“ಅಪ್ಪಾ, ಐ ಲವ್ ಯೂ ಪಾ” ದೊಡ್ಡಬಳ್ಳಾಪುರದ MSV ಪಬ್ಲಿಕ್ ಶಾಲೆಯಲ್ಲಿ ಫಾದರ್ಸ್ ಡೇ ಸಂಭ್ರಮ

Father's Day celebration at MSV Public School, Doddaballapura

ದೊಡ್ಡಬಳ್ಳಾಪುರ: ತಂದೆಗೆ ಗೌರವಿಸುವ ಸಲುವಾಗಿ ಒಂದು ದಿನ ಗುರುತಿಸಲಾಗಿದ್ದು, ಆ ದಿನದಂದು ತಂದೆಯೊಂದಿಗೆ ಮಕ್ಕಳು ಅಮೂಲ್ಯವಾದ ಸಮಯ ಕಳೆಯಲು ಮೀಸಲಿಡಲಾಗಿದೆ.

ಹೌದು ಈ ವರ್ಷ ಜೂ.15ರಂದು
“ಫಾದರ್ಸ್ ಡೇ” (ಅಪ್ಪಂದಿರ ದಿನ) ಈ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆ (MSV Public School) ತನ್ನ ವಿದ್ಯಾರ್ಥಿಗಳಿಗಾಗಿ ತಂದೆಯೊಂದಿಗೆ ಸಮಯ ಕಳೆಯುವ ಅವಕಾಶ ಕಲ್ಪಿಸಿದೆ.

"ಅಪ್ಪಾ, ಐ ಲವ್ ಯೂ ಪಾ" ದೊಡ್ಡಬಳ್ಳಾಪುರದ MSV ಪಬ್ಲಿಕ್ ಶಾಲೆಯಲ್ಲಿ ಫಾದರ್ಸ್ ಡೇ ಸಂಭ್ರಮ

ಪುಟಾಣಿ ಮಕ್ಕಳಿಂದ ನೃತ್ಯ, ಗಾಯನ, ಭಾಷಣ, ಅಪ್ಪಂದಿರಿಗೆ ಮೋಜಿನ ಆಟಗಳು, ವಿಜೇತರಿಗೆ ಬಹುಮಾನ ವಿತರಣೆ ಮೂಲಕ ನಿನ್ನೆ (ಜೂ.27) ಎಂಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಫಾದರ್ಸ್ ಡೇಯನ್ನು ಸಂಭ್ರಮ‌ದಿಂದ ಆಚರಿಸಲಾಗಿದೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ
ಮುಖ್ಯ ಅತಿಥಿಗಳಾಗಿ ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ ನ ನೂತನ ಅಧ್ಯಕ್ಷ, ಪ್ರೊ.ಕೆ.ಆರ್.ರವಿಕಿರಣ್ (Prof.K.R.Ravikiran) ಭಾಗವಹಿಸಿದ್ದರು.

"ಅಪ್ಪಾ, ಐ ಲವ್ ಯೂ ಪಾ" ದೊಡ್ಡಬಳ್ಳಾಪುರದ MSV ಪಬ್ಲಿಕ್ ಶಾಲೆಯಲ್ಲಿ ಫಾದರ್ಸ್ ಡೇ ಸಂಭ್ರಮ

ಈ ವೇಳೆ ಮಾತನಾಡಿದ ಅವರು, ಅಪ್ಪ ಪ್ರತಿ ಮಗುವಿನ ಬದುಕಿನಲ್ಲಿ ಬೆಳಕು ನೀಡುವ ಸೂರ್ಯ, ಅಪ್ಪ ಅಂದರೆ ಅದ್ಭುತ, ದೊಡ್ಡ ಮಾರ್ಗದರ್ಶಕರು, ದಾರಿ ತೋರುವ ಗುರು, ಮಾದರಿ ಬದುಕನ್ನು ಕಟ್ಟಿಕೊಡುವ ಬಹುದೊಡ್ಡ ವ್ಯಕ್ತಿ. ಬದುಕಿನಲ್ಲಿ ಎಲ್ಲವನ್ನೂ ಧಾರೆಯೆರೆದ ನಿಸ್ವಾರ್ಥಿ.

ನಾವು ಮಾದರಿಯಾಗಿ ಬದುಕುವ ಹಾಗೆ, ಮಕ್ಕಳಲ್ಲಿ ಮಾದರಿ ವ್ಯಕ್ತಿತ್ವವನ್ನು ಬೆಳೆಸುವುದು ಪ್ರತಿಯೊಬ್ಬ ತಂದೆಯ ಜವಾಬ್ದಾರಿಯಾಗಿದೆ. ಒಬ್ಬ ಅಬ್ರಾಹಂ ಲಿಂಕನ್ ನಮಗೆ ಮಾದರಿಯಾಗಿ ನಿಲ್ಲುತ್ತಾರೆ. ಭಾರತದ ಪ್ರಥಮ ಪ್ರಧಾನಿ ಜವಹರಲಾಲ್ ನೆಹರು ತಮ್ಮ ಮಗಳನ್ನು ಬೆಳೆಸಿದ ರೀತಿ ಇಂದಿರಾ ಗಾಂಧಿಯವರನ್ನು ದೇಶಕಂಡ ಅಪ್ರತಿಮ ಪ್ರಧಾನಿಯನ್ನಾಗಿ ಮಾಡಿತು ಎಂದರು.

"ಅಪ್ಪಾ, ಐ ಲವ್ ಯೂ ಪಾ" ದೊಡ್ಡಬಳ್ಳಾಪುರದ MSV ಪಬ್ಲಿಕ್ ಶಾಲೆಯಲ್ಲಿ ಫಾದರ್ಸ್ ಡೇ ಸಂಭ್ರಮ

ಶಾಲೆಯ ಸಂಸ್ಥಾಪಕ ಅಧ್ಯಕ್ಷ ಎ.ಸುಬ್ರಮಣ್ಯ (A.Subramanya) ಮಾತನಾಡಿ, ಅಪ್ಪನ ಕಾಳಜಿ, ಅಮ್ಮನ ಪ್ರೀತಿ ಮಕ್ಕಳಲ್ಲಿ ತುಂಬುವ ಸಂಬಂಧಗಳ ಸಂಸ್ಕಾರ ಹಾಗೂ ಮೌಲ್ಯಗಳನ್ನು ಪ್ರತಿ ಮಗುವಿನಲ್ಲಿ ಮೂಡಿಸಿದಾಗ ಅವು ಅಮೂಲ್ಯ ರತ್ನಗಳಾಗಿ ಬೆಳೆಯುತ್ತವೆ.

ಅಂತಹ ಮಹತ್ತರ ಕಾರ್ಯ ನಿಭಾಯಿಸುವುದು ಅಪ್ಪ ಅನ್ನುವ ಅದ್ಭುತ ಶಕ್ತಿ. ಮಗುವನ್ನು ಹೆಗಲಮೇಲೆ ಕೂರಿಸಿ ವಿಶ್ವವನ್ನೇ ತೋರಿಸುವ ಜೀವ ಅಪ್ಪ. ಇಂತಹ ತಂದೆಗೆ ಶುಭಾಶಯ ತಿಳಿಸುವ ಸುದಿನ ಎಂದು ನುಡಿದರು.

ಈ ವೇಳೆ ಸಂಸ್ಥೆಯ ಉಪಾಧ್ಯಕ್ಷ ಎಸ್.ಸ್ವರೂಪ್, ಟ್ರಸ್ಟಿ ನಯನಾ ಸ್ವರೂಪ್, ಪ್ರಾಂಶುಪಾಲರಾದ ರೆಮ್ಯ ಬಿ.ವಿ ಹಾಗೂ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ವರ್ಗ ಇದ್ದರು.

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]