ಡಿ.ಕೆ.ಶಿವಕುಮಾರ್‌‌‌ಗೆ ಜಾತಕ ಸರಿಯಿಲ್ಲ, ಒದ್ದು ಕಿತ್ತುಕೊಂಡರೆ ಅಧಿಕಾರ ಸಿಗುತ್ತೆ: ಆರ್.ಅಶೋಕ್ ತಿರುಗೇಟು

D.K. Shivakumar should not become a villain in Bengaluru: Opposition Leader R. Ashoka

ಬೆಂಗಳೂರು: ಸಂವಿಧಾನಕ್ಕೆ 68 ಬಾರಿ ತಿದ್ದುಪಡಿ ತಂದ ಕಾಂಗ್ರೆಸ್‌, ಜಾತ್ಯತೀತ ಪದದ ಬಗ್ಗೆ ಮಾತನಾಡುತ್ತಿದೆ. ಆದರೆ ಬಾಬಾ ಸಾಹೇಬರು ಬರೆದ ಸಂವಿಧಾನದಲ್ಲಿ ಜಾತ್ಯತೀತ ಪದವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ(R.Ashoka) ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್‌ ಸರಕಾರ್ಯವಾಹರಾದ ದತ್ತಾತ್ರೇಯ ಹೊಸಬಾಳೆಯವರು ಹೇಳಿದ್ದು ಕಾಂಗ್ರೆಸ್‌ನವರು ಸೇರಿಸಿದ ಪದಗಳ ಬಗ್ಗೆ. ನಾನು ಒಕ್ಕಲಿಗ ಎಂದು ಗುರುತಿಸಿಕೊಳ್ಳುತ್ತೇನೆ. ಎಲ್ಲರೂ ಅವರ ಜಾತಿಯನ್ನು ಗುರುತಿಸಿಕೊಳ್ಳುತ್ತಾರೆ. ಅಂದಮೇಲೆ ಜಾತ್ಯತೀತ ಎಂಬುದಕ್ಕೆ ಅರ್ಥವಿಲ್ಲ.

ಡಾ.ಬಿ.ಆರ್.ಅಂಬೇಡ್ಕರ್‌ ಬರೆದ ಸಂವಿಧಾನದಲ್ಲಿ ಜಾತ್ಯತೀತ ಹಾಗೂ ಸಮಾಜವಾದ ಎಂಬ ಪದ ಎಲ್ಲಿದೆ ಎಂದು ಕಾಂಗ್ರೆಸ್‌ ನಾಯಕರು ತೋರಿಸಲಿ. ರಾಹುಲ್‌ ಗಾಂಧಿ ಒಂದು ಕಡೆ ಜಾತಿ ಸಮೀಕ್ಷೆ ಬೇಕೆಂದು ಹೇಳುತ್ತಾರೆ. ನಂತರ ಜಾತ್ಯತೀತ ಎನ್ನುತ್ತಾರೆ.

ಜವಹರಲಾಲ್‌ ನೆಹರು ಅವರು ಒಂದನೇ ತಿದ್ದುಪಡಿ ತಂದರು. ಒಟ್ಟು 17 ತಿದ್ದುಪಡಿಗಳನ್ನು ಅವರು ಮಾಡಿದ್ದಾರೆ. ನಂತರ ಬಂದ ಇಂದಿರಾಗಾಂಧಿ 26 ತಿದ್ದುಪಡಿ ಮಾಡಿದ್ದಾರೆ. ಬಾಬಾ ಸಾಹೇಬರ ಮೂಲ ಆಶಯಗಳನ್ನೇ ತಿದ್ದುಪಡಿ ಮಾಡಿದ್ದಾರೆ. ಒಟ್ಟಾರೆಯಾಗಿ ಕಾಂಗ್ರೆಸ್‌ 68 ತಿದ್ದುಪಡಿಗಳನ್ನು ಮಾಡಿದೆ ಎಂದರು.

ತುರ್ತು ಪರಿಸ್ಥಿತಿ ತರಬೇಕೆಂದು ಯಾವ ಸಂವಿಧಾನದಲ್ಲಿ ಎಲ್ಲಿ ಬರೆದಿದ್ದಾರೆ ಎಂದು ಕಾಂಗ್ರೆಸ್‌ ಹೇಳಬೇಕು. ಕಾಂಗ್ರೆಸ್‌ನವರು ಕುತಂತ್ರ ಮಾಡಿ ಈ ಎರಡೂ ಪದಗಳನ್ನು ಸೇರಿಸಿದ್ದಾರೆ. ಈ ಬಗ್ಗೆ ಚರ್ಚೆಯಾಗಬೇಕಿದೆ ಎಂದರು.

ಕ್ರಾಂತಿಯಾಗುವುದು ಖಚಿತ

ಕಾಂಗ್ರೆಸ್‌ ಸಚಿವರು ಕ್ಷಿಪ್ರ ಕ್ರಾಂತಿಯ ಬಗ್ಗೆ ಹೇಳಿದ್ದಾರೆ. ಸಿಎಂ ಬದಲಾವಣೆ ಆಗಲಿದೆ. ಡಿ.ಕೆ.ಶಿವಕುಮಾರ್‌ ಅವರ ಜಾತಕ ಸರಿಯಿಲ್ಲ. ಅಧಿಕಾರವನ್ನು ಅವರು ಒದ್ದು ಕಿತ್ತುಕೊಳ್ಳಬೇಕಿದೆ. ಅವರಿಗೆ ನೈಸರ್ಗಿಕವಾದ ಯೋಗವಿಲ್ಲ ಎಂದರು.

ಬಿಬಿಎಂಪಿ ಆರ್ಥಿಕವಾಗಿ ದಿವಾಳಿಯಾಗಿದೆ. ನಮ್ಮ ಕ್ಲಿನಿಕ್‌ ಸಿಬ್ಬಂದಿಗೆ ಸಂಬಳ ನೀಡಿಲ್ಲ. ಶಾಸಕ ಬಿ.ಆರ್‌.ಪಾಟೀಲ್‌ ಹಾಗೂ ಇನ್ನಷ್ಟು ಶಾಸಕರು ಕಾಮಗಾರಿ ನಡೆಯುತ್ತಿಲ್ಲ ಎಂದು ದೂರಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಜನರ ಮೇಲೆ ಇನ್ನಷ್ಟು ತೆರಿಗೆ ಹೇರಲಿದ್ದಾರೆ. ಜನರು ಮನೆ ಕಟ್ಟಲು ಮುಂದಾದರೆ ಸರ್ಕಾರಕ್ಕೆ ಕಪ್ಪ ಕಾಣಿಕೆ ಕೊಡಬೇಕಾಗುತ್ತದೆ. ಸರ್ಕಾರಕ್ಕೆ ವಿಶೇಷ ದಕ್ಷಿಣೆ ನೀಡಬೇಕಿದೆ ಎಂದರು.

ಗೃಹ ಇಲಾಖೆ ಕಾಂಗ್ರೆಸ್‌ನ ಡಿಪಾರ್ಟ್‌ಮೆಂಟ್‌ ಆಗಿದೆ. ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿ ಪತ್ರಕರ್ತರನ್ನು ಜೈಲಿಗೆ ಹಾಕಿದ್ದರು. ಅದೇ ರೀತಿ ಗೃಹ ಇಲಾಖೆಯ ಹೊಸ ಕಾನೂನು ತಂದು, ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ವಿರುದ್ಧ ಬರೆಯುವವರ ವಿರುದ್ಧ ಕ್ರಮ ವಹಿಸಲಿದೆ. ಇದರಿಂದ ಪತ್ರಕರ್ತರನ್ನು ಜೈಲಿಗೆ ಹಾಕಲಾಗುತ್ತದೆ.

ಗ್ಯಾರಂಟಿಗಳನ್ನು ನಿಲ್ಲಿಸಲು ಹೈಕಮಾಂಡ್‌ ಬಿಡುತ್ತಿಲ್ಲ. ಅದಕ್ಕಾಗಿ ಹಣ ಉಳಿಸಲು ಪಿಂಚಣಿ ಸೇರಿದಂತೆ ಎಲ್ಲ ಯೋಜನೆಗಳಲ್ಲಿ ಹಣ ಕಡಿತ ಮಾಡಲಾಗುತ್ತದೆ. ಅನೇಕ ಫಲಾನುಭವಿಗಳನ್ನು ಅನರ್ಹ ಮಾಡಲಾಗುತ್ತದೆ ಎಂದರು.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರ ನೇತೃತ್ವದ ಬಿಜೆಪಿ ಸಮಿತಿಯ ಸಭೆಗೆ ಹೋಗಲು ಸಾಧ್ಯವಾಗಿಲ್ಲ. ನಾನು ಆಗ ದೆಹಲಿಯಲ್ಲಿ ಉಳಿದಿದ್ದೆ. ಪ್ರತಿ ಜಿಲ್ಲೆಗೆ ಹೋಗಿ ಜಿಲ್ಲಾಮಟ್ಟದಲ್ಲಿ ಸಮಸ್ಯೆ ಪರಿಹರಿಸಲು ಈ ಸಮಿತಿ ರಚಿಸಲಾಗಿದೆ.

ಸರ್ಕಾರದ ವಿರುದ್ಧ ಬಿಜೆಪಿ ಯಶಸ್ವಿಯಾಗಿ ಹೋರಾಟಗಳನ್ನು ಮಾಡಿದೆ. ಆದರೆ ಜಿಲ್ಲಾಮಟ್ಟದಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸಿದರೆ ಹೋರಾಟಗಳನ್ನು ಇನ್ನಷ್ಟು ವೇಗವಾಗಿ ಮಾಡಬಹುದು ಎಂಬ ಅಭಿಪ್ರಾಯ ಬಂದಿದೆ. ಬಿಜೆಪಿಯಲ್ಲಿ ಎಲ್ಲರೂ ಒಂದಾಗಿ ಹೋಗಲೇಬೇಕಿದೆ. ಆಗಲೇ ಪಕ್ಷಕ್ಕೆ ಕಳೆ ಬರಲಿದೆ. ಇದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ ಎಂದರು.

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]