BJP is talking about changing the Prime Minister; Santosh Lad explodes bomb

ಪ್ರಧಾನಮಂತ್ರಿ ಬದಲಾವಣೆಗೆ ಬಿಜೆಪಿಯವರು ಮಾತಾಡುತ್ತಿದ್ದಾರೆ; ಬಾಂಬ್ ಸಿಡಿಸಿದ ಸಂತೋಷ್ ಲಾಡ್

ಹುಬ್ಬಳ್ಳಿ: ಮೋದಿ (Modi) ನೇತೃತ್ವದ ಕೇಂದ್ರ ಸರ್ಕಾರದ ಫಾರಿನ್ ಪಾಲಿಸಿ ಫೇಲ್ ಆಗಿರುವ ಕಾರಣ ಬಿಜೆಪಿಗರು ಒಳಗೊಳಗೆ ಪ್ರಧಾನಮಂತ್ರಿ ಬದಲಾಗಬೇಕೆಂದು ಮಾತಾಡುತ್ತಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ (Santhosh Lad)ಹೊಸ ಬಾಂಬ್ ಸಿಡಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡುವ ಬಗ್ಗೆ ಕಾಂಗ್ರೆಸ್ ಶಾಸಕರು ಒತ್ತಾಯ ಮಾಡುತ್ತಿದ್ದಾರೆ ಎಂದು ಹೇಳುವ ಬಿಜೆಪಿಯವರು, ಪ್ರಧಾನಿ ಮೋದಿ ಅವರನ್ನ ಬದಲಾಯಿಸುವ ಬಗ್ಗೆ ಬಿಜೆಪಿ ಸಂಸದರು ಆಗ್ರಹಿಸುತ್ತಿರುವ ಬಗ್ಗೆ ಏಕೆ ಮಾತನಾಡುವುದಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಖರ್ಗೆ ಅವರು ಹೇಳಿರುವುದನ್ನ ಬಿಜೆಪಿ ಟೀಕೆ ಮಾಡುತ್ತಿದೆ, ಅವರು ಸೋನಿಯಾ ಗಾಂಧಿ ಅವರ ಮೇಲಿನ ಗೌರವಕ್ಕೆ ಹಾಗೆ ಹೇಳಿದ್ದಾರೆ. ಆದರೆ ಬಿಜೆಪಿ ಅವರು ದೇಶದಲ್ಲಿ ಸಂಭವಿಸಿದ ಉಗ್ರರ ದಾಳಿ ಬಗ್ಗೆ ಬಿಜೆಪಿ ಅವರನ್ನ ಕೇಳಿ, ಅದರ ಬಗ್ಗೆ ಚರ್ಚೆ ಮಾಡುವ ಬದಲು ಸಣ್ಣ ವಿಚಾರದ ಬಗ್ಗೆ ಟೀಕೆ ಮಾಡುತ್ತಾ, ಅಜೆಂಡಾ ಸೃಷ್ಟಿಸಿ ಜನರನ್ನು ದಿಕ್ಕು ತಪ್ಪಿಸುತ್ತಾ ಸಮಯ ಕಳೆಯುತ್ತಾರೆ‌.

ದೇಶದಲ್ಲಿ ಅನೇಕ ಸಮಸ್ಯೆಗಳು ಇದೆ ರೈತರಿಗೆ ಡಿಎಪಿ ಸಿಗುತ್ತಿಲ್ಲ, ಕಾಂಪ್ಲಿಕ್ಟ್ ಸಿಗುತ್ತಿಲ್ಲ… ಇದರ ಬಗ್ಗೆ ಚರ್ಚೆ ಆಗಬೇಕಲ್ವಾ.. ಆದರೆ ಅದರೆ ಬಿಜೆಪಿಯವರು ಇದರ ಬಗ್ಗೆ ಮಾತ್ರ ಮಾತನಾಡುತ್ತಿಲ್ಲ.

ಚೈನಾ ವಸ್ತುಗಳನ್ನು ಬಹುಷ್ಕರಿಸಲು ಪ್ರಧಾನಿಗಳು ಕರೆ ನೀಡುತ್ತಾರೆ. ಮತ್ತೆ ಇಂಪೋರ್ಟ್ ಮಾಡ್ತಾ ಇರೋದ್ ಯಾರು..? ಇದರ ಬಗ್ಗೆ ಕೇಳಬೇಕಲ್ವಾ..? ಇಂಪೋರ್ಟ್ ಮಾಡೋರ್ ಇವರೇ, ಮತ್ ಇವರೇ ಬಂದು ಚೈನಾ ಪ್ರಾಡಕ್ಟ್ ಬಳಸಬೇಡಿ ಅಂತ ಹೇಳ್ತಾರೆ. ಈಗ ಯಾಕ್ ಹೇಳ್ತೀರಿ..? 11 ವರ್ಷ ಏನ್ ಮಾಡ್ತಾ ಇದ್ರೀ..? ಚೈನಾ ಅಧ್ಯಕ್ಷರ ಕರೆತಂದು ತೊಟ್ಟಲಲ್ಲಿ ತೂಗಿದ್ ಯಾರು‌‌..? ಇವತ್ ಹೇಳ್ತಾರೆ ಚೈನಾ ವಸ್ತು ತಗೋಬೇಡಿ ಅಂತ ಹೇಳ್ತಾರೆ.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ 2g ಹಗರಣ ಕಲ್ಲಿದ್ದಲು ಹಗರಣದ ಬಗ್ಗೆ ಕಳೆದ 11 ವರ್ಷದ ಅವರೇ (ಬಿಜೆಪಿ) ಅಧಿಕಾರದಲ್ಲಿ ಇದ್ದರು. ಈಗ ಅವರೇ ವರದಿ ಕೊಟ್ಟಿದ್ದಾರೆ, ಏನ್ ವರದಿ ಕೊಟ್ಟಿದ್ದಾರೆ..? ಯಾವ ರೀತಿಯ ಹಗರಣ ನಡೆದಿಲ್ಲ ಎಂದು ವರದಿ ಕೊಟ್ಟಿದ್ದಾರೆ.

ಮತ್ತೆ ದೇಶಕಂಡ ಮಹಾನ್ ಆರ್ಥಿಕ ತಜ್ಞರನ್ನ ಭಯೋತ್ಪಾದಕ ಎಂದು ಬಿಜೆಪಿ ಅವರು ಅವಹೇಳನ ಮಾಡಿದ್ದರು, ಅದರ ಬಗ್ಗೆ ಕ್ಷಮೆನೂ ಕೇಳಿಲ್ಲ. ಹಾಲಿ ಪ್ರಧಾನ ಮಂತ್ರಿ ಸಾಹೇಬರು ಕೂಡ ಮನಮೋಹನ್ ಸಿಂಗ್ ಅವರನ್ನ ಟೆರರಿಸ್ಟ್ ಎಂದಿದ್ದರು. ದಾಖಲೆ ತೆಗೆಸು ನೋಡಲಿ.

ಈಗ 11 ವರ್ಷದ ಅವಧಿಯಲ್ಲಿ ಯಾರ್ ಯಾರಿಗೆ ಎಷ್ಟು ಎಷ್ಟು ಮೈನಿಂಗ್ ಕೊಟ್ಟಿದ್ದಾರೆ, ಯಾವುದು ಎಷ್ಟು ಇಂಪೋರ್ಟ್ ಆಗಿದೆ, ಕಲ್ಲಿದ್ದಲು ಎಷ್ಟು ಇಂಪೋರ್ಟ್ ಆಗಿದೆ ಇದರ ಬಗ್ಗೆ ವರದಿ ಕೊಡ್ತಾರಾ ಕೇಳಿ ಎಂದು ಬಿಜೆಪಿ ನಾಯಕರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!