
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಅಧ್ಯಕ್ಷ ಸ್ಥಾನದ ಬದಲಾವಣೆ ವದಂತಿ, ವಿಪಕ್ಷ ನಾಯಕನ ಬದಲಾವಣೆ ಸುದ್ದಿಗಳ ನಡುವೆ ಬಿಜೆಪಿಯ ಹಿರಿಯ ಮುಖಂಡ, ಮಾಜಿ ಸಚಿವ ಮಾಧುಸ್ವಾಮಿ (Madhuswamy) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ. (Cmsiddaramaiah) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಕುತೂಹಲ ಮೂಡಿಸಿದ್ದಾರೆ.
ಈಗಾಗಲೇ ರಾಜ್ಯ ಬಿಜೆಪಿಯ ಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ ಎಂದು ಮಾಜಿ ಸಿಎಂ ಸದಾನಂದ ಗೌಡ ಹೇಳಿಕೆ ನಡುವೆ, ಬಿಜೆಪಿ ನಾಯಕರಾದ ಬಿ.ವೈ.ವಿಜಯೇಂದ್ರ (B.Y.Vijayendra), ವಿಪಕ್ಷ ನಾಯಕ ಆರ್.ಅಶೋಕ (R.Ashoka) ದೆಹಲಿ ಭೇಟಿ ಕುರಿತು ಹಲವು ಗೊಂದಲಕಾರಿ ಹೇಳಿಕೆ ನೀಡುತ್ತಿದ್ದಾರೆ.
ಇದರ ನಡುವೆ ಇಂದು ಬಿಜೆಪಿಯ ಹಿರಿಯ ಮುಖಂಡ, ಮಾಜಿ ಸಚಿವ ಮಾಧುಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಮಾತಕತೆ ನಡೆಸಿರುವುದು ಮತ್ತೊಂದು ರೀತಿಯ ಚರ್ಚೆಗೆ ಕಾರಣವಾಗಿದೆ.

ಆದರೆ ಮಾಧುಸ್ವಾಮಿ ಅವರ ದಿಢೀರ್ ಸಿಎಂ ಸಿದ್ದರಾಮಯ್ಯ ಭೇಟಿಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.

