ಕಾಸರಗೋಡು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹೆತ್ತ ಮಗನೇ ತಾಯಿಯನ್ನು ಕೊಲೆ (Murdered) ಮಾಡಿದ ಘಟನೆ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ನಡೆದಿದೆ.
ಹಿಲ್ವಾ (60 ವರ್ಷ) ಕೊಲೆಯಾದ ದುರ್ದೈವಿ ಮಹಿಳೆ. ಪುತ್ರ ಮೆಲ್ವಿನ್ ಕೃತ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಹಿಲ್ವಾ ಮತ್ತು ಮೆಲ್ವಿನ್ ಮಾತ್ರ ಮನೆಯಲ್ಲಿದ್ದರು. ಮಲಗಿದ್ದ ಹಿಲ್ಲಾ ಅವರ ಮೇಲೆ ಮಗ ಮೆಲ್ವಿನ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಮೃತ ವೃದ್ದೆಯ ಇನ್ನೊಬ್ಬ ಮಗ ಆಲ್ವಿನ್ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುದು ತಿಳಿದು ಬಂದಿಲ್ಲ.
ಆರೋಪಿ ತಲೆಮರೆಸಿಕೊಂಡಿದ್ದು, ಮಂಜೇಶ್ವರ ಠಾಣಾ ಪೊಲೀಸರು ಹುಡುಕಾಟ ನಡೆಸಿದ್ದಾರೆ.