The historical significance of Dasera should not be forgotten in the hustle and bustle of the grand opening: Cmsiddaramaiah

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಸೂಚನೆಗಳನ್ನು ನೀಡಿದರು.

ಸರ್ಕಾರದ ಸಾಧನೆಗಳು, ನಾವು ಪ್ರತೀ ಇಲಾಖೆಯಲ್ಲೂ ಜಾರಿ ಮಾಡಿರುವ ಜನಪರ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ಮನವರಿಕೆ ಆಗುವ ರೀತಿಯಲ್ಲಿ ಯೋಜನೆ ರೂಪಿಸಬೇಕು.

ಈ ಬಾರಿ ರಾಜ್ಯದಾದ್ಯಂತ ಮಳೆ ಬೆಳೆ ಉತ್ತಮವಾಗಿದ್ದು, ನದಿ, ಕೆರೆಗಳು ತುಂಬಿದ್ದು, ವೈಭವದಿಂದ ದಸರಾ ಆಚರಿಸಲಾಗುವುದು.

ಸೆಪ್ಟಂಬರ್‌ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್‌ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾ ಈ ಬಾರಿ 10ದಿನಗಳ ಬದಲು 11ದಿನಗಳ ಕಾಲ ನಡೆಯಲಿದೆ.

ದಸರಾಕ್ಕೆ ತನ್ನದೇ ಆದ ಚಾರಿತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದ್ದು, ಇದಕ್ಕೆ ಪೂರಕವಾಗಿ ದಸರಾ ಆಚರಿಸಲಾಗುವುದು.

ವಿಶ್ವ ವಿಖ್ಯಾತ ದಸರಾದ ಪರಂಪರೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು.

ಕಳೆದ ವರ್ಷ ದಸರಾ ಆಚರಣೆಗೆ ಒಟ್ಟು ರೂ. 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಬೇಕಾದಷ್ಟು ಅನುದಾನವನ್ನು ಒದಗಿಸಲಾಗುವುದು.

ಸರ್ಕಾರದ ಸಾಧನೆಗಳನ್ನು ಮತ್ತು ಇಲಾಖಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರತಿಬಿಂಬಿಸುವಂತಹ ವಸ್ತು ಪ್ರದರ್ಶನ, ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಬೇಕು. ಅಕ್ಟೋಬರ್‌ 2ರಂದು ವಿಜಯದಶಮಿ ಬಂದಿರುವ ಕಾರಣ ಸ್ತಬ್ಧ ಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೆ ಸಹ ಅವಕಾಶ ಕಲ್ಪಿಸಬೇಕು.

ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳ ಮಾಹಿತಿ ಒದಗಿಸಲು ವ್ಯವಸ್ಥೆ ಮಾಡಬೇಕು.

ದಸರಾ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. 10ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ಸಂದರ್ಭ ಇದಾಗಿದೆ. ವಿದೇಶಿಗರೂ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲಾ ಕಡೆ ಮುನ್ನೆಚ್ಚರಿಕೆ ವಹಿಸಬೇಕು.

ಅರಮನೆ ಮುಂಭಾಗದಲ್ಲಿ ಆಸನದ ವ್ಯವಸ್ಥೆಯನ್ನು ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಾಡಿ ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ.

ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು.

ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ಕೆಆರ್‌ಎಸ್‌ಗೆ ಹೋಗುವ ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವ ಕಾರ್ಯವನ್ನು ಈಗಲೇ ಆರಂಭಿಸಬೇಕು.

ಜಾನಪದ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ಜಾನಪದ ಪ್ರದರ್ಶನದಲ್ಲಿ ಏಕತಾನತೆ ಇಲ್ಲದಂತೆ ನೋಡಿಕೊಳ್ಳಬೇಕು.

ಕಳೆದ ಬಾರಿ ವಿದ್ಯುತ್‌ ದೀಪ ಅಲಂಕಾರವನ್ನು ವೈಭವದಿಂದ ಮಾಡಲಾಗಿತ್ತು. ಇದಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಬಾರಿಯೂ ವಿದ್ಯುತ್‌ ದೀಪಾಲಂಕಾರವನ್ನು ಇನ್ನಷ್ಟು ಉತ್ತಮವಾಗಿ ಮಾಡಬೇಕು.

ಎಲ್ಲಾ ಜಿಲ್ಲೆಗಳಿಂದ ಆಗಮಿಸುವ ಸ್ತಬ್ಧಚಿತ್ರಗಳು ವೈವಿಧ್ಯಮಯವಾಗಿರುವಂತೆ ನೋಡಿಕೊಳ್ಳಬೇಕು.

ವಸ್ತು ಪ್ರದರ್ಶನದ ಮಳಿಗೆಗಳು ಉದ್ಘಾಟನೆ ಸಂದರ್ಭದಲ್ಲೇ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿರಬೇಕು. ಯಾವುದೇ ಮಳಿಗೆಗಳು ಖಾಲಿಯಿರಬಾರದು.

ಗೋಲ್ಡ್ ಕಾರ್ಡ್‌ ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ವಿತರಿಸಬೇಕು.

ಮೈಸೂರು ನಗರದ ಸೌಂದರ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು.

ದಸರಾ ವೀಕ್ಷಿಸಲು ಆಗಮಿಸುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಶೌಚಾಲಯ, ವಾಹನ ಪಾರ್ಕಿಂಗ್‌ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು.

ಈ ಬಾರಿಯೂ ದೊಡ್ಡ ಪ್ರಮಾಣದಲ್ಲಿ ಡ್ರೋಣ್‌ ಶೋ ಆಯೋಜಿಸಲಾಗುವುದು.

ದಸರಾ ಸಂದರ್ಭದಲ್ಲಿ ಅಧಿಕಾರಿಗಳು ಜನಸಾಮಾನ್ಯರಿಗೆ ದೊರೆಯುವುದಿಲ್ಲ ಎಂಬ ದೂರುಗಳಿದ್ದು, ಇದಕ್ಕೆ ಈ ಬಾರಿ ಅವಕಾಶ ನೀಡಬಾರದು. ಜನಸಾಮಾನ್ಯರ ಕೆಲಸ ಕಾರ್ಯಗಳು, ಅಭಿವೃದ್ದಿ ಕಾರ್ಯಗಳು ಯಾವುದೇ ಕಾರಣಕ್ಕೂ ಕುಂಠಿತವಾಗಬಾರದು.

ಈ ಬಾರಿ ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಡಲು ಸಭೆಯಲ್ಲಿ ನಿರ್ಧರಿಸಲಾಯಿತು.

ಕಳೆದ ಬಾರಿ ಅರಮನೆ ಮುಂದೆ ಆಸನ ವ್ಯವಸ್ಥೆಯನ್ನು 54ಸಾವಿರಕ್ಕೆ ಹೆಚ್ಚಿಸಲಾಗಿತ್ತು. ಇದರಿಂದಾಗಿ ಜಂಬೂ ಸವಾರಿ ಸಂದರ್ಭದಲ್ಲಿ ಜನದಟ್ಟಣೆ ಉಂಟಾಗಿತ್ತು. ಈ ಬಾರಿ ಜನದಟ್ಟಣೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ.

ಯಾವುದೇ ಕಾರ್ಯಕ್ರಮಗಳ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಜನದಟ್ಟಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರಜಾಪ್ರಭುತ್ವ, ಸಂವಿಧಾನ, ಅಭಿವೃದ್ಧಿ, ಉತ್ತಮ ಆಡಳಿತದ ಆಶಯದಲ್ಲಿ ದಸರಾ ಆಚರಿಸಲಾಗುವುದು ಎಂದು ಡಾ. ಹೆಚ್.ಸಿ.ಮಹದೇವಪ್ಪ ಹೇಳಿದರು.

ಮೈಸೂರು ದಸರಾ ಪ್ರಾಧಿಕಾರ ಸ್ಥಾಪಿಸಿ ಅದರ ಮೂಲಕ ದಸರಾ ವ್ಯವಸ್ಥಿತವಾಗಿ ಆಚರಿಸಬೇಕು. ಕುಳಿತುಕೊಳ್ಳುವ ಸ್ಥಳಾವಕಾಶ ಹೆಚ್ಚಿಸಬೇಕು. ಪಾರ್ಕಿಂಗ್‌ ವ್ಯವಸ್ಥೆಯನ್ನು ವ್ಯವಸ್ಥಿತಗೊಳಿಸಬೇಕು ಎಂದು ತನ್ವೀರ್‌ ಸೇಠ್ ಹೇಳಿದರು.

ಉತ್ತಮ ಮಳೆಯಾಗಿದ್ದು, ರೈತರು ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದಾರೆ. ನದಿಗಳು ತುಂಬಿದ್ದು, ಕೆಆರ್‌ಎಸ್‌ ಈ ಬಾರಿ ಬೇಗನೇ ತುಂಬಿದೆ. ಜಂಬೂ ಸವಾರಿ ಸಂದರ್ಭದಲ್ಲಿ ಕಲಾ ತಂಡಗಳನ್ನು ಹೊರತುಪಡಿಸಿ ಬೇರೆ ಯಾರೂ ಓಡಾಡಲು ಅವಕಾಶ ಮಾಡಬಾರದು. ಕಲಾ ತಂಡಗಳಲ್ಲಿ ವೈವಿಧ್ಯತೆ ಇರಬೇಕು ಎಂದು ಜಿ.ಟಿ.ದೇವೇಗೌಡ ಸಲಹೆ ನೀಡಿದರು.

ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಇಕೋ ಫ್ರೆಂಡ್ಲಿ ಹಸಿರು ದಸರಾ ಆಚರಿಸಲು ಕ್ರಮ ಕೈಗೊಳ್ಳಬೇಕು. ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಕ್ರಮ ಕೈಗೊಳ್ಳಬೇಕು- ಪುಷ್ಪಾ ಅಮರನಾಥ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಸುರೇಶ್‌ ಭೈರತಿ, ಜಿ.ಟಿ.ದೇವೇಗೌಡ, ರಮೇಶ್‌ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ,, ತನ್ವೀರ್‌ ಸೇಠ್‌, ಡಾ.ಯತೀಂದ್ರ ಎಸ್‌, ಡಾ.ಡಿ.ತಿಮ್ಮಯ್ಯ, ಅನಿಲ್‌ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್‌ ಗೌಡ, ದರ್ಶನ್‌ ಧ್ರುವನಾರಾಯಣ, ಡಾ.ಮಾನಸ, ಪುಷ್ಪಾ ಅಮರನಾಥ್, ಅಯೂಬ್‌ ಖಾನ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತಿತರರು ಉಪಸ್ಥಿತರಿದ್ದರು.

ರಾಜಕೀಯ

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar)

[ccc_my_favorite_select_button post_id="110777"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!