Don't oppose Cauvery Aarti, cooperate: D.K.Shivakumar appeals

ಕಾವೇರಿ ಆರತಿಗೆ ವಿರೋಧ ಮಾಡಬೇಡಿ, ಸಹಕಾರ ನೀಡಿ: ಡಿ.ಕೆ.ಶಿವಕುಮಾರ್ ಮನವಿ

ಮಂಡ್ಯ: “ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ. ಪ್ರತಿ ಕ್ಷೇತ್ರವನ್ನೂ ಗಮದಲ್ಲಿಟ್ಟುಕೊಂಡು ಕೆಲಸ‌ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆ ಒಂದಕ್ಕೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಅವರು ಹೇಳಿದರು.

92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಅವರು ಬಾಗಿನ ಅರ್ಪಿಸಿ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

“ನಮ್ಮ ಸರ್ಕಾರ ಎರಡು ವರ್ಷಗಳ ಅಧಿಕಾರವಧಿಯಲ್ಲಿ ಕಾವೇರಿ ಅಚ್ಚುಕಟ್ಟು ಪ್ರದೇಶವನ್ನು ಹೆಚ್ಚು ಮಾಡಿದೆ. 80 ವರ್ಷಗಳ ಹಳೆಯ ಕಾಲುವೆಗಳನ್ನು ದುರಸ್ತಿಗೊಳಿಸಲಾಗಿದೆ. ತಮಿಳುನಾಡಿಗೆ 9 ಟಿಎಂಸಿ ನೀರು ಹೋಗಬೇಕಿತ್ತು ಹೆಚ್ಚು ಮಳೆ ಬಂದ ಕಾರಣಕ್ಕೆ 30 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ. ಕಳೆದ ವರ್ಷವೂ 177 ಟಿಎಂಸಿಗಿಂತ ಹೆಚ್ಚುವರಿಯಾಗಿ 305 ಟಿಎಂಸಿ ನೀರು ಹರಿಸಲಾಗಿತ್ತು. 2022- 23 ರಲ್ಲಿ 400 ಟಿಎಂಸಿ ಹೆಚ್ಚುವರಿ ನೀರು ಹರಿಸಲಾಗಿದೆ.‌ ಮೂರು ವರ್ಷಗಳಿಗೊಮ್ಮೆ ನೀರು ಹರಿವಿನ ಪ್ರಮಾಣ ಕಡಿಮೆಯಾಗುವುದನ್ನು ಅಂಕಿಅಂಶಗಳನ್ನು ನೋಡಿದರೆ ತಿಳಿಯುತ್ತದೆ” ಎಂದರು.

ಕಾವೇರಿ ಆರತಿಗೆ ಸಹಕರಿಸಿ, ವಿರೋಧಿಸಬೇಡಿ

“ನಾನು ಭಕ್ತಿ, ವಿನಮ್ರತೆಯಿಂದ ಕಾವೇರಿ ಆರತಿ ವಿರೋಧ ಮಾಡುವವರಲ್ಲಿ ಅಡ್ಡಿ ಪಡಿಸಬೇಡಿ ಎಂದು‌ ಮನವಿ ಮಾಡುತ್ತೇನೆ. ವಿರೋಧ ಮಾಡಲೇಬೇಕು ಎಂಬ ಕಾರಣಕ್ಕೆ ವಿರೋಧಿಸಬೇಡಿ. ಸಹಕಾರ ‌ನೀಡಿ ಎಂದು ವಿನಮ್ರತೆಯಿಂದ ಕೇಳಿಕೊಳ್ಳುತ್ತೇನೆ. ನೀರಿಗೆ ಜಾತಿ, ಧರ್ಮವಿಲ್ಲ. ನೀರನ್ನು ಪೂಜೆ ಮಾಡುವುದು ನಮ್ಮ ಸಂಸ್ಕೃತಿ. ಪ್ರಯತ್ನಕ್ಕೆ ಸೋಲಾಗಬಹುದು ಪ್ರಾರ್ಥನೆಗೆ ಸೋಲಾಗುವುದಿಲ್ಲ. ಈ ರಾಜ್ಯದ ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಅನೇಕ ಅನುದಾನ ನೀಡುತ್ತಿದೆ. 19,700 ಕೋಟಿ ಹಣವನ್ನು ರೈತರಿಗೆ ನೀಡುವ ಉಚಿತ ವಿದ್ಯುಚ್ಛಕ್ತಿಗಾಗಿ ನಮ್ಮ ಸರ್ಕಾರ ನೀಡುತ್ತಿದೆ” ಎಂದರು.

“ಅಣೆಕಟ್ಟಿನಿಂದ ಅರ್ಧ ಕಿಲೋಮೀಟರ್ ದೂರದಲ್ಲಿ ಕಾವೇರಿ ಆರತಿ ಜಾಗ ನಿಗದಿ ಮಾಡಿದ್ದೇವೆ. ದೇವರಿಗೆ ಪ್ರಾರ್ಥನೆ ಮಾಡಲು ಅರ್ಜಿ ಹಾಕಬೇಕೆ? ಯಾರದ್ದಾದರೂ ಅನುಮತಿ ಬೇಕೆ? ಬೆಂಗಳೂರಿನಲ್ಲಿ ಜಲಮಂಡಳಿಯಿಂದ ನಡೆಸಿದ ಕಾವೇರಿ ಆರತಿಗೆ 25 ಸಾವಿರ ಜನ ಸೇರಿದ್ದರು. ಇಲ್ಲಿ ಕಾವೇರಿ ಆರತಿ ನಡೆಸಿದರೆ ಮಂಡ್ಯ, ಮೈಸೂರು ಭಾಗದ 1,500 ಜನರಿಗೆ ಉದ್ಯೋಗ ದೊರಕುತ್ತದೆ. ಬೃಂದಾವನ ಉದ್ಯಾನ ಅಭಿವೃದ್ಧಿ ಮಾಡಿದರೆ ಸ್ಥಳಿಯ 3 ಸಾವಿರ ಜನರಿಗೆ ಉದ್ಯೋಗ ದೊರೆಯುತ್ತದೆ” ಎಂದು ಹೇಳಿದರು.

“ಭಕ್ತ ಹಾಗೂ ಭಗವಂತನಿಗೆ ವ್ಯಾವಹಾರ ನಡೆಯುವ ಸ್ಥಳ ದೇವಸ್ಥಾನ. ಇಲ್ಲಿ ಜನ ಕುಳಿತುಕೊಳ್ಳಲು ಸ್ಥಳ ಮಾಡಲಾಗುತ್ತಿದೆ. ನೀವು ಏಕೆ ಮನೆಯಲ್ಲಿ ಪ್ರತಿದಿನ ದೇವರ ಪೂಜೆ ಮಾಡುತ್ತೀರಿ. ದೇವರು ಇಲ್ಲದಿದ್ದರೂ ಸೂರ್ಯನಿಗೆ ಏಕೆ ನಮಸ್ಕಾರ ಮಾಡುತ್ತೀರಿ. ನನ್ನ ಮಾತುಗಳು ನೇರ, ದಿಟ್ಟವಾಗಿ ಇರಬಹುದು ಯಾರೂ ಸಹ ಅನ್ಯತಾ ಭಾವಿಸಬಾರದು” ಎಂದು ಹೇಳಿದರು.

ಅತ್ಯುತ್ತಮ ಪ್ರವಾಸಿ ಕೇಂದ್ರ ನಮ್ಮ ಗುರಿ

“ಬೃಂದಾವನ ಉದ್ಯಾನವನ್ನು ಅತ್ಯಂತ ಹೆಚ್ಚು ಆಕರ್ಷಣೀಯಗೊಳಿಸುವುದು ನಮ್ಮ ಉದ್ದೇಶ. ಮೈಸೂರು ದಸರಾ ರೀತಿ ಅತ್ಯುತ್ತಮ ದೀಪಾಲಂಕಾರ ಮಾಡಲಾಗಿದೆ. ಅತ್ಯುತ್ತಮ ಕಾರಂಜಿಗಳನ್ನು ತರಿಸಲಾಗಿದೆ. ವಿದೇಶಗಳಿಂದ ಅಲಂಕಾರಿಕ‌ ಸಸ್ಯಗಳನ್ನು ತರಿಸಲಾಗಿದೆ.‌ ನಮ್ಮ ಮುಖ್ಯಮಂತ್ರಿಗಳು ಇದನ್ನು ಅತ್ಯುತ್ತಮ ಪ್ರವಾಸಿ ಕೇಂದ್ರ ಮಾಡಬೇಕು ಎಂದು ಸಂಕಲ್ಪ ಮಾಡಿದ್ದಾರೆ. ಇದಕ್ಕೆ ಖಾಸಗಿಯವರು ಬಂಡವಾಳ ಹೂಡಬಹುದು ಎಂದು ಆಹ್ವಾನ ಮಾಡಿದ್ದೇವೆ” ಎಂದು ಹೇಳಿದರು.

“ರಾಜ್ಯದ ಅಣೆಕಟ್ಟುಗಳ ಗೇಟ್ ಗಳನ್ನು ದುರಸ್ತಿಗೊಳಿಸಲು ಈಗಾಗಲೇ ತಾಂತ್ರಿಕ ಸಮಿತಿಯನ್ನು ರಚನೆ ಮಾಡಿದ್ದೇವೆ. ಆ ಸಮಿತಿಯಿಂದ ವರದಿ ತೆಗೆದುಕೊಂಡು ಹಂತ, ಹಂತವಾಗಿ ರಾಜ್ಯದ ಅಣೆಕಟ್ಟುಗಳ ಗೇಟ್ ದುರಸ್ತಿಯನ್ನು ಮಾಡಬೇಕು ಎಂದು ಮುಂದಾಗಿದ್ದೇವೆ. ಕೃಷ್ಣ ಟ್ರಿಬ್ಯೂನಲ್ ಅವಾರ್ಡ್ ಗೆ ಒಮ್ಮೆ ಮಹಾರಾಷ್ಟ್ರದವರು ಅಡ್ಡಗಾಲು ಹಾಕಿದ್ದರು. ಈಗ ಆಂಧ್ರ ಪ್ರದೇಶದವರು ಇದನ್ನು ಮುಂದೂಡಿಸಿದ್ದಾರೆ” ಎಂದರು.

“ಬಜೆಟ್ ಮಂಡಿಸಿ ಒಂದು ತಿಂಗಳಾಗಿದೆ ತಾಳ್ಮೆಯಿಂದ ಇದ್ದರೆ ಅನುದಾನ ಬಂದೇ ಬರುತ್ತದೆ. ನಾವು ಕೊಟ್ಟ ಮಾತನ್ನು ತಪ್ಪುವವರಲ್ಲ. ಆರ್ಥಿಕ ಇಲಾಖೆಯವರು ಆರ್ಥಿಕ ಶಿಸ್ತಿಗಾಗಿ ಹಂತ, ಹಂತವಾಗಿ ಹಣ ಬಿಡುಗಡೆ ಮಾಡುತ್ತಾರೆ. ಯಡಿಯೂರಪ್ಪ, ಕುಮಾರಸ್ವಾಮಿ, ಬೊಮ್ಮಾಯಿ ಕಾಲದಲ್ಲಿ ಬಜೆಟ್ ಗಿಂತ ಹೆಚ್ಚು ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದಾರೆ. ಅದಕ್ಕಾಗಿ ಗುತ್ತಿಗೆದಾರರು ಸ್ವಲ್ಪ ತಾಳ್ಮೆಯಿಂದ ವರ್ತನೆ ಮಾಡಬೇಕು. ನಮ್ಮನ್ನು ಟೀಕೆ ಮಾಡುವವರಿಗೆ ಮಾಧ್ಯಮಗಳು ಪ್ರಶ್ನೆ ಮಾಡಬೇಕು. ಮಂಡ್ಯ, ಮೈಸೂರು, ಬೆಂಗಳೂರು ಭಾಗಕ್ಕೆ ಅವರ ಕೊಡುಗೆ ಏನು ಎಂದು ಕೇಳಬೇಕು” ಎಂದು ಹೇಳಿದರು.

“ತುಂಗಾಭದ್ರಾ ಅಣೆಕಟ್ಟಿನ ಗೇಟ್ ಒಡೆದು ಹೋದಾಗ ಪ್ರತಿ ಪಕ್ಷಗಳು ಇಲ್ಲ ಸಲ್ಲದ ಟೀಕೆ ಮಾಡಿದರು. ಇಡೀ ಡ್ಯಾಂ ಒಡೆದು ಹೋಗುತ್ತದೆ ಎಂದು ಆರೋಪ ಮಾಡಿದರು. ನಾವು ತಕ್ಷಣ ತೀರ್ಮಾನ ತೆಗೆದುಕೊಂಡು ಆ ಗೇಟ್ ಅನ್ನು ದುರಸ್ತಿಗೊಳಿಸಿ ರೈತರ ಎರಡನೇ ಬೆಳೆಗೂ ನೀರು ನೀಡಿದ ಇತಿಹಾಸ ಈ ಕಾಂಗ್ರೆಸ್ ‌ಸರ್ಕಾರಕ್ಕಿದೆ. ಆ ಗೇಟ್ ದುರಸ್ತಿಗೆ ದುಡಿದ ಪ್ರತಿಯೊಬ್ಬ ಕಾರ್ಮಿಕನಿಗೂ ನಾನು ಹಾಗೂ ಸಿದ್ದರಾಮಯ್ಯ ಅವರು ಸನ್ಮಾನಿಸಿದೆವು. ಮುಖ್ಯ ಎಂಜಿನಿಯರ್‌ ಒಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿದೆವು” ಎಂದು ಹೇಳಿದರು.

ಕವನ ವಾಚಿಸಿದ ಡಿಸಿಎಂ

“ಕಾವೇರಿ ತುಂಬಿದ್ದಾಳೆ, ರೈತರು ನಲಿದಿದ್ದಾರೆ. ಕಾವೇರಿ ಒಲಿದಿದ್ದಾಳೆ ಬರ ಓಡಿಸಿದ್ದಾಳೆ. ನಮ್ಮೆಲ್ಲರ ಪ್ರಾರ್ಥನೆಗೆ, ನಿಮ್ಮೆಲ್ಲರ ಆರತಿಗೆ ಕಾವೇರಿ ತುಂಬಿ ಹರಿಯುತ್ತಿದ್ದಾಳೆ. ಕಾವೇರಿ ತುಂಬಿದರೆ ಶಾಂತಿ. ಕಾವೇರಿ ಹರಿದರೆ ಸಂತೃಪ್ತಿ” ಎಂದು ಕವನವನ್ನು ಡಿಸಿಎಂ ಶಿವಕುಮಾರ್ ಅವರು ವಾಚನ ಮಾಡಿದರು.

“ಮೈಸೂರು ರಾಜಮಾತೆ ತಮ್ಮ ಒಡವೆಗಳನ್ನು ಅಡವಿಟ್ಟು ಈ ಅಣೆಕಟ್ಟು ನಿರ್ಮಾಣಕ್ಕೆ ಮುನ್ನುಡಿ ಬರೆದರು. ಈ ಕಾರಣಕ್ಕೆ ಕಬ್ಬಿನ ಸಿಹಿ ಹಂಚಲಾಗುತ್ತಿದೆ, ಇಡೀ ಬೆಂಗಳೂರಿಗೆ, ತಮಿಳುನಾಡಿಗೆ ‌ನೀರು ನೀಡಲಾಗುತ್ತಿದೆ” ಎಂದು ಹೇಳಿದರು.

“ಕಾವೇರಿ ನಮ್ಮೆಲ್ಲರ ಜೀವಧಾರೆ, ಕೆಆರ್ ಎಸ್ ತುಂಬಿದರೆ ಸಂತೃಪ್ತಿಯ ಧಾರೆ, ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆ. ಹಿಮಾಲಯದಲ್ಲಿ ಹುಟ್ಟುವ ಗಂಗಾ ನದಿಯಷ್ಟೇ ನಮ್ಮ ರಾಜ್ಯದಲ್ಲಿ ಹುಟ್ಟುವ ಕಾವೇರಿ ನದಿ ಪವಿತ್ರವಾದುದು. ಹುಟ್ಟು ಸಾವು, ಪ್ರಕೃತಿ, ಭೂಮಿ ಯಾವುದು ನಮ್ಮ ಕೈಯಲ್ಲಿ ಇಲ್ಲ. ಎಲ್ಲವೂ ಭಗವಂತನ ಕೈಯಲ್ಲಿದೆ. ಇನ್ನೊಬ್ಬರ ಜೀವನದಲ್ಲಿ ಎಷ್ಟು ಬದಲಾವಣೆ ತರುತ್ತೇವೆ, ಸಂತೋಷ ಉಂಟು ಮಾಡುತ್ತೇವೆ ಎನ್ನುವುದರಲ್ಲಿ ನಮ್ಮ ಬದುಕಿನ ಸಾರ್ಥಕತೆ ಅಡಗಿದೆ” ಎಂದು ತಿಳಿಸಿದರು.

ಮೇಕೆದಾಟು ಯೋಜನೆ ಜಾರಿಗೆ ನಾವು ಸನ್ನದ್ಧ

ಕಾರ್ಯಕ್ರಮಕ್ಕೂ ಮುನ್ನ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮಾವಾರ ಉತ್ತರಿಸಿದರು.

ತಮಿಳುನಾಡಿಗೆ ಹೆಚ್ಚುವರಿ ನೀರು ಹರಿದು ಹೋಗುತ್ತಿದೆ ಹಾಗೂ ಅವರ ಅಚ್ಚುಕಟ್ಟು ಪ್ರದೇಶ ಹೆಚ್ಚಳವಾಗುತ್ತಿದೆ ಎಂದು ಕೇಳಿದಾಗ, ” ನಮ್ಮ ಅಚ್ಚುಕಟ್ಟು ಪ್ರದೇಶವೂ ಶೇ.6 ರಷ್ಟು ಹೆಚ್ಚಾಗಿದೆ. ಯೋಜನೆ ಜಾರಿಗೆ ನಾವು ಸನ್ನದ್ಧರಾಗಿದ್ದೇವೆ. ನ್ಯಾಯಾಲಯದಲ್ಲಿಯೂ ನಮಗೆ ನ್ಯಾಯ ಸಿಗುತ್ತದೆ. ಈಗಾಲೇ ಕನಕಪುರದಲ್ಲಿ ಮೇಕೆದಾಟು ಕಚೇರಿ ತೆರೆದಿದ್ದೇವೆ. ಭೂಸ್ವಾಧೀನ, ಮುಳುಗಡೆಯಾಗುವ ಅರಣ್ಯ ಭೂಮಿಗೆ ಪರ್ಯಾಯವಾಗಿ ಎಲ್ಲಿ ಭೂಮಿ ನೀಡಬೇಕು ಎಂದು ನಾವು ತಯಾರಾಗಿದ್ದೇವೆ” ಎಂದು ತಿಳಿಸಿದರು.

ಕಾವೇರಿ ಹಾಗೂ ಕಬಿನಿ‌ ನೀರಾವರಿ ಪ್ರದೇಶದಲ್ಲಿ ಅಭಿವೃದ್ಧಿಯಾಗಿಲ್ಲ ಎನ್ನುವ ಪ್ರಶ್ನೆಗೆ, “ಮಂಡ್ಯ ಜಿಲ್ಲೆಗೆ ನೀರಾವರಿ ಇಲಾಖೆಯಿಂದ 1 ಸಾವಿರ ಕೋಟಿ ಅನುದಾನ ನೀಡಿದ್ದೇವೆ. ಕಾಲುವೆ ಸ್ವಚ್ಚತೆ, ನೀರಿನ ಸೋರಿಕೆ ತಡೆಗಟ್ಟುವಿಕೆ, ಕೊನೆ ಪ್ರದೇಶಕ್ಕೆ ನೀರು ತಲುಪಿಸುವುದು ಹೀಗೆ ಅನೇಕ ಕೆಲಸಗಳನ್ನು ಮಾಡಿದ್ದೇವೆ. ಕಬಿನಿ ಪ್ರದೇಶಕ್ಕೆ ರೂ.400 ಕೋಟಿ ನೀಡಿದ್ದೇವೆ” ಎಂದರು.

ಕಾವೇರಿ ಆರತಿ ಘೋಷಣೆ ಮಾಡಿ ಒಂದು ವರ್ಷವಾಗಿರುವ ಬಗ್ಗೆ ಕೇಳಿದಾಗ, “ಒಂದಷ್ಟು ರೈತರು ಆತಂಕದಲ್ಲಿದ್ದಾರೆ. ಅವರು ಆತಂಕಕ್ಕೆ ಒಳಗಾಗುವ ಪ್ರಮೇಯವಿಲ್ಲ. ಪೂಜೆ ಹಾಗೂ ಪ್ರಾರ್ಥನೆ ಮಾಡುವುದರಲ್ಲಿ ಏನಿದೆ? ಪೂಜೆಯನ್ನು ಚಿಕ್ಕದಾಗಿಯೂ ದೊಡ್ಡದಾಗಿಯೂ ಮಾಡಬಹುದು. ಸುಮಾರು 1500 ಜನಕ್ಕೆ ಪ್ರತ್ಯಕ್ಷವಾಗಿ ಉದ್ಯೋಗ ದೊರೆಯುತ್ತದೆ” ಎಂದರು.

ಕೆಆರ್ ಎಸ್, ಕಬಿನಿಗೆ ಒಟ್ಟಾಗಿ ಬಾಗಿನ ಅರ್ಪಣೆ ಮಾಡುವಿರಾ ಎಂದು ಕೇಳಿದಾಗ, “ಈಗ ಕೆಆರ್ ಎಸ್ ಜೂನ್ ತಿಂಗಳಲ್ಲಿ ತುಂಬಿ ಇತಿಹಾಸದ ಪುಟ ಸೇರಿದೆ” ಎಂದರು.

ರಾಜಕೀಯ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರದ ಪ್ರತಿಷ್ಠಿತ ಬೃಹತ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಪುಣೆ, ನಾಗಪೂರ ಸೇರಿದಂತೆ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಬಿಜೆಪಿ (BJP) ಮತ್ತು ಶಿವಸೇನೆ (ಏಕನಾಥ ಸಿಂಧೆ ಬಣ) ದೊಡ್ಡ ಪ್ರಮಾಣದಲ್ಲಿ ಜಯಗಳಿಸಿದ್ದಾರೆ.

[ccc_my_favorite_select_button post_id="118518"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!