JDS protests against Congress government

ಕಾಂಗ್ರೆಸ್ ಸರ್ಕಾರದ ವಿರುದ್ಧ ಶಾಸಕರ ಬಂಡಾಯವೆಂದು ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ (Congress government) ಅತೀವ ಬ್ರಷ್ಟಾಚಾರದ ಮುಳುಗಿದ್ದು, ವಿಧಾನಸಭೆ ಕ್ಷೇತ್ರಗಳ ಅಭಿವೃದ್ಧಿಗೆ ಬಿಡಿಗಾಸು ಕೊಡಲು ಹಣವಿಲ್ಲದ ದುಸ್ಥಿತಿಯಲ್ಲಿ ಇದೆ ಎಂದು ಜೆಡಿಎಸ್ (JDS) ಆರೋಪಿಸಿದೆ.

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಂಗಳವಾರ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಕಾರ್ಯಕರ್ತರು, ಮುಖಂಡರು ಭಾಗವಹಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ, ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಹೇಳಿದರು.

ರಾಜ್ಯ ಸರ್ಕಾರದ ಆಡಳಿತದಲ್ಲಿನ ಭ್ರಷ್ಟಾಚಾರ, ಲಂಚಗುಳಿತನ ಹಾಗೂ ಆಡಳಿತ ವೈಫಲ್ಯದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ದಿವಾಳಿಯಾಗಿದೆ ಎಂದು ಬೇಸರಗೊಂಡು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರುಗಳೇ ಟೀಕಾ ಪ್ರಹಾರ ಮಾಡುತ್ತಿದ್ದು, ಇದೇ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲರ ಗಮನ ಸೆಳೆಯಲಾಗುವುದು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಆರ್ಥಿಕ ಅರಾಜಕತೆ ಸೃಷ್ಟಿಯಾಗಿದೆ ಎಂದು ಗಂಭೀರ ಆರೋಪ ಮಾಡಿದ ಅವರು; ಅನುದಾನವಿಲ್ಲದೆ ಶಾಸಕರು ಕ್ಷೇತ್ರಗಳ ಅಭಿವೃದ್ಧಿ ಮಾಡಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ. ಈ ಕಾರಣಕ್ಕೆ ಶಾಸಕರು ಬಂಡಾಯ ಎದ್ದಿದ್ದು, ಇದು ಸರ್ಕಾರದ ಅಧಃಪತನಕ್ಕೆ ಕಾರಣವಾಗಲಿದೆ. ಕಾಂಗ್ರೆಸ್ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದೆ ಎಂದು ಅವರು ಆರೋಪಿಸಿದರು.

ಈ ಪ್ರತಿಭಟನೆಯಲ್ಲಿ ಶಾಸಕ ಟಿ.ಎನ್. ಜವರಾಯಿಗೌಡ ರವರು, ಮಾಜಿ ಶಾಸಕ ಕೆ.ಎ.ತಿಪ್ಪೇಸ್ವಾಮಿ, ಪಕ್ಷದ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಶೈಲಾ ಸಂತೋಜಿ ರಾವ್, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಫ್ರೋಜ್ ಬೇಗ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಧ್ಯಕ್ಷ ಟಿ.ಆರ್. ತುಳಸಿರಾಮ್, ಉತ್ತರ ಲೋಕಸಭೆ ಕ್ಷೇತ್ರದ ಅಧ್ಯಕ್ಷ ಎ.ಎಂ.ಪ್ರವೀಣ್ ಕುಮಾರ್, ಕೇಂದ್ರ ಲೋಕಸಭೆ ಕ್ಷೇತ್ರದ ಅಧ್ಯಕ್ಷ ನಾಗೇಶ್ವರರಾವ್, ಬೆಂಗಳೂರು ನಗರ ಕಾರ್ಯಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಮಹಾಪ್ರಧಾನ ಕಾರ್ಯದರ್ಶಿ ಎಸ್.ರಮೇಶ, ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ತಾರಾ ಲೋಕೇಶ್ ಹಾಗೂ ಎಲ್ಲಾ ವಿಧಾನಸಭೆ ಕ್ಷೇತ್ರಗಳ ಪಕ್ಷದ ಅಧ್ಯಕ್ಷರು, ವಿವಿಧ ವಿಭಾಗಗಳ ಅಧ್ಯಕ್ಷರು ಸೇರಿದಂತೆ ಅನೇಕ ಮುಖಂಡರುಗಳು ಭಾಗವಹಿಸಿದ್ದರು.

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!