People's lives are better due to guarantee schemes: Minister Santosh Lad

ಗ್ಯಾರಂಟಿ ಯೋಜನೆಗಳಿಂದ ಜನರ ಜೀವನ ಉತ್ತಮ: ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: ದೇಶದ ದುಡಿಯುವ ವರ್ಗದಲ್ಲಿ ಶೇ.90 ರಷ್ಟು ಕಾರ್ಮಿಕರು ಅಸಂಘಟಿತ ವಲಯದಲ್ಲಿದ್ದಾರೆ. ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನ ಉತ್ತಮವಾಗಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್. ಲಾಡ್(Santosh lad) ಹೇಳಿದರು‌.

ಬೆಂಗೇರಿಯ ಸಂತೆ ಮೈದಾನದಲ್ಲಿ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ, ಧಾರವಾಡ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಧಾರವಾಡ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ ವಿತರಣಾ ಮತ್ತು ಅರಿವು ಮೂಡಿಸುವ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಅಸಂಘಟಿತ ಕಾರ್ಮಿಕರ ಜೀವನ ಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಜನರಿಗೆ ಯೋಜನೆಗಳನ್ನು ತಲುಪಿಸಲು ಕಳೆದ 2 ವರ್ಷಗಳಿಂದ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ.

ಕೇಂದ್ರ ಸರ್ಕಾರದ ಇ – ಶ್ರಮ ಪೋರ್ಟಲ್‌‌‌ನಲ್ಲಿ ಸುಮಾರು 1.80 ಕೋಟಿಗೂ ಅಧಿಕ ಜನರು ನೋಂದಣಿಯಾಗಿದ್ದಾರೆ. ಸರಿಸುಮಾರು 1.60 ಕೋಟಿ ಅಸಂಘಟಿತ ವಲಯದ ಕುಟುಂಬಗಳು ನೋಂದಣಿಯಾಗಿವೆ. ಅದರಲ್ಲಿ ಸುಮಾರು 35 ರಿಂದ 40 ಲಕ್ಷ ಕಾರ್ಮಿಕರು ಕಟ್ಟಡ ಕಾರ್ಮಿಕರಿದ್ದಾರೆ. ಸಾರಿಗೆ ಕಾರ್ಮಿಕರನ್ನು ಸಹ ಅಸಂಘಟಿತ ವಲಯಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ ಚಾಲಕರು, ನಿರ್ವಾಹಕರು ಮತ್ತು ಕ್ಲೀನರಗಳು ನೋಂದಣಿ ಮಾಡಿಕೊಳ್ಳಬಹುದು. ಧಾರವಾಡ ಜಿಲ್ಲೆಯಲ್ಲಿ ಈವರೆಗೆ 43 ಅಪಘಾತ ಪ್ರಕರಣಗಳಲ್ಲಿ ಒಟ್ಟು ರೂ.1.82 ಲಕ್ಷ ಪರಿಹಾರ ವಿತರಿಸಲಾಗಿದೆ. ಅಲ್ಲದೇ 29 ವಿದ್ಯಾರ್ಥಿಗಳಿಗೆ ರೂ.2.90 ಲಕ್ಷ ಶೈಕ್ಷಣಿಕ ಧನಸಹಾಯ ಪಾವತಿ ಮಾಡಲಾಗಿದೆ. ಸಿನಿ ಬಿಲ್ ಸಹ ಸಿದ್ಧವಾಗಿದೆ. 4 ಕೋಟಿಗೂ ಅಧಿಕ ಸಿನಿಮಾ ಟಿಕೆಟ್ ಗಳು ಮಾರಾಟವಾಗುತ್ತವೆ. ಸಿನಿಮಾ ಟಿಕೆಟ್ ಮೇಲೆ ಶೇ.1ರಿಂದ 2 ರಷ್ಟು ಸೆಸ್ ಹಾಕುವ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದರು.

ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ

ಈ ಯೋಜನೆಯಡಿ ಚಾಲಕ, ನಿರ್ವಾಹಕ, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕಿಂಗ್ ಗುಮಾಸ್ತ, ನಗದು ಗುಮಾಸ್ತ, ಡಿಪೋ ಗುಮಾಸ್ತ, ಸಮಯ ಪಾಲಕ, ಕಾವಲುಗಾರ ಅಥವಾ ಪರಿಚಾರಕ, ಮೋಟಾರು ಗ್ಯಾರೇಜುಗಳಲ್ಲಿ ಟೈರ್ ಜೋಡಿಸುವ ಮತ್ತು ಬೇರ್ಪಡಿಸುವ ಘಟಕಗಳಲ್ಲಿ ಲೋಡಿಂಗ್ ಮತ್ತು ಅನ್ ಲೋಡಿಂಗ್ ಕಾರ್ಮಿಕರು, ಪಂಚ‌ರ್ ದುರಸ್ತಿ ಮಳಿಗೆಗಳಲ್ಲಿ, ವೀಲ್ ಬ್ಯಾಲೆನ್ಸಿಂಗ್ ಮತ್ತು ಅಲೈನ್ವೆಂಟ್ ಘಟಕಗಳಲ್ಲಿ, ನೀರಿನಿಂದ ಸ್ವಚ್ಛಗೊಳಿಸುವ ಘಟಕಗಳಲ್ಲಿ ಕೆಲಸ ಮಾಡುವವರು, ಮೋಟಾರು ವಾಹನ ಹೊರಕವಚ ನಿರ್ಮಾಣ ಘಟಕಗಳಲ್ಲಿ, ಟಿಂಕರಿಂಗ್, ಎಲೆಕ್ನಿಕಲ್ ಹಾಗೂ ಎಸಿ ಘಟಕ ಇತ್ಯಾದಿ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸುಮಾರು 40 ಲಕ್ಷ ಕಾರ್ಮಿಕರು ಒಳಗೊಂಡಿರುತ್ತಾರೆ. ಈವರೆಗೆ ರಾಜ್ಯಾದ್ಯಂತ 10,50,095 ಕಾರ್ಮಿಕರು ನೋಂದಣಿಯಾಗಿದ್ದು, ಧಾರವಾಡ ಜಿಲ್ಲೆಗೆ ಸಂಬಂಧಿಸಿದಂತೆ 1,51,675 ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ

ಗಿಗ್ ಕಾರ್ಮಿಕರ ಕಲ್ಯಾಣಕ್ಕಾಗಿ 33 ಸಭೆಗಳನ್ನು ಮಾಡಲಾಗಿದೆ‌. ಸ್ವಿಗ್ಗಿ, ಜೊಮ್ಯಾಟೊ, ರ‌್ಯಾಪಿಡೋ ಸೇರಿದಂತೆ ವಿವಿಧ ಇ ಕಾಮರ್ಸ್ ವಲಯದ ಕಾರ್ಮಿಕರಿಗೆ ಯೋಜನೆ ರೂಪಿಸಲಾಗುತ್ತಿದೆ. ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ತಲಾ ರೂ. 2 ಲಕ್ಷ ಅಪಘಾತ ಪರಿಹಾರ ಹಾಗೂ ಜೀವ ವಿಮಾ ಸೌಲಭ್ಯ ಸೇರಿದಂತೆ ಒಟ್ಟು ರೂ. 4 ಲಕ್ಷ ವಿಮಾ ಸೌಲಭ್ಯ ಒದಗಿಸಲಾಗುವುದು. ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.

ಈವರೆಗೆ 30,266 ಕಾರ್ಮಿಕರನ್ನು ನೋಂದಾಯಿಸಲಾಗಿದ್ದು, ಧಾರವಾಡ ಜಿಲ್ಲೆಗೆ ಸಂಬಂಧಿಸಿದಂತೆ 1,377 ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ಅವರು ಬಣ್ಣಿಸಿದರು.

ಕಂಪನಿಗಳು ನೌಕರರಿಗೆ ಗ್ರ್ಯಾಚುಯಿಟಿ ನೀಡುವುದು ಕಡ್ಡಾಯ

20 ಕ್ಕೂ ಅಧಿಕ ನೌಕರರನ್ನು ಹೊಂದಿರುವ ಕಂಪನಿಗಳು ಗ್ರ್ಯಾಚುಯಿಟಿ ನೀಡುವುದು ಕಡ್ಡಾಯವಾಗಿದೆ‌. ಈಗಾಗಲೇ 6 ಸಾವಿರ ಕಂಪನಿಗಳು ನೋಂದಣಿಯಾಗಿವೆ‌. ಸುಮಾರು 65 ಲಕ್ಷ ಕಾರ್ಮಿಕರಿಗೆ ಉಪಯೋಗವಾಗಿದೆ. ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಯಡಿ 91 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದೆ. ಸುಮಾರು 40 ಲಕ್ಷ ಕಾರ್ಮಿಕರಿದ್ದಾರೆ ಎಂದು ಅಂದಾಜಿಸಲಾಗಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ 25,45,607 ಕಾರ್ಮಿಕರು ನೋಂದಣಿಯಾಗಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ 1,12,295 ಕಾರ್ಮಿಕರು ನೋಂದಣಿಯಾಗಿದ್ದು, ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತಿದೆ ಎಂದು ಹೇಳಿದರು.

ಆಶಾದೀಪ ಯೋಜನೆಯನ್ನು ಜಾರಿ

ಖಾಸಗಿ ವಲಯದ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಉದ್ಯೋಗ ದೊರಕಿಸುವ ಉದ್ದೇಶದಿಂದ ಆಶಾದೀಪ ಯೋಜನೆಯನ್ನು ಜಾರಿಗೆ ತರಲಾಗಿದೆ. ಪರಿಶಿಷ್ಟ ಜಾತಿ, ಪಂಗಡಗಳ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಜೀವನ ಮಟ್ಟವನ್ನು ಸುಧಾರಿಸಲು ಈ ಯೋಜನೆ ಸಹಾಯಕಾರಿಯಾಗಿದೆ.

ಇಎಸ್ಐ, ಇಪಿಎಫ ವಂತಿಕೆ ಮರುಪಾವತಿ, ಅಪ್ರೆಂಟಿಸ್ ತರಬೇತಿ ಪಡೆಯುವವರಿಗೆ ಶಿಷ್ಯವೇತನ, ಖಾಯಂಗೊಂಡ ನಂತರ ವೇತನ ಮರುಪಾವತಿ ಸೌಲಭ್ಯಗಳು ಈ ಯೋಜನೆಯಲ್ಲಿವೆ. ಮಹಿಳೆಯರ ರಕ್ಷಣೆ ಹಿತದೃಷ್ಟಿಯಿಂದ ಡೊಮೆಸ್ಟಿಕ್ ಬಿಲ್ ಸಿದ್ಧವಾಗಿದೆ ಎಂದರು.

ಪಂಚ ಗ್ಯಾರಂಟಿ ಯೋಜನೆಗಳಿಗೆ 60 ಸಾವಿರ ಕೋಟಿ ವ್ಯಯ

ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ‌್ಷ್ಮಿ, ಗೃಹ ಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳು ರಾಜ್ಯದಲ್ಲಿ ಸಮರ್ಥವಾಗಿ ಜಾರಿಗೆ ಬಂದಿವೆ. ಈ ಯೋಜನೆಗಳಿಗಾಗಿ ಪ್ರತಿ ವರ್ಷ ಸುಮಾರು 60 ಸಾವಿರ ಕೋಟಿ ಹಣವನ್ನು ವ್ಯಯಿಸಲಾಗುತ್ತಿದೆ. 5 ವರ್ಷಕ್ಕೆ 3 ಕೋಟಿ ಹಣ ಬಳಕೆಯಾಗಲಿದೆ.

ಅಂಗವಿಕಲರ ಮಾಸಾಶನ, ವೃದ್ಧಾಪ್ಯ ವೇತನ ಸಹ ಒದಗಿಸಲಾಗುತ್ತಿದೆ. ಈ ಯೋಜನೆಗಳಿಂದ ಪ್ರತಿ ಮನೆಗೆ 8 ರಿಂದ 10 ಸಾವಿರ ಹಣ ತಲುಪಲಿದೆ. ಕರ್ನಾಟಕವು ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ವಿವರಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಬೇಕಿದೆ. ಅಂಬೇಡ್ಕರ್ ಅವರು ಸಾಮಾಜಿಕ ಪ್ರಜಾಪ್ರಭುತ್ವ, ಭ್ರಾತೃತ್ವ ಬಗ್ಗೆ ತಿಳಿ ಹೇಳಿದ್ದಾರೆ. ನಮ್ಮೆಲ್ಲರ ಮೇಲೆ ಸಾಕಷ್ಟು ಜವಾಬ್ದಾರಿಗಳಿವೆ. ಪ್ರಶ್ನೆ ಕೇಳುವ ಗುಣವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ನಮ್ಮ ಹಕ್ಕುಗಳಿಗಾಗಿ ಹೋರಾಡಬೇಕಿದೆ. ರಾಷ್ಟ್ರ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕು. ಬಡತನ ನಿರ್ಮೂಲನೆ ಮಾಡಲು ಮುಂದಾಗಬೇಕಿದೆ ಎಂದು ತಿಳಿಸಿದರು.

ಶಾಸಕರಾದ ಮಹೇಶ ಟೆಂಗಿನಕಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ತಲುಪಬೇಕು. ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಯೋಜನೆಗಳನ್ನು ರೂಪಿಸಿ, ಕಾರ್ಯರೂಪಕ್ಕೆ ತರಲಾಗಿದೆ. ದಿನಪತ್ರಿಕೆ ವಿತರಿಕರಿಗೂ ಸಹ ಯೋಜನೆ ಜಾರಿಗೊಳಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ಯೋಜನೆಗಳು ತಲುಪಬೇಕು ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಯೋಜನೆಗಳಲ್ಲಿ ನೋಂದಣಿಯಾಗಿದ್ದ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ ಹಾಗೂ ಪರಿಹಾರ ಧನದ ಚೆಕ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷರಾದ ಸೈಯದ್ ಅಜೀಮ್‌‌ಪೀರ ಎಸ್. ಖಾದ್ರಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶಾಕೀರ್ ಸನದಿ, ಮಾಜಿ ಸಚಿವರಾದ ಎ.ಎಂ.ಹಿಂಡಸಗೇರಿ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ರುದ್ರೇಶ ಘಾಳಿ, ಎಸ್.ಆರ್.ಪಾಟೀಲ, ಸಹಾಯಕ ಕಾರ್ಮಿಕ ಆಯುಕ್ತರಾದ ಸಚಿನ ಹಳೇಮನಿ, ಮುಖಂಡರಾದ ವಸಂತ ಲದ್ವಾ, ಅನಿಲಕುಮಾರ ಪಾಟೀಲ, ಮಹೇಂದ್ರ ಸಿಂಘಿ, ಸತೀಶ ಮೆಹರವಾಡೆ ಸೇರಿದಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ಗಿರೀಶ ಅಕ್ಕೇರಿ ಮತ್ತು ತಂಡದವರು ಪ್ರಾರ್ಥಿಸಿ, ನಾಡಗೀತೆ ಪ್ರಸ್ತುತ ಪಡಿಸಿದರು. ಕಾರ್ಮಿಕ ಇಲಾಖೆಯ ಆಯುಕ್ತರಾದ ಡಾ.ಎಚ್.ಎನ್. ಗೋಪಾಲಕೃಷ್ಣ ಸ್ವಾಗತಿಸಿದರು. ಕಾರ್ಮಿಕ ಇಲಾಖೆಯ ಜಂಟಿ ಕಾರ್ಮಿಕ ಆಯುಕ್ತರಾದ ಡಾ.ಎಸ್.ಬಿ.ರವಿಕುಮಾರ ಅವರು ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಗೌರಿ ಹಾಗೂ ಮಾಧುರಿ ನಿರೂಪಿಸಿದರು. ಬೆಳಗಾವಿ ಪ್ರಾದೇಶಿಕ ವಿಭಾಗದ ಉಪ ಕಾರ್ಮಿಕ ಆಯುಕ್ತರಾದ ಡಿ‌.ಜಿ.ನಾಗೇಶ ವಂದಿಸಿದರು.

ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತ ಸಚೀನ ಹಳೆಮನಿ, ಕಾರ್ಮಿಕ ಅಧಿಕಾರಿಗಳಾದ ಅಕ್ಬರ ಮುಲ್ಲಾ, ಮಾರಿಕಾಂಭ ಹುಲಕೋಟಿ, ಹಿರಿಯ ಕಾರ್ಮಿಕ ನಿರೀಕ್ಷಕಾರಾದ ಅಕ್ರಮ ಅಲ್ಲಾಪುರ, ಅಶೋಕ ಒಡೆಯರ್, ರಜನಿ ಹಿರೇಮಠ, ಸಂಗೀತಾ ಬೆನಕೊಪ್ಪ, ಮೀನಾಕ್ಷಿ ಸಿಂದಿಹಟ್ಟಿ,ಇತರರು ಇದ್ದರು.

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!