ರಾಜ್ಯ ಸರ್ಕಾರದ ನಿರ್ಣಯಕ್ಕೆ ಕೇಂದ್ರದ ಬೆಂಬಲ.. ಮೋದಿ ಸರ್ಕಾರ ವಿರುದ್ಧ ಬಿಜೆಪಿ ಶಾಸಕ ಬೇಸರ..!

Center's support for state government's decision.. BJP MLA upset with Modi government..!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ (B.Dayananda) ಸೇರಿ ಮೂವರು ಐಪಿಎಸ್ ಅಧಿಕಾರಿಗಳನ್ನು (IPS officers) ಅಮಾನತು ಮಾಡಿದ ರಾಜ್ಯ ಸರಕಾರದ (State Government) ಕ್ರಮಕ್ಕೆ ಕೇಂದ್ರ ಸರಕಾರ (Central Government) ಬೆಂಬಲಿಸಿ ಅಧಿಕೃತ ಮುದ್ರೆ ಹಾಕಿದೆ.

ಆದರೆ ಇದಕ್ಕೆ ಬಿಜೆಪಿ ಶಾಸಕ (BJP MLA) ಎಸ್ ಸುರೇಶ್ ಕುಮಾರ್ (S.Suresh Kumar) ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಅವರು, “3 ಐಪಿಎಸ್ ಅಮಾನತಿಗೆ ಕೇಂದ್ರ ಅಸ್ತು ” ಎಂಬ ಸುದ್ದಿ ಓದಿ ಮನಸ್ಸಿಗೆ ತುಂಬಾ ಬೇಸರವಾಗಿದೆ. ಅಧಿಕಾರಿಗಳ ನೈತಿಕ ಬಲ ಇನ್ನಷ್ಟು ಕುಸಿಯುತ್ತದೆ ಎಂದು ಮೋದಿ ಸರ್ಕಾರದ (Modi Government) ನಿರ್ಣಯದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರಕಾರವು ಐಎಎಸ್ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟರು. ಕರ್ತವ್ಯ ನಿರ್ಲಕ್ಷ್ಯತದ ಆರೋಪದ ಮೇರೆಗೆ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ, ವರದಿಯನ್ನು ಕೇಂದ್ರಕ್ಕೆ ಕಳುಹಿಸಿಕೊಟ್ಟಿತ್ತು.

ಇದೀಗ ದಯಾನಂದ್ ಸೇರಿದಂತೆ ಐಪಿಎಸ್ ಅಧಿಕಾರಿಗಳಾದ ವಿಕಾಸ ಕುಮಾರ್ ವಿಕಾಸ್ ಮತ್ತು ಶೇಖರ್ ಅವರ ಅಮಾನತಿಗೆ ಕೇಂದ್ರ ಅನುಮೋದನೆ ನೀಡಿದೆ.

ಇದೇ ವೇಳೆ ಶಿಸ್ತು ಪ್ರಕ್ರಿಯೆ ಮುಂದುವರಿಸುವ ಮೂಲಕ ಅಧಿಕಾರಿಗಳ ವಿರುದ್ಧ 30 ದಿನಗಳಲ್ಲಿ ಚಾರ್ಜ್‌ ಶೀಟ್ ಹಾಕುವಂತೆ ರಾಜ್ಯ ಸರಕಾರಕ್ಕೆ ಸೂಚಿಸಲಾಗಿದೆ.

ಆರೋಪಪಟ್ಟಿ ಸಲ್ಲಿಕೆಯ ನಂತರ ಕೇಂದ್ರಕ್ಕೆ ಮಾಹಿತಿ ನೀಡಬೇಕು ಎಂದು ಕೇಂದ್ರ ತಿಳಿಸಿದೆ. ಇದು ಆಡಳಿತಾತಕ ಕ್ರಮಗಳಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಐಪಿಎಸ್ ಅಧಿಕಾರಿಗಳ ಶಿಸ್ತು ಕ್ರಮಗಳ ಕೈಗೊಂಡಿರುವುದು ಪೊಲೀಸ್ ಇಲಾಖೆಯಲ್ಲಿ ಪ್ರಮುಖ ಕ್ರಮವಾಗಿದೆ.

ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ಅಮಾನತು ಬಗ್ಗೆ ನಿಯಮಾನುಸಾರ ಕೇಂದ್ರ ಸರಕಾರ ಅಂತಿಮ ನಿರ್ಣಯ ತೆಗೆದುಕೊಳ್ಳಬೇಕು.

ಅಧಿಕಾರಿಗಳ ಕೇಡರ್ ಹಾಗೂ ನೇಮಕಾತಿ ಬಗ್ಗೆ ರಾಜ್ಯ ಸರಕಾರ ಅಧಿಕಾರ ಹೊಂದಿದೆ. ಆದರೆ, ಅಮಾನತು ವಿಚಾರದಲ್ಲಿ ಕೇಂದ್ರ ಸರಕಾರದೇ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು ಎಂಬ ನಿಯಮವಿದೆ.

ಐಪಿಎಸ್ ಅಥವಾ ಐಎಎಸ್ ಶ್ರೇಣಿಯ ಅಧಿಕಾರಿಗಳನ್ನು ಅಮಾನತುಗೊಳಿಸಿದರ ಬಗ್ಗೆ ಒಂದು ದಿನದಲ್ಲಿ ಕೇಂದ್ರ ಸರಕಾರಕ್ಕೆ ರಾಜ್ಯ ಸರಕಾರ ಮಾಹಿತಿ ನೀಡಬೇಕು.

ನಂತರ 15 ದಿನಗಳಲ್ಲಿ ಆ ಅಧಿಕಾರಿಗಳ ಅಮಾನತಿಗೆ ಕಾರಣಗಳ ಕುರಿತು ಸಮಗ್ರ ವರದಿ ಕೇಂದ್ರಕ್ಕೆ ಸಲ್ಲಿಸಿ ರಾಜ್ಯ ಸರಕಾರ ಮನವರಿಕೆ ಮಾಡಿಕೊಡಬೇಕು. ಈ ವರದಿ ಆಧರಿಸಿ 1 ತಿಂಗಳಲ್ಲಿ ಅಮಾನತು ಆದೇಶವನ್ನು ಒಪ್ಪಿಗೆ ಅಥವಾ ತಿರಸ್ಕಾರದ ಬಗ್ಗೆ ಕೇಂದ್ರ ನಿರ್ಣಯ ಮಾಡುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕ್ರಮ ಕೈಗೊಂಡಿದ್ದು, ಕೇಂದ್ರ ಸರಕಾರವು ಸಹ ಉತ್ತರ ನೀಡಿದೆ.

ಪ್ರಕರಣದ ಹಿನ್ನೆಲೆ: ಜೂನ್ 4ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ 2025 ರ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 11 ಜನರು ಮೃತಪಟ್ಟು, 56 ಜನರು ಗಾಯಗೊಂಡಿದ್ದರು. ಇದರಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ರಾಜ್ಯ ಸರಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿತ್ತು.

ಜನಸಂದಣಿ ನಿಯಂತ್ರಣಕ್ಕೆ ಸೂಕ್ತ ವ್ಯವಸ್ಥೆ ಮಾಡದಿರುವುದು ಮತ್ತು ಸಾರ್ವಜನಿಕರಿಗೆ ಸುರಕ್ಷತಾ ಮಾಹಿತಿಯನ್ನು ಒದಗಿಸದಿರುವುದು, ಈ ದುರಂತಕ್ಕೆ ಕಾರಣವಾಯಿತು, ಅಲ್ಲದೆ ಸಿಎಂಗೆ ಘಟನೆ ಕುರಿತು ಮಾಹಿತಿ ನೀಡದೇ ಇರುವ ಕಾರಣ ರಾಜ್ಯ ಸರಕಾರದ ಆದೇಶದಲ್ಲಿ ತಿಳಿಸಿತ್ತು.

ಈ ಕಾರಣಕ್ಕಾಗಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ) ವಿಕಾಸ್ ಕುಮಾರ್ ವಿಕಾಸ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಎಚ್. ಟೆಕ್ಕನವರ್, ಕಬ್ಬನ್‌ ಪಾರ್ಕ್‌ ಎಸಿಪಿ ಸಿ. ಬಾಲಕೃಷ್ಣ ಮತ್ತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟ‌ರ್ ಎ.ಕೆ. ಗಿರೀಶ್ ಅವರನ್ನು ಅಮಾನತುಗೊಳಿಸಿದೆ.

ಫೋಟೋ ಕೃಪೆ: ಸುರೇಶ್ ಕುಮಾರ್ ಫೇಸ್ಬುಕ್

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]