ಬೆಂ. ಗ್ರಾ. ಜಿಲ್ಲೆ: ಮೀನುಗಾರಿಕೆ ಇಲಾಖೆ ವತಿಯಿಂದ (Fisheries Department) ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ ಮೀನು ಕೃಷಿ ಕೊಳಗಳ ನಿರ್ಮಾಣ, ಮೀನು ಮೌಲ್ಯ ಉದ್ಯಮ ಘಟಕ ಮತ್ತು ಇತರೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
2024-25ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ಕೇಂದ್ರ ವಲಯ/ರಾಜ್ಯ ವಲಯ / ಜಿಲ್ಲಾ ವಲಯದ ವಿವಿಧ ಯೋಜನೆಗಳಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ಖರೀದಿ, ಮೀನು ಮರಿ ಖರೀದಿಗೆ ಹಾಗು ಇತ್ಯಾದಿ ಯೋಜನೆಗಳಿಗೆ ಸಹಾಯಧನ ನೀಡಲಾಗುತ್ತಿದೆ.
ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇಕಡ 40 ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇಕಡ 60 ರಷ್ಟು ಸಹಾಯಧನ ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ 11 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಜಿಲ್ಲಾ ಕಛೇರಿ ಹಾಗೂ ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ರವರುಗಳನ್ನು ಸಂಪರ್ಕಿಸುವುದು.
ಮೀನುಗಾರಿಕೆ ಜಿಲ್ಲಾ ಉಪನಿರ್ದೇಶಕರು ದೂ.ಸಂ-080-23362555/ 9972189781.
ದೇವನಹಳ್ಳಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ದೂ.ಸಂ-9448500385.
ದೊಡ್ಡಬಳ್ಳಾಪುರ ಮೀನುಗಾರಿಕೆ ಸಹಾಯಕ ನಿರ್ದೇಶಕರು ದೂ.ಸಂ-8747012127.
ಹೊಸಕೋಟೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ದೂ.ಸಂ-9845180161.
ನೆಲಮಂಗಲ ಮೀನುಗಾರಿಕೆ ಸಹಾಯಕ ನಿರ್ದೇಶಕರು ದೂ.ಸಂ-8747012127 ಸಂಪರ್ಕಿಸಬಹುದೆಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.