Doddaballapura: Innova car accident.. Death toll rises to 6..!

ದೊಡ್ಡಬಳ್ಳಾಪುರ: ಇನೋವಾ ಕಾರು ಅಪಘಾತ.. ಮೃತರ ಸಂಖ್ಯೆ 6ಕ್ಕೆ ಏರಿಕೆ..!

ದೊಡ್ಡಬಳ್ಳಾಪುರ: ಹಿಂದೂಪುರ – ಯಲಹಂಕ ನಡುವಣ ರಾಜ್ಯ ಹೆದ್ದಾರಿ ಮಾಕಳಿ ಬಳಿಯ ಮೇಲಿನ ನಾಯಕರಂಡಹಳ್ಳಿ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ (Accident) ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ದೊಡ್ಡಬಳ್ಳಾಪುರದ ಕರೇನಹಳ್ಳಿಯವರು ಇನೋವಾ ಕಾರಿನಲ್ಲಿ ಗೌರಿಬಿದನೂರು ಮಾರ್ಗವಾಗಿ ಮಂಚೇನಹಳ್ಳಿ ಬಳಿಯ ಭೀಮೇಶ್ವರ ದೇವಸ್ಥಾನಕ್ಕೆ ತೆರಳುವ ವೇಳೆ ಮೇಲಿನ ನಾಯಕರಂಡಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿತ್ತು.

ಮೃತರನ್ನು ದೊಡ್ಡಬಳ್ಳಾಪುರ ನಗರದ ದೇವರಾಜ ನಗರದ ನಿವಾಸಿ ಡಿ.ಎಂ.ಈಶ್ವರಪ್ಪ, ಕರೇನಹಳ್ಳಿ ನಿವಾಸಿ ಪುರುಷೋತ್ತಮ (62 ವರ್ಷ), ಕಾಳಪ್ಪ (69 ವರ್ಷ), ಕಾರಿನ ಚಾಲಕ‌ ನರಸಿಂಹ ಮೂರ್ತಿ (50 ವರ್ಷ) ಎಂದು ಗುರುತಿಸಲಾಗಿತ್ತು.

ಆದರೆ ಇದೀಗ ಬಂದ ಮಾಹಿತಿ ಅನ್ವಯ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದ ಕರೇನಹಳ್ಳಿ ನಿವಾಸಿ ಗೋಪಿನಾಥ್ (56 ವರ್ಷ) ಎನ್ನುವವರು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೋರ್ವ ವ್ಯಕ್ತಿ ಸಾವನಪ್ಪಿದ್ದಾರೆ ಎನ್ನಲಾಗಿದ್ದು, ಅಧಿಕೃತ ಮಾಹಿತಿ ತಿಳಿದುಬಂದಿಲ್ಲ.

8 ಜನರು ಇನೋವಾ ಕಾರಿನಲ್ಲಿ ನಗರದಿಂದ ಗೌರಿಬಿದನೂರು ಸಮೀಪದ ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟಕ್ಕೆ ಹೋಗುವಾಗ ಅಪಘಾತ ನಡೆದಿದೆ.

ಕಾರಿನಲ್ಲಿದ್ದ ಇನ್ನೂ ಒಬ್ಬರ ಸ್ಥಿತಿ ಗಂಬೀರವಾಗಿದ್ದು, ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬ ಪ್ರಯಾಣಿಕನಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಡಿವೈಎಸ್ಪಿ ರವಿ, ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ.

ರಾಜಕೀಯ

ಅಪೆಕ್ಸ್ ಬ್ಯಾಂಕ್ ಚುನಾವಣೆ ಕಣಕ್ಕಿಳಿದ ಎಂಎಲ್ಸಿ ಎಸ್ ರವಿ

ಅಪೆಕ್ಸ್ ಬ್ಯಾಂಕ್ ಚುನಾವಣೆ ಕಣಕ್ಕಿಳಿದ ಎಂಎಲ್ಸಿ ಎಸ್ ರವಿ

ಅಪೆಕ್ಸ್ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನದ ಚುನಾವಣೆಗೆ (Apex Bank elections) ಎಂಎಲ್ಸಿ ಎಸ್ ರವಿ ಮತ್ತು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಅವರು ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ನಲ್ಲಿ

[ccc_my_favorite_select_button post_id="118515"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!