ದೊಡ್ಡಬಳ್ಳಾಪುರ; ವೇತನ ನೀಡುವಂತೆ ಒತ್ತಾಯಿಸಿ ನಿನ್ನೆಯಿಂದ ಸೆವೆನ್ ಹಿಲ್ಸ್ ಆಸ್ಪತ್ರೆಯ (Seven Hills Hospital) ಮುಂಭಾಗ ಕಾರ್ಮಿಕರು ನಡೆಸುತ್ತಿರುವ ಅಹೋರಾತ್ರಿಯ ಪ್ರತಿಭಟನಾ ಸ್ಥಳಕ್ಕೆ ತಹಶಿಲ್ದಾರ್ ಆದಿಯಾಗಿ ಅಧಿಕಾರಿಗಳು ದೌಡಾಯಿಸಿದ್ದರು.
ತಹಸೀಲ್ದಾರ್ ವಿಭಾ ವಿದ್ಯಾರಾಥೋಡ್ ಪ್ರತಿಭಟನಾ ನಿರತರ ಸಮಸ್ಯೆಗಳನ್ನು ಆಲಿಸಿದರು, ಬಳಿಕ ಸ್ಥಳಕ್ಕೆCDPO ವಿನೋದ್ ರಾಜ್ ಅವರನ್ನು ಕರೆಸಿಕೊಂಡು ಮಹಿಳೆಯರಿಗೆ ಸೂಕ್ತ ರೀತಿಯಲ್ಲಿ ಸಹಕಾರ ನೀಡುವಂತೆ ನಿರ್ದೇಶಿಸಿದರು.

ಅಲ್ಲದೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಕಾನೂನು ಕ್ರಮ, ಪ್ರತಿಭಟನಾ ನಿರತರಿಗೆ ಸೂಕ್ತ ರಕ್ಷಣೆ ನೀಡುವಂತೆ ಪೊಲೀಸರಿಗೆ ಸೂಚಿಸಿದರು.
ಈ ವೇಳೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ, ಕೋಡಿಹಳ್ಳಿ ಬಾಬು ಮತ್ತಿತರರಿದ್ದರು.