Bengaluru Rural District to be renamed as Bengaluru North District: CMSiddaramaiah announces

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣವನ್ನು ಮಾಡಲಾಗಿದೆ ಎಂದು ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಘೋಷಿಸಿದರು.

ಸುದ್ದಿಗೋಷ್ಠಿಯ ಹೈಲೈಟ್ಸ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಶೇ90 ರಷ್ಟು ಬೆಂಗಳೂರು ವಿಭಾಗದ ವಿಷಯಗಳನ್ನೇ ಈ ವಿಶೇಷ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಂಡಿದ್ದೇವೆ.

3400 ಕೋಟಿ ಮೊತ್ತವನ್ನು ಮಂಜೂರು ಮಾಡಿದ್ದೇವೆ. 2050 ಕೋಟಿ ಬೆಂಗಳೂರು ಜಿಲ್ಲಾ ಭಾಗಕ್ಕೇ ಕೊಟ್ಟಿದ್ದೇವೆ.

ಎತ್ತಿನಹೊಳೆ ಯೋಜನೆಗೆ ಒಟ್ಟು 23251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ. ಮೂಲತಃ ಕುಡಿಯುವ ನೀರಿನ ಯೋಜನೆ ಇದಾಗಿದೆ. ಕೆರೆಗಳಿಗೆ ನೀರು ತುಂಬಿಸುವುದು ನಂತರದ ಆದ್ಯತೆ.

24.1 TMC ನೀರಿನಲ್ಲಿ ಕುಡಿಯುವ ನೀರಿಗೆ 14 TMC ಬೇಕಾಗಿದೆ. ಆದ್ದರಿಂದ ಮೊದಲು ಕುಡಿಯುವ ನೀರನ್ನು ಕೊಡುವ ಯೋಜನೆ ಮುಗಿಸಲು ಸಂಪುಟ ಸಭೆ ತೀರ್ಮಾನ. ಎರಡು ವರ್ಷಗಳಲ್ಲಿ ಉದ್ದೇಶಿತ ಜಿಲ್ಲೆ, ತಾಲ್ಲೂಕುಗಳಿಗೆ ನೀರು ಕೊಡ್ತೀವಿ.

9807ಕೋಟಿಮೊತ್ತದಲ್ಲಿ ಗ್ರಾವಿಟಿ ಮುಖ್ಯ ಕೆನಲ್ ನ‌ ಕೆಲಸ 85% ಮಗಿದಿದೆ.

ಹೆಚ್ಚುವರಿಯಾಗಿ ಇದಕ್ಕೆ 8000 ಕೋಟಿ ಬೇಕಾಗಿದೆ. ಬಾಕಿ ಉಳಿದಿರುವುದು 6000 ಚಿಲ್ಲರೆ ಕೋಟಿ.

ಒಟ್ಟು 9 ಜಿಲ್ಲೆಗಳ 75 ಲಕ್ಷ ಜನರಿಗೆ ಕುಡಿಯುವ ನೀರು ಕೊಡ್ತೀವಿ.

ಈ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಮುಂದಿನ‌ ಕ್ಯಾಬಿನೆಟ್ ನಲ್ಲಿ ನಿರ್ಣಯಿಸಲು ತೀರ್ಮಾನಿಸಲಾಗಿದೆ.

ಬೆಂಗಳೂರು ಜಿಲ್ಲೆಗಳ 31 ವಿಷಯಗಳು ಚರ್ಚೆಯಾಗಿ 2250 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ.

ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1125.25 ಕೋಟಿ ಮಂಜೂರು ಮಾಡಲಾಗಿದೆ.

ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೀರಾವರಿ ಯೋಜನೆ, ಕೆರೆ ತುಂಬಿಸುವ ಯೋಜನೆಗಳನ್ನೇ ಪ್ರಮುಖವಾಗಿ ಚರ್ಚಿಸಲಾಗಿದೆ.

ಹಿಂದುಳಿದ ವರ್ಗದ ಅಭ್ಯರ್ಥಿಗಳು IAS, IRS, IPS ಸೇರಿ ಸ್ಪರ್ಧಾತ್ಮಕ ಪರೀಕ್ಷಾ‌ ತರಭೇತಿಗೆ 10 ಕೋಟಿ ವೆಚ್ಚದ ಎರಡು ವಸತಿ ಶಾಲೆ ಬೆಂಗಳೂರಿನಲ್ಲಿ ನಿರ್ಮಿಸಲಾಗುವುದು.

ಬೆಂಗಳೂರು ಕೇಂದ್ರ ವಿವಿಗೆ “ಡಾ.ಮನಮೋಹನ್ ಸಿಂಗ್ ಬೆಂಗಳೂರು ಸಿಟಿ ವಿವಿ” ಎಂದು ಹೆಸರಿಡಲು ತೀರ್ಮಾನ.

PHC ಗಳಿಲ್ಲದ ಹೊಸ ತಾಲ್ಲೂಕುಗಳಲ್ಲಿ CHC ಗಳನ್ನು ಆರಂಭಿಸಲು ತೀರ್ಮಾನ ಮಾಡಿದ್ದೇವೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ” ಎಂದು ಬಾಗೇಪಲ್ಲಿಗೆ “ಭಾಗ್ಯನಗರ” ಎಂದು ಹೆಸರಿಡಲಾಗುವುದು.

ನಂದಿ ಬೆಟ್ಟದಲ್ಲಿ ನಡೆದ ಈ ಸಭೆಯು ಈ ವರ್ಷದ 14 ನೇ ಸಭೆಯಾಗಿದೆ.

2.ನಾವು ಆಡಳಿತವನ್ನು ಬೆಂಗಳೂರು ಕೇಂದ್ರಿತ ಎಂಬುದನ್ನು ತಪ್ಪಿಸಿ ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆಸುತ್ತಿದ್ದೇವೆ. ಮೊದಲಿಗೆ ಕಲ್ಬುರ್ಗಿಯಲ್ಲಿ, ಆ ನಂತರ ಮಲೈ ಮಹದೇಶ್ವರ ಬೆಟ್ಟದಲ್ಲಿ ಸಭೆ ನಡೆಸಿದ್ದೆವು.

ಮೂರನೆಯದಾಗಿ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಯನ್ನು ನಡೆಸುತ್ತಿದ್ದೇವೆ.

3.ಈ ಸಚಿವ ಸಂಪುಟ ಸಭೆಯಲ್ಲಿ ನಾವು 3400 ಕೋಟಿ ರೂಗಳಿಗೆ ಅನುಮೋದನೆ ನೀಡಿದ್ದೇವೆ. ಈ ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ- ಸೇತುವೆ ಮುಂತಾದ ವಿಷಯಗಳಿಗೆ ಆದ್ಯತೆ ನೀಡಿ ಅನುಮೋದನೆ ನೀಡಲಾಗಿದೆ.

ಈ ಸಭೆಯಲ್ಲಿ ಅತ್ಯಂತ ಮುಖ್ಯವಾಗಿ ಕುಡಿಯುವ ನೀರಿನ ಯೋಜನೆಗಳು ಅದರಲ್ಲೂ ಮುಖ್ಯವಾಗಿ ಎತ್ತಿನ ಹೊಳೆ ಯೋಜನೆಯ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಕಳೆದ ವರ್ಷವೇ ಎತ್ತಿನ ಹೊಳೆಯ ನೀರನ್ನು ಎತ್ತಿನ ಯಶಸ್ವಿಯಾಗಿ ಹರಿಸಲಾಯಿತು.

ಸಭೆಯಲ್ಲಿ ನಾವು ಎತ್ತಿನಹೊಳೆ ಯೋಜನೆಯನ್ನು ವೇಗಗೊಳಿಸಲು ಹಾಗೂ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಹಳ್ಳಿಗಳಿಗೆ ಹರಿಸಲು ನಿರ್ದೇಶನಗಳನ್ನು ನೀಡಲಾಯಿತು.

ಇದರಲ್ಲಿ ಬೆಂಗಳೂರು ವಿಭಾಗದ ಜಿಲ್ಲೆಗಳಿಗೆ ಸಂಬಂಧಿಸಿದಂತೆ 31 ವಿಷಯಗಳಿಗೆ 2525 ಕೋಟಿ ರೂಗಳನ್ನು ಒದಗಿಸುವ ಕಾಮಗಾರಿ/ ಯೋಜನೆಗಳ ಕುರಿತು ಚರ್ಚಿಸಿ ಅನುಮೋದನೆ ನೀಡಲಾಯಿತು.

ಶಿಕ್ಷಣಕ್ಕೆ- 1627.25 ಕೋಟಿ ರೂ ನೀಡಿದ್ದೇವೆ. ಇದರಲ್ಲಿ ಕಾಲೇಜು, ವಿಶ್ವವಿದ್ಯಾಲಯಗಳ ಮೂಲಭೂತ ಸೌಕರ್ಯ ಒದಗಿಸುತ್ತಿದ್ದೇವೆ.

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐಎಎಸ್, ಐಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ 10 ಕೋಟಿ ರೂ ವೆಚ್ಚದಲ್ಲಿ ಎರಡು ವಸತಿ ನಿಲಯ ನಿರ್ಮಿಸಲು ತೀರ್ಮಾನಿಸಿದ್ದೇವೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ 1125.25 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ ನೀಡಿದ್ದೇವೆ.

ನೀರಾವರಿ ಯೋಜನೆಗಳಿಗೆ – 1154 ಕೋಟಿ ನೀಡಿದ್ದೇವೆ. ಇದರಲ್ಲಿ 237 ಕೋಟಿ ರೂಗಳನ್ನು ಬೆಂಗಳೂರಿನ ತ್ಯಾಜ್ಯ ನೀರನ್ನು ಶುದ್ಧೀಕರಣ ಮಾಡಿ ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕಿನ 164 ಕೆರೆಗಳಿಗೆ ತುಂಬಿಸುವ ಯೋಜನೆಗೆ ಅನುಮೋದನೆ ನೀಡಿದ್ದೇವೆ.

ಈ ಭಾಗದಲ್ಲಿ ಅತಿ ಹೆಚ್ಚಾಗಿ ಗುಣಮಟ್ಟದ ಹೂ ಬೆಳೆಯುತ್ತಾರೆ. ಆದ್ದರಿಂದ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರವನ್ನು 10 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಅನುಮೋದನೆ ಮಾಡಲಾಗಿದೆ.

ಇದರ ಜೊತೆಗೆ ಚಿಕ್ಕಬಳ್ಳಾಪುರದಲ್ಲಿ ಎಪಿಎಂಸಿ ವತಿಯಿಂದ 141.5 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.

ಆರೋಗ್ಯ ಇಲಾಖೆ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 46 ಕೋಟಿ ರೂ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಹಾಗೂ 21.40 ಕೋಟಿ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿಯಲ್ಲಿನ ಮೆಡಿಕಲ್ ಕಾಲೇಜುಗಳಿಗೆ ಎಂಆರ್ ಐ ಯಂತ್ರಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಹಾಗೂ 56 ಕೋಟಿ ರೂ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರ ಪಿಎಚ್ ಸಿ, ಹಾಗೂ ಮಂಚೇನಹಳ್ಳಿಯ ಆಸ್ಪತ್ರೆಗಳನ್ನು ಉನ್ನತೀಕರಿಸಲು ಹಾಗೂ ಹೆಚ್ಚುವರಿ ಕಾಮಗಾರಿ ತೆಗೆದುಕೊಳ್ಳಲು ತೀರ್ಮಾನಿಸಿದ್ದೇವೆ.

ಒಟ್ಟಾರೆ 123 ಕೋಟಿ ರೂ ವೆಚ್ಚದಲ್ಲಿ ಆರೋಗ್ಯ ಸಂಬಂಧಿತ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.

ಈ ಸಭೆಯಲ್ಲಿ ನಾವು ಹಲವು ಐತಿಹಾಸಿಕ ತೀರ್ಮಾನಗಳನ್ನು ಕೈಗೊಂಡಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಿದ್ದೇವೆ.

ಬಾಗೇಪಲ್ಲಿ ಪಟ್ಟಣದ ಹೆಸರನ್ನು ಭಾಗ್ಯನಗರ ಎಂದು ಹೆಸರಿಡಲು ತೀರ್ಮಾನಿಸಿದ್ದೇವೆ.

ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾಲಯ ಎಂದು ಮರು ನಾಮೀಕರಣ ಮಾಡಲು ತೀರ್ಮಾನಿಸಿದ್ದೇವೆ.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಹೆಚ್ ಕೆ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ.

ಒಟ್ಟಾರೆ ಈ ಭಾಗದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು / ಕಾರ್ಯಕ್ರಮಗಳನ್ನು ತೆಗೆದುಕೊಳ್ಳಲು ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!