ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ.
ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್ ಪಿ ರವಿ.ಪಿ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಹಾಗೂ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)