ಆಪರೇಷನ್ ಸಿಂಧೂರ; ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ವಾಯು ಸೇನಾ ಅಧಿಕಾರಿ ಹೇಳಿಕೆ..! ಕೈ ನಾಯಕರ ವಾಗ್ದಾಳಿ

Operation Sindhur; Air Force officer's statement puts Modi government in a dilemma..!

ನವದೆಹಲಿ: ಆಪರೇಷನ್ ಸಿಂಧೂ‌ರ (Operation Sindhur) ಬೆನ್ನಲ್ಲೇ ಏಕಾಏಕಿ ಕದನವಿರಾಮದ ಕುರಿತು ಈಗಾಗಲೇ ಇಕ್ಕಟ್ಟಿಗೆ ಸಿಲುಕಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ, ಭಾರತೀಯ ವಾಯು ಸೇನಾ ಅಧಿಕಾರಿ ಹೇಳಿಕೆ ಮತ್ತಷ್ಟು ಸಂಕಷ್ಟವನ್ನು ತಂದೊಡ್ಡಿದೆ.

ಹೌದು ಆಪರೇಷನ್ ಸಿಂಧೂ‌ರ ಕುರಿತು 24 ಗಂಟೆ ಮುಂಚಿತವಾಗಿಯೇ ಪಾಕಿಸ್ತಾನಕ್ಕೆ ಮಾಹಿತಿ ನೀಡಲಾಗಿತ್ತು ಎಂದು ವಿದೇಶಾಂಗ ಸಚಿವ ಜಯಶಂಕರ್ (JaiShankar) ಹೇಳಿಕೆ, ಪಾಕ್- ಭಾರತ ನಡುವೆ ಕದನ ವಿರಾಮಕ್ಕೆ ನಾನೇ ಕಾರಣ, ವ್ಯಾಪಾರ ಮಾಡುವೆ ಎಂದು ಎರಡು ರಾಷ್ಟ್ರ ಗಳ ನಡುವ ಕದನ ವಿರಾಮ ಘೋಷಣೆ ಮಾಡಿಸಿದೆ ಎಂದು 17 ಬಾರಿ ಅಮೇರಿಕಾ ಅಧ್ಯಕ್ಷ ಟ್ರಂಪ್ (Trump) ಹೇಳಿಕೆಯಿಂದ ಮೋದಿ ಸರ್ಕಾರ (Modi government) ಮುಜುಗರಕ್ಕೆ ಒಳಗಾಗಿದೆ.

ಇದರ ಬೆನ್ನಲ್ಲೇ ಭಾರತೀಯ ಜೆಟ್ ಯುದ್ಧ ವಿಮಾನಗಳನ್ನು ಪಾಕಿಸ್ತಾನ ಧ್ವಂಸಗೊಳಿಸಿದೆ ಎಂಬ ವಿಚಾರದ ಕುರಿತು ವಿಪಕ್ಷಗಳಿಗೆ ವಾಯು ಸೇನಾ ಅಧಿಕಾರಿ ಹೇಳಿಕೆ ಅಸ್ತ್ರ ನೀಡಿದೆ.

ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ಭಾರತೀಯ ಸೇನೆಯ ಯುದ್ಧದ ಬಗ್ಗೆ, ಕದನ ವಿರಾಮದ ಬಗ್ಗೆ ಮೋದಿ ಸರ್ಕಾರದ ಹಲವು ಗೊಂದಲದ ಹೇಳಿಕೆಯನ್ನು ಕಾಂಗ್ರೆಸ್ ಪ್ರಶ್ನಿಸಿತ್ತು. ಇದು ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ದೊಡ್ಡ ಸಂಘರ್ಷ ಏರ್ಪಟ್ಟಿತ್ತು.

ಇದರ ಬೆನ್ನಲ್ಲೇ ಆಪರೇಷನ್ ಸಿಂಧೂ‌ರ್ ಸಮಯದಲ್ಲಿ ಭಾರತೀಯ ವಾಯುಪಡೆಯು ಜೆಟ್ ಯುದ್ಧ ವಿಮಾನಗಳನ್ನು ಪಾಕಿಸ್ತಾನ ಧ್ವಂಸಗೊಳಿಸಿದೆ. ರಾಜಕೀಯ ನಾಯಕತ್ವ ನಿರ್ಬಂಧ ಹೇರಿದ್ದರಿಂದಲೇ ನಾವು ವಿಮಾನಗಳನ್ನು ಕಳೆದುಕೊಳ್ಳಬೇಕಾಯಿತು ಎಂದು ಇಂಡೋನೇಷ್ಯಾದಲ್ಲಿರುವ ಭಾರತೀಯ ವಾಯುಸೇನೆಯ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ.

ಈ ಹೇಳಿಕೆ ಕುರಿತಂತೆ ಕಾಂಗ್ರೆಸ್ ನಾಯಕ ಜೈ ರಾಮ್ ರಮೇಶ್ (Jairam Ramesh) ಸಮಾಜಿಕ ಜಾಲತಾಣದಲ್ಲಿ ಮೋದಿ ಸರ್ಕಾರವನ್ನು ಜಾಡಿಸಿದ್ದಾರೆ.

ಅರೇಷನ್ ಸಿಂಧೂರ ವೇಳೆ ಭಾರತ ಸೇನೆಗಾದ ನಷ್ಟದ ಕುರಿತು ಮೊದಲು ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಸಿಂಗಾಪುರದಲ್ಲಿ ಪ್ರಮುಖ ವಿಷಯ ಬಹಿರಂಗ ಮಾಡುತ್ತಾರೆ. ನಂತರ ಇಂಡೋನೇಷ್ಯಾದಿಂದ ಹಿರಿಯ ರಕ್ಷಣಾ ಅಧಿಕಾರಿಯೊಬ್ಬರು ಅವರನ್ನು ಅನುಸರಿಸುತ್ತಾರೆ.

ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಲು ಪ್ರಧಾನಿ ನರೇಂದ್ರ ಮೋದಿ ಯಾಕೆ ನಿರಾಕರಿಸುತ್ತಿದ್ದಾರೆ ಮತ್ತು ಸಂಸತ್ತಿನ ವಿಶೇಷ ಅಧಿವೇಶನದ ಬೇಡಿಕೆಯನ್ನು ಏಕೆ ತಿರಸ್ಕರಿಸಲಾಗಿದೆ ಎಂದು ಪೋಸ್ಟ್ ನಲ್ಲಿ ಅವರು ಕೇಳಿದ್ದಾರೆ.

ಇತ್ತೀಚೆಗಷ್ಟೇ ಇಂಡೋನೇಷ್ಯಾದಲ್ಲಿ ನಡೆದ ಸೆಮಿನಾರ್‌ವೊಂದರಲ್ಲಿ ಮಾತನಾಡಿದ ಭಾರತೀಯ ವಾಯುಸೇನೆಯ ಕ್ಯಾಪ್ಟನ್ ಶಿವಕುಮಾ‌ರ್, ಪಾಕಿಸ್ತಾನದ ಉಗ್ರರ ತಾಣಗಳನ್ನು ಗುರಿಯಾಗಿಸಿ ಮೇ 7, 2025ರ ರಾತ್ರಿ ನಡೆದ ಯುದ್ಧ ವಿಮಾನಗಳ ದಾಳಿ ವೇಳೆ ಪಾಕಿಸ್ತಾನ, ಭಾರತೀಯ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ಹೇಳಿರುವುದು ವರದಿಯಾಗಿದೆ.

ಇದಾದ ಬೆನ್ನಲ್ಲೇ ಕೈ ನಾಯಕರು ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]