DCM D.K.Shivakumar shocked Congress MLA Iqbal Hussain

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಶಾಕ್ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ರಣದೀಪ್ ಸಿಂಗ್ ಸುರ್ಜೆವಾಲ ಅವರು ಕಾಂಗ್ರೆಸ್ ಶಾಸಕರ ಜೊತೆ ಮಾಡುತ್ತಿರುವ ಸಭೆ ಬಗ್ಗೆ ಕೇಳಿದಾಗ, ಈ ಸಭೆ ಬಗ್ಗೆ ಯಾರಿಗೂ ಆತಂಕ ಬೇಡ. ರಾಷ್ಟ್ರಾದ್ಯಂತ ನಾವು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದು, ಸಂಘಟನೆ ಹಿನ್ನೆಲೆಯಲ್ಲಿ ಈ ಸಭೆ ಮಾಡಲಾಗುತ್ತಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಸಂಘಟನೆ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಶಕ್ತಿ ತುಂಬಲು ಹೇಳಿದ್ದಾರೆ.

ಖರ್ಗೆ ಅವರು, ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಕರೆಸಿ ನವದೆಹಲಿಯಲ್ಲಿ ಸಭೆ ಮಾಡಲಾಗಿದೆ. ಆಮೂಲಕ ಕಾಂಗ್ರೆಸ್ ಕಚೇರಿ ನಿರ್ಮಾಣದಿಂದ, ಪಕ್ಷ ಸಂಘಟನೆವರೆಗೂ ಎಲ್ಲಾ ಜವಾಬ್ದಾರಿಯನ್ನು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶಾಸಕರು ಇಲ್ಲದಿರುವ ಕ್ಷೇತ್ರಗಳ ಜವಾಬ್ದಾರಿಯನ್ನು ಒಬ್ಬೊಬ್ಬ ಶಾಸಕರಿಗೆ ನೀಡಲಾಗಿದೆ ಎಂದು ವಿವರಿಸಿದರು.

“ಸಂಘಟನೆ ಕುರಿತು ಮಾರ್ಗದರ್ಶನ ನೀಡಲು ರಣದೀಪ್ ಸಿಂಗ್ ಸುರ್ಜೆವಾಲ ಅವರು ಆಗಮಿಸಿದ್ದು, ಅವರ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದೆ. ಕೆಲವು ಶಾಸಕರ ಹೇಳಿಕೆಗಳ ಮಧ್ಯೆ ಪಕ್ಷದಲ್ಲಿ ಶಿಸ್ತು ತರಲು ಪ್ರಯತ್ನಿಸುತ್ತಿದ್ದಾರೆ. ಇದರ ಹೊರತಾಗಿ ನಾಯಕತ್ವ ಬದಲಾವಣೆ, ಸಚಿವಸಂಪುಟ ವಿಸ್ತರಣೆ ಕುರಿತು ಯಾವುದೇ ಚರ್ಚೆ ಇಲ್ಲ. ನಾವುಗಳು ಯಾರೂ ಈಗ ಆತುರದಲ್ಲಿ ಇಲ್ಲ. ನಮಗೆ 2028 ಬಹಳ ಮುಖ್ಯ. ಅದೇ ಮುಖ್ಯ” ಎಂದು ಸ್ಪಷ್ಟಪಡಿಸಿದರು.

ಇಕ್ಬಾಲ್ ಹುಸೇನ್ ಗೆ ನೋಟೀಸ್ ನೀಡುವೆ

ಇಕ್ಬಾಲ್ ಹುಸೇನ್ ನೀವು ಸಿಎಂ ಆಗುವುದಾಗಿ ಹೇಳಿದ್ದಾರೆ ಎಂದು ಕೇಳಿದಾಗ, “ಅವರಿಗೆ ನಾನೇ ನೋಟೀಸ್ ನೀಡುತ್ತೇನೆ. ನಾನು ಸಿಎಂ ಆಗುತ್ತೇನೆ ಎಂದು ಯಾರೂ ಹೇಳುವ ಅಗತ್ಯವಿಲ್ಲ. ಯಾರೊಬ್ಬರೂ ಮಾಧ್ಯಮಗಳ ಮುಂದೆ ಮಾತನಾಡುವಂತಿಲ್ಲ. ಇಕ್ಬಾಲ್ ಹುಸೇನ್, ಬಿ.ಆರ್ ಪಾಟೀಲ್, ಬಾಲಕೃಷ್ಣ ಯಾರೇ ಆಗಲಿ, ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಯಾರೂ ಮಾತನಾಡಬಾರದು. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರಿದ್ದು, ನಾವೆಲ್ಲರೂ ಅವರ ಕೈ ಬಲಪಡಿಸಬೇಕು” ಎಂದು ತಿಳಿಸಿದರು.

ಅಭಿವೃದ್ಧಿ ಯೋಜನೆಗಳಿಗಾಗಿ ಬಜೆಟ್ ನಲ್ಲಿ 1 ಲಕ್ಷ ಕೋಟಿ ಅನುದಾನ

ಬಿ.ಆರ್ ಪಾಟೀಲ್ ಅವರು ಅನುದಾನ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಕೇಳಿದಾಗ, “ರಾಜ್ಯ ಸರ್ಕಾರ ಬಜೆಟ್ ನಲ್ಲಿ ಅಭಿವೃದ್ಧಿ ಕೆಲಸಗಳಿಗಾಗಿಯೇ 1 ಲಕ್ಷ ಕೋಟಿ ಅನುದಾನ ಮೀಸಲಿಟ್ಟಿದೆ. 54 ಸಾವಿರ ಕೋಟಿ ಗ್ಯಾರಂಟಿ ಯೋಜನೆಗೆ, 19 ಸಾವಿರ ಕೋಟಿ ರೈತರಿಗೆ ವಿದ್ಯುತ್ ನೀಡಲು ವ್ಯಯಿಸಲಾಗುತ್ತಿದೆ. ಸಾಮಾಜಿಕ ಕಲ್ಯಾಣ ಯೋಜನೆ ಸೇರಿದಂತೆ ಇತರೆ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಇದು ಜನರು ಹಾಗೂ ಕ್ಶೇತ್ರದ ಅಭಿವೃದ್ಧಿಗಳಿಗೆ ಅಲ್ಲವೇ? ನಮ್ಮ ರಾಜ್ಯದಲ್ಲಿ ಆಗುತ್ತಿರುವ ಕಲ್ಯಾಣ ಯೋಜನೆಗಳು ಬೇರೆ ಯಾವುದೇ ರಾಜ್ಯದಲ್ಲಿ ಆಗುತ್ತಿಲ್ಲ” ಎಂದು ತಿಳಿಸಿದರು.

ಮಾಲೂರು ಶಾಸಕರಾದ ನಂಜೇಗೌಡರಿಗೆ ನೀವು ಕೆಎಂಎಫ್ ಸ್ಥಾನ ಕೊಡಿಸುವುದಾಗಿ ಹೇಳಿದ್ದೀರಿ ಎಂದು ಸ್ವತಃ ಶಾಸಕರೇ ಹೇಳಿದ್ದಾರೆ ಎಂದು ಕೇಳಿದಾಗ, “ರಾಜಕೀಯ ಬೆಳವಣಿಗೆಗಳೇ ಬೇರೆ, ಸಹಕಾರ ಕ್ಷೇತ್ರವೇ ಬೇರೆ. ಅದರ ಬಗ್ಗೆ ಈಗ ಚರ್ಚೆ ಮಾಡುವುದಿಲ್ಲ” ಎಂದು ತಿಳಿಸಿದರು.

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!