ದೊಡ್ಡಬಳ್ಳಾಪುರ: ದಾಬಸ್‌ಪೇಟೆ- ಹೊಸಕೋಟೆ ನಡುವಣ ರಾಷ್ಟ್ರೀಯ ಹೆದ್ದಾರಿ ಸಿಮೆಂಟ್ ಬಲ್ಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ (Accident).
ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಬಳಿ ಈ ಘಟನೆ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ದೊಡ್ಡಬಳ್ಳಾಪುರ ಮಾರ್ಗವಾಗಿ ದಾಬಸ್‌ಪೇಟೆ ಕಡೆಗೆ ತೆರಳುವ ವೇಳೆ ಟೈರ್ ಸ್ಪೋಟಗೊಂಡ ಪರಿಣಾಮ, ರಸ್ತೆ ನಡುವಿನ ವಿಭಜಕ ಮೇಲೆ ಸಾಗಿ ಸರ್ವೀಸ್ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇದನ್ನೂ ಓದಿ; ದೊಡ್ಡಬಳ್ಳಾಪುರದ ಸರ್ಕಾರಿ ಶಾಲೆಗಳಲ್ಲಿ 132 ಶಿಕ್ಷಕರ ಕೊರತೆ.. ಪೋಷಕರಲ್ಲಿ ಹೆಚ್ಚಾದ ಆತಂಕ
ಅದೃಷ್ಟವಶಾತ್ ಈ ವೇಳೆ ಯಾವುದೇ ವಾಹನಗಳು ಬರದೇ ಇದ್ದ ಕಾರಣ ಸಂಭವಿಸಬಹುದಾಗಿದ್ದ ಪ್ರಮಾದ ತಪ್ಪಿದೆ. ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.