ಡಿಸಿಎಂ ಡಿ.ಕೆ.ಶಿವಕುಮಾರ್ ಕೈ ಹಿಡಿದು ವಿಪಕ್ಷಗಳಿಗೆ ಕಿಚ್ಚು ಹೆಚ್ಚಿಸಿದ ಸಿಎಂ ಸಿದ್ದರಾಮಯ್ಯ

CM Siddaramaiah angers opposition parties by holding hands with DCM D.K.Shivakumar

ಮೈಸೂರು: ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಕೇಳುವುದಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ (Cmsiddaramaiah) ಸ್ಪಷ್ಟಪಡಿಸಿದರು.

ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸುರ್ಜೆವಾಲಾ ಅಭಿಪ್ರಾಯ ಪಡೆಯಲಿದ್ದಾರೆ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು.

ಬಿಜೆಪಿ ಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು

ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ ಎಂದು ಪ್ರಶ್ನಿಸಿದರು.

ರಾಜ್ಯಕ್ಕೆ ಹಂಚಿಕೆ ಮಾಡಿರುವ ನೀರನ್ನು ನಾವು ಸಂಪೂರ್ಣ ಬಳಕೆ ಮಾಡುತ್ತಿದೆ

ಕಾವೇರಿ ನ್ಯಾಯ ಮಂಡಳಿ ರಾಜ್ಯಕ್ಕೆ ಹಂಚಿಕೆ ಮಾಡಿರುವ ನೀರನ್ನು ನಾವು ಸಂಪೂರ್ಣ ಬಳಕೆ ಮಾಡುತ್ತಿದ್ದು ಅದು ನಮಗೆ ಸಾಲುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

2018 ರಲ್ಲಿ ನ್ಯಾಯಮಂಡಳಿ ಆದೇಶದ ಪ್ರಕಾರ 177.25 ಟಿ ಎಂ ಸಿ ನೀರನ್ನು ಹಂಚಿಕೆ ಮಾಡಿದೆ. ಒಂದು ವರ್ಷ ಬಿಟ್ಟರೆ, ಕಳೆದ ವರ್ಷ ತಮಿಳುನಾಡಿಗೆ 305 ಟಿ ಎಂ.ಸಿ ನೀರು ಕೊಟ್ಟಿದ್ದೇವೆ ಈ ಬಾರಿಯೂ ಕೊಡುತ್ತೇವೆ ಎಂದರು. ಈ ತಿಂಗಳಲ್ಲಿ 9 ಟಿಎಂಸಿ ನೀರು ಬಿಡಬೇಕಿದ್ದರೂ ನಾವು ಈ ತಿಂಗಳಲ್ಲಿ 22 ಟಿಎಂಸಿ ನೀರು ಒದಗಿಸಿದ್ದೇವೆ. ಕಡಿಮೆ ಕೊಟ್ಟಿರುವುದು ಒಂದೋ ಎರಡು ವರ್ಷ ಮಾತ್ರ. ಆದರೆ ಬಹುತೇಕ ಹೆಚ್ಚಿನ ನೀರು ತಮಿಳುನಾಡಿಗೆ ನೀಡಿದ್ದೇವೆ ಎಂದರು.

177.25 ಟಿಎಂಸಿ ನೀರು ಕೊಡಲು ನಮ್ಮ ತಕರಾರಿಲ್ಲ

177.25 ಟಿಎಂಸಿ ನೀರು ಕೊಡಲು ನಮ್ಮ ತಕರಾರಿಲ್ಲ. ಹೆಚ್ಚಾಗಿ ನೀರು ಕೊಡುತ್ತಿದ್ದೇವೆ. ಮೇಕೆದಾಟು ಬ್ಯಾಲೆನ್ಸಿಂಗ್ ರಿಸರ್ವಾಯರ್ ನ್ನು ಅದಕ್ಕಾಗಿಯೇ ಮಾಡಬೇಕೆಂಬ ಉದ್ದೇಶವಿದೆ. ಸಂಕಷ್ಟದ ವರ್ಷಗಳಲ್ಲಿ ಮಾತ್ರ ಹಂಚಿಕೆ ಮಾಡಬೇಕು ಎಂದರು.

ಶೇ.6% ರಷ್ಟು ನೀರಾವರಿ ಪ್ರದೇಶವನ್ನು ರಾಜ್ಯದಲ್ಲಿ ಹೆಚ್ಚಳ ಮಾಡಿದೆ

ಕೇಂದ್ರ ಸರ್ಕಾರದವರು ಮೇಕೆದಾಟು ಅಣೆಕಟ್ಟಿಗೆ ಅನುಮತಿ ಕೊಡಬೇಕು ಎಂದರು. ರಾಜ್ಯದಲ್ಲಿ ಮೇಕೆದಾಟು ಸಂಬಂಧಿಸಿದಂತೆ ಕಚೇರಿಯನ್ನು ತೆರೆಯಲಾಗಿದ್ದು ಭೂ ಸ್ವಾಧೀನಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನ್ಯಾಯಾಲಯದಲ್ಲಿಯೂ ಇದನ್ನು ಪ್ರಸ್ತುತಪಡಿಸಿದೆ. 6% ರಷ್ಟು ನೀರಾವರಿ ಪ್ರದೇಶವನ್ನು ರಾಜ್ಯದಲ್ಲಿ ಹೆಚ್ಚಳ ಮಾಡಿದ್ದು, ಇದಕ್ಕಾಗಿ 1ಕೋಟಿ ರೂ.ಗಳನ್ನು ಮಂಡ್ಯ ಕ್ಕೆ ವಿನಿಯೋಗಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ದ್ವಿಭಾಷಾ ಸೂತ್ರಕ್ಕೆ ಬದ್ಧ

ದ್ವಿಭಾಷಾ ಸೂತ್ರಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಕಾರಣ ಪತ್ತೆ ಹಚ್ಚಿ ಪರಿಹಾರಕ್ಕೆ ಕ್ರಮ

ಇತ್ತೀಚಿನ ದಿನಗಳಲ್ಲಿ ಯುವಸಮುದಾಯ ಹೃದಯಾಘಾತದಿಂದ ಮೃತಪಡುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಕಾರಣವೇನು ಎಂದು ಪತ್ತೆ ಹಚ್ಚಿ ಪರಿಹಾರ ಮಾರ್ಗೋಪಾಯಗಳನ್ನು ಅನುಸರಿಸಬೇಕು. ಇದಕ್ಕೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]