ಮಾಡಲಾಗುತ್ತಿದೆ.

ನೋಂದಣಿ ಕೇಂದ್ರ/ ಖರೀದಿ ಕೇಂದ್ರದ ಸ್ಥಳ

ಹೊಸಕೋಟೆ-ಬೆಂಗಳೂರು ಹೈವೆ, ಬೆಂಗಳೂರು ದಕ್ಷಿಣ ತಾಲ್ಲೂಕಿನ ವೈಟ್ ಫೀಲ್ಡ್ ನ ಖಾಜಿ ಸೊಣ್ಣೇನಹಳ್ಳಿ ಬಳಿಯ ಸಫಲ್ ಮಾರುಕಟ್ಟೆಯಲ್ಲಿ ಮಾವು ನೋಂದಣಿ, ಖರೀದಿ ಕೇಂದ್ರ ಸ್ಥಾಪಿಸಲಾಗಿದ್ದು ಮಾವು ಬೆಳೆಗಾರರು ಅಗತ್ಯ ದಾಖಲೆಗಳೊಂದಿಗೆ ಇಲ್ಲಿಗೆ ಭೇಟಿ ನೀಡಿ ಮಾವು ಮಾರಾಟ ಮಾಡಬಹುದಾಗಿದೆ.

ಜೂನ್ 27 ರಿಂದ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುತ್ತಿದ್ದು, ನೋಂದಣಿ ಪ್ರಕ್ರಿಯೆಗೆ ರೈತರು ಪಹಣಿ ಅಥವಾ ಆರ್.ಟಿ.ಸಿ ಆಧಾರ್ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ (ಆಧಾರ್ ಜೋಡಣೆ ಕಡ್ಡಾಯ), ಭಾವಚಿತ್ರ ಹಾಗೂ FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆ (FID)ಯನ್ನು ಕಡ್ಡಾಯವಾಗಿ ನೀಡಬೇಕು. FRUITS ತಂತ್ರಾಂಶದ ರೈತ ನೋಂದಣಿ ಸಂಖ್ಯೆಯನ್ನು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಕೃಷಿ ಇಲಾಖೆಯಿಂದ ಪಡೆಯಬಹುದು.

ಮಾವು ಬೆಳೆದು ಬೆಳೆ ಸಮೀಕ್ಷೆಯಲ್ಲಿ ಮಾವು ಬೆಳೆ ಎಂದು ಆರ್.ಟಿ.ಸಿ ವಾರು ನಮೂದಾಗಿರುವ ರೈತರು ಮಾತ್ರ ಅರ್ಹರಾಗಿರುತ್ತಾರೆ. ಈ ಯೋಜನೆಯಡಿ ಎಕರೆಗೆ 20 ಕ್ವಿಂಟಾಲ್ ನಂತೆ ಗರಿಷ್ಠ 5 ಎಕರೆಗೆ 100 ಕ್ವಿಂಟಾಲ್ ವರೆಗೆ ಮಿತಿಗೊಳಿಸಿ ವ್ಯತ್ಯಾಸದ ಮೊತ್ತವನ್ನು ನೀಡತಕ್ಕದ್ದು, ರೈತರ ಹೆಸರಿನ ಆಧಾರ್ ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ DBT ಮೂಲಕ ಹಣ ಪಾವತಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು 94489 99214.

ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 98802 10892.

ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 94804 61234.

ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 94821 29648.

ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 98804 61607.

ಹೊಸಕೋಟೆ ಎ.ಪಿ.ಎಂ.ಸಿ ಕೃಷಿ ಉತ್ಪನ್ನ ಮಾರುಕಟ್ಟೆಯ ಕಾರ್ಯದರ್ಶಿಗಳು 82173 81079 ಗೆ ಸಂಪರ್ಕಿಸಹುದು ಎಂದು ಜಿಲ್ಲೆಯ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!