ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ (Suraj Revanna) ಅವರ ವಿರುದ್ಧ ದಾಖಲಾಗಿದ್ದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ದೊಡ್ಡ ರಿಲೀಫ್ ಸಿಕ್ಕಿದೆ.
ಈ ಪ್ರಕರಣದ ತನಿಖೆ ನಡೆಸಿದ ಸಿಐಡಿ, ಜನಪ್ರತಿನಿ ಧಿಗಳ ವಿಶೇಷ ನ್ಯಾಯಾಲ ಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದೆ. ಸೂಕ್ತ ಸಾಕ್ಷಾಧಾರ ಗಳ ಕೊರತೆಯಿಂದಾಗಿ ಈ ಕ್ರಮಕ್ಕೆ ಮುಂದಾಗಿ ರುವ ಸಿಐಡಿ, ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಎಂದು ತಿಳಿಸಿದೆ.
2024ರಲ್ಲಿ ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ಸೂರಜ್ ರೇವಣ್ಣ ಅವರ ವಿರುದ್ದ ದಾಖಲಾಗಿದ್ದ ಈ ಪ್ರಕರಣವು ಸಾಕಷ್ಟು ಚರ್ಚೆಗೆ ಗುರಿಯಾಗಿತ್ತು. ಆರೋಪಿತನ ವಿರುದ್ದ ಅಸಹಜ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದಿದ್ದವು. ಆದರೆ, ಈ ಆರೋಪಗಳನ್ನು ಸಾಬೀತುಪಡಿಸಲು ಬೇಕಾದ ಸಾಕ್ಷ್ಯಗಳು ಸಿಗದ ಕಾರಣ, ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು.
ಸಿಐಡಿ ತಂಡವು ತನಿಖೆ ನಡೆಸಿದರೂ, ಆರೋಪಗಳನ್ನು ದೃಢೀಕರಿಸುವ ಯಾವುದೇ ಗಟ್ಟಿಯಾದ ಸಾಕ್ಷ್ಯಗಳು ದೊರೆತಿಲ್ಲ. ಈ ಹಿನ್ನೆಲೆಯಲ್ಲಿ, ಸಿಐಡಿ ತನ್ನ ತನಿಖೆ ಮುಗಿಸಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ.
ಸೂರಜ್ ರೇವಣ್ಣ ಅವರು ಪ್ರಕರಣ ದಾಖಲಾದ ಸಂದರ್ಭದಿಂದಲೂ ಈ ವಿಷಯವು ರಾಜಕೀಯ ವಲಯಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಆದರೆ, ಸಿಐಡಿಯ ತನಿಖೆಯಿಂದ ಆರೋಪಗಳಿಗೆ ಯಾವುದೇ ಆಧಾರವಿಲ್ಲ ಎಂಬುದು ಸ್ಪಷ್ಟವಾದ ನಂತರ, ಸೂರಜ್ ರೇವಣ್ಣಗೆ ಕಾನೂನಿನ ಮೂಲಕ ರಿಲೀಫ್ ದೊರೆತಿದೆ.
‘ಬಿ’ ರಿಪೋರ್ಟ್ ಸಲ್ಲಿಕೆಯಿಂದಾಗಿ, ಈ ಪ್ರಕರಣದಲ್ಲಿ ಯಾವುದೇ ಕಾನೂನು ಕ್ರಮಕ್ಕೆ ಅವಕಾಶವಿಲ್ಲ ಎಂದು ಸಿಐಡಿ ತಿಳಿಸಿದೆ ಎಂದು ವರದಿಯಾಗಿದೆ.