ಬೆಂಗಳೂರು: ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಸನ್ಮಾನಿಸಿ, ಅಭಿನಂದನೆ ಸಲ್ಲಿಸಿದರು.
ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ಬಿಜೆಪಿಯ ಘಟಕದ ವತಿಯಿಂದ ರಾಜ್ಯ ಬಿಜೆಪಿ ರೈತ ಮೋರ್ಚಾ ವತಿಯಿಂದ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಬಡ ದ ಬಮೂಲ್ ಚುನಾವಣೆಯಲ್ಲಿ ವಿಜೇತರಾದ ದೊಡ್ಡಬಳ್ಳಾಪುರದ ಬಿ.ಸಿ.ಆನಂದ್ ಕುಮಾರ್ ಹಾಗೂ ಸತೀಶ್ ಕಡತನಾಮಲೆ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.