ಬೆಂಗಳೂರು: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ (Nadaprabhu Kempegowda) 516ನೇ ಜಯಂತಿಯನ್ನು 27ನೇ ಜೂನ್ 2025ರ (ಶುಕ್ರವಾರ) ಆಚರಿಸಲಾಗುತ್ತಿದೆ.
ರಾಜ್ಯಮಟ್ಟದ ಕಾರ್ಯಕ್ರಮವನ್ನು ಡಾ. ಬಾಬು ಜಗಜೀವನ್ ರಾಂ ಭವನ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಬಿಬಿಎಂಪಿ) ಮಟ್ಟದ ಕಾರ್ಯಕ್ರಮವನ್ನು ಬಿಬಿಎಂಪಿ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ.ರಾಜ್ ಕುಮಾರ್ ಗಾಜಿನ ಮನೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.
7 ಸ್ಥಳಗಳಿಂದ ಪುರ ಜ್ಯೋತಿಗಳು
ಕೆಂಪೇಗೌಡರ ಜಯಂತಿಯ ದಿನದಂದು ಬೆಳಗ್ಗೆ 7.00 ಗಂಟೆಗೆ ನಗರದ ನಾಲ್ಕು ದಿಕ್ಕುಗಳಾದ ಲಾಲ್ ಬಾಗ್, ಮೇಕ್ರಿ ವೃತ್ತ, ಕೆಂಪಾಂಬುದಿ ಕೆರೆ ಹಾಗೂ ಹಲಸೂರು ಗಡಿ ಗೋಪುರಗಳಿಂದ ಹಾಗೂ 3 ಐತಿಹಾಸಿಕ ಸ್ಥಳಗಳಾದ ಮಾಗಡಿ ತಾಲ್ಲೂಕಿನ ಕೆಂಪಾಪುರ, ದೇವನಹಳ್ಳಿ ತಾಲ್ಲೂಕಿನ ಆವತಿ ಹಾಗೂ ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಸೇರಿದಂತೆ ಒಟ್ಟು 7 ಸ್ಥಳಗಳಿಂದ ಸಚಿವರುಗಳ ನೇತೃತ್ವದಲ್ಲಿ ಪುರ ಜ್ಯೋತಿಗಳ ಮೆರವಣಿಗೆ ಹೊರಟು, ಸುಮ್ಮನಹಳ್ಳಿ ವೃತ್ತದ ಬಳಿಯ ಹೊರವರ್ತುಲ ರಸ್ತೆ (ಮಾಗಡಿ ರಸ್ತೆ) ಯಲ್ಲಿ ಕೆಂಪೇಗೌಡ ಭವನದ ನಿರ್ಮಾಣ ಸ್ಥಳಕ್ಕೆ 7 ಪುರ ಜ್ಯೋತಿಗಳನ್ನು ಸ್ವೀಕರಿಸಲಾಗುತ್ತದೆ.
ಪ್ರತಿಮೆಗಳಿಗೆ ಪುಷ್ಪ ನಮನ
ಬೆಳಗ್ಗೆ 9.00ಕ್ಕೆ ಅಂತರಾಷ್ಟ್ರಿಯ ವಿಮಾನ ನಿಲ್ದಾಣದ ಹತ್ತಿರ ಸ್ಥಾಪಿಸಿರುವ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆ
ಬೆಳಗ್ಗೆ 10.30ಕ್ಕೆ ಬಿಬಿಎಂಪಿ ಕೇಂದ್ರ ಕಛೇರಿಯ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡರ ಮತ್ತು ಬಿಬಿಎಂಪಿ ಕೇಂದ್ರ ಕಛೇರಿ ಆವರಣದಲ್ಲಿರುವ ಮಹಾತ್ಯಾಗಿ ಲಕ್ಷ್ಮಿದೇವಿ ಪ್ರತಿಮೆ
ಬೆಳಗ್ಗೆ 11.11ಕ್ಕೆ ವಿಧಾನ ಸೌಧ ಮುಂಭಾಗದಲ್ಲಿರುವ ಕೆಂಪೇಗೌಡರ ಪ್ರತಿಮೆ
ಕೆಂಪೇಗೌಡ ಭವನ ನಿರ್ಮಾಣದ ಶಂಕುಸ್ಥಾಪನೆ
ಬೆಂಗಳೂರು ನಗರ ಸುಮ್ಮನಹಳ್ಳಿ ವೃತ್ತದ ಬಳಿಯ ಹೊರವರ್ತುಲ ರಸ್ತೆ (ಮಾಗಡಿ ರಸ್ತೆ) ಯಲ್ಲಿ ಕೆಂಪೇಗೌಡ ಭವನದ ನಿರ್ಮಾಣ ಸ್ಥಳಕ್ಕೆ ಬೆಳಗ್ಗೆ 12.15 ಗಂಟೆಗೆ ಶಂಕುಸ್ಥಾಪನೆ ನೆರವೇರಲಿದೆ.
ರಾಜ್ಯ ಮಟ್ಟದ ಕಾರ್ಯಕ್ರಮ
ಸುಮ್ಮನಹಳ್ಳಿ ಬಳಿಯಿರುವ ಡಾ.ಬಾಬು ಜಗಜೀವನ್ ರಾಂ ಭವನದಲ್ಲಿ ರಾಜ್ಯಮಟ್ಟದ ವೇದಿಕೆ ಕಾರ್ಯಕ್ರಮವು ಅಪರಾಹ್ನ 12.30ಕ್ಕೆ ನಡೆಯಲಿದ್ದು, ಸನ್ಮಾನ್ಯ ಮುಖ್ಯಮಂತ್ರಿಗಳು, ಮಾನ್ಯ ಉಪ ಮುಖ್ಯಮಂತ್ರಿಗಳು, ಮಠಾಧೀಶರುಗಳು, ಮಾನ್ಯ ಸಚಿವರುಗಳು ಹಾಗೂ ಇನ್ನಿತರೆ ಗಣ್ಯರುಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸದರಿ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ರಾಜ್ಯ ಮಟ್ಟದ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಬಿಬಿಎಂಪಿ ಮಟ್ಟದ ಕಾರ್ಯಕ್ರಮ
ಬಿಬಿಎಂಪಿ ಮಟ್ಟದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವು ಬಿಬಿಎಂಪಿ ಕೇಂದ್ರ ಕಛೇರಿ ಆವರಣದಲ್ಲಿರುವ ಡಾ.ರಾಜ್ ಕುಮಾರ್ ಗಾಜಿನ ಮನೆಯಲ್ಲಿ ನಡೆಯಲಿದ್ದು, ಸಾಂಸ್ಕೃತಿಕ ಕಾರ್ಯಕ್ರಮವು ಸಂಜೆ 4.30 ರಿಂದ 6.00 ಗಂಟೆಯವರೆಗೆ ನಡೆಯಲಿದ್ದು, ಉಪ ಮುಖ್ಯಮಂತ್ರಿಗಳು, ಮಾನ್ಯ ಸಚಿವರುಗಳು, ಶಾಸಕರುಗಳು ಹಾಗೂ ಇನ್ನಿತರೆ ಗಣ್ಯರುಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
“ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತರ ಪಟ್ಟಿ – 2025:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ 516ನೇ ನಾಡಪ್ರಭು ಕೆಂಪೇಗೌಡ ಜಯಂತ್ಯುತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವಂತಹ 53 ಮಂದಿ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಆಯ್ಕೆಯಾಗಿದೆ.
ಇಂದು ಸಂಜೆ 6.00 ಗಂಟೆಗೆ ಬಿಬಿಎಂಪಿ ಕೇಂದ್ರ ಕಛೇರಿಯ ಡಾ. ರಾಜ್‌ಕುಮಾರ್ ಗಾಜಿನ ಮನೆ ಸಭಾಂಗಣದಲ್ಲಿ ಮುಖ್ಯಮಂತ್ರಿಗಳು, ಉಪ ಮುಖ್ಯಮಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರು ರವರಿಂದ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.